ಕೇಳ್ಳೋರಿಲ್ಲ ಮಹಿಳಾ ಸಾಂತ್ವನ ಕೇಂದ್ರದ ಗೋಳು!

ಸೌಲಭ್ಯಗಳು ಮರೀಚಿಕೆ

Team Udayavani, May 13, 2019, 1:10 PM IST

13-MAY-18

ಸಿರುಗುಪ್ಪ; ನಗರದಲ್ಲಿರುವ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರ.

ಸಿರುಗುಪ್ಪ: ನಗರದ ಸಿಡಿಪಿಒ ಕಚೇರಿ ಪಕ್ಕದಲ್ಲಿರುವ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ಕಟ್ಟಡವು ಶಿಥಿಲಗೊಂಡಿರುವುದು ಒಂದು ಕಡೆಯಾದರೆ, ಮೂಲ ಸೌಕರ್ಯಗಳ ಕೊರತೆಯಿಂದ ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಮತ್ತು ಕೇಂದ್ರಕ್ಕೆ ಬರುವ ಜನರಿಗೆ ತೊಂದರೆಯಾಗುತ್ತಿದೆ.

ಸುಮಾರು 40ವರ್ಷಗಳ ಹಿಂದಿನ ಕಟ್ಟಡದಲ್ಲಿ ಕಳೆದ ಏಳು ವರ್ಷಗಳಿಂದ ಮಹಿಳಾ ಸಾಂತ್ವನ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಕೌಟುಂಬಿಕ ಸಮಸ್ಯೆಗಳನ್ನು ಹೊತ್ತು ಬರುವ ಮಹಿಳೆಯರಿಗೆ ಸಾಂತ್ವನ ನೀಡುವ ಉದ್ದೇಶದಿಂದ ಸೆಂಟ್ರಲ್ ಫಾರ್‌ ರೂರಲ್ ಡೆವಲಪ್‌ಮೆಂಟ್ ಸಂಸ್ಥೆಯಿಂದ ಈ ಕೇಂದ್ರವನ್ನು ನಡೆಸುತ್ತಿದ್ದಾರೆ.

ಈ ಕಟ್ಟಡದ ಮೇಲ್ಛಾವಣಿಯ ಸಿಮೆಂಟ್ ಪದರು ಆಗಾಗ ಉದುರಿ ಬೀಳುತ್ತಿರುವುದರಿಂದ ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಮತ್ತು ದೂರುದಾರರ ಮೇಲೆ ಯಾವ ಕ್ಷಣದಲ್ಲಿ ತಮ್ಮ ಮೇಲೆ ಸಿಮೆಂಟ್ ಪದರು ಬೀಳುತ್ತದೆಯೋ ಎನ್ನುವ ಆತಂಕ ಮನೆ ಮಾಡಿದೆ. ಅನಾಹುತಗಳಾಗುವುದಕ್ಕಿಂತ ಮುಂಚೆ ಕೇಂದ್ರವನ್ನು ಬೇರೆಡೆ ಸ್ಥಳಾಂತರ ಮಾಡಬೇಕಾಗಿದೆ.

ಇರುವ ಒಂದು ಕೊಠಡಿಯೊಳಗೆ ಸಿಡಿಪಿಒ ಕಚೇರಿಗೆ ಸಂಬಂಧಿಸಿದ ಶುಚಿ ನ್ಯಾಪಕಿನ್‌ ಬಾಕ್ಸ್‌ಗಳು ಮತ್ತು ಹಾಳಾದ ಪೀಠೊಪಕರಣ ಶೇಖರಿಸಿರುವುದರಿಂದ ಇಲ್ಲಿಗೆ ಬರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಈ ಕೇಂದ್ರಕ್ಕೆ ನಿತ್ಯ ಕೌಟುಂಬಿಕ ಸಮಸ್ಯೆಗಳ ಪರಿಹಾರಕ್ಕಾಗಿ ಹತ್ತಾರು ಜನ ಬರುತ್ತಿದ್ದು, ಇಲ್ಲಿಗೆ ಬರುವವರ ಪೈಕಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಆಗಿರುವುದರಿಂದ ಮಹಿಳೆಯರಿಗೆ ಪ್ರತ್ಯೇಕ ಆಪ್ತ ಸಮಾಲೋಚನೆ ನಡೆಸಲು ಪ್ರತ್ಯೇಕ ಕೊಠಡಿ ಇಲ್ಲದೆ ಎಲ್ಲರ ಮುಂದೆಯೇ ವಿಚಾರಣೆ ಮಾಡುವುದರಿಂದ ದೂರು ನೀಡಿದ ಮಹಿಳೆಯರು ತಮ್ಮ ಗುಪ್ತ ವಿಚಾರಗಳನ್ನು ಹೇಳಲಾಗದೆ ಮುಜುಗರಕ್ಕೀಡಾಗುತ್ತಿದ್ದಾರೆ. ಇದರಿಂದಾಗಿ ಸರಿಯಾಗಿ ವಿಚಾರಣೆಯಾಗದೆ ಪ್ರಕರಣ ದಾರಿ ತಪ್ಪುತ್ತಿರುವುದನ್ನು ಕಾಣಬಹುದಾಗಿದೆ. ದೂರು ನೀಡಲು ಕೇಂದ್ರಕ್ಕೆ ಬರುವ ಮಹಿಳೆಯರಿಗೆ ಶೌಚಾಲಯವಿಲ್ಲದೆ ಪರದಾಡುವಂತಾಗಿದ್ದು, ದೂರದಲ್ಲಿರುವ ಬಸ್‌ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ತೆರಳಿ ಶೌಚಕ್ರಿಯೆ ಮುಗಿಸಿಕೊಳ್ಳಬೇಕಾದ ದುಃಸ್ಥಿತಿ ನಿರ್ಮಾಣವಾಗಿದೆ.

ಕೇಂದ್ರಕ್ಕೆ ಬರುವವರಿಗೆ ಇಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದಿರುವುದರಿಂದ ಅಕ್ಕ ಪಕ್ಕದ ಹೋಟೆಲ್ಗಳಿಗೆ ತೆರಳಿ ನೀರು ಕುಡಿದು ಬರಬೇಕಾಗಿದೆ. ಒಟ್ಟಾರೆ ಮೂಲ ಸೌಕರ್ಯಗಳಿಲ್ಲದ ಹಾಗೂ ಶಿಥಿಲಗೊಂಡ ಕಟ್ಟದಿಂದ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರ ಬೇರೆಡೆ ಸ್ಥಳಾಂತರಿಸಿ, ಮೂಲ ಸೌಲಭ್ಯಗಳ ವ್ಯವಸ್ಥೆ ಮಾಡಬೇಕು ಎಂದು ಸಾರ್ವಜನಿಕರ ಒತ್ತಾಯವಾಗಿದೆ.

ಕೇಂದ್ರಕ್ಕೆ ನಾವು ನಮಗೆ ಇರುವ ಕೌಟುಂಬಿಕ ಸಮಸ್ಯೆಗಳ ಗೌಪ್ಯ ವಿಚಾರ ಹೇಳಿಕೊಳ್ಳಲು ಬರುತ್ತೇವೆ. ಆದರೆ ವಿಚಾರಣೆಗೆ ಇಲ್ಲಿ ಪ್ರತ್ಯೇಕ ಕೊಠಡಿ ಇಲ್ಲದಿರುವುದರಿಂದ ನಾವು ಗೌಪ್ಯ ವಿಷಯಗಳನ್ನು ಎಲ್ಲರ ಮುಂದೆ ಹೇಳಲಾಗದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ವಿಚಾರಣೆಗೆ ಪ್ರತ್ಯೇಕ ಕೊಠಡಿ ಇದ್ದರೆ ನಮ್ಮ ಸಮಸ್ಯೆ ಹೇಳಿಕೊಂಡು ಪರಿಹಾರ ಮಾಡಿಕೊಳ್ಳಬಹುದಾಗಿದೆ ಎಂದು ಹೆಸರು ಹೇಳಲು ಇಚ್ಚಿಸದ ಮಹಿಳೆ ತಿಳಿಸಿದ್ದಾರೆ.

ಬಸವರೆಡ್ಡಿ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.