ಕಾರ್ಮಿಕರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲಿ

ಶಿಕ್ಷಣದಿಂದ ಮಾತ್ರ ಬದುಕು ಬದಲಾಯಿಸಿಕೊಳ್ಳಲು ಸಾಧ್ಯ

Team Udayavani, May 16, 2019, 4:46 PM IST

ಸುರಪುರ: ಇಲ್ಲಿಯ ನ್ಯಾಯಾಲಯದಲ್ಲಿ ಏರ್ಪಡಿಸಿದ್ದ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶ ಸಾಯಿಬಣ್ಣ ಮೇಲಗಲ್ ಉದ್ಘಾಟಿಸಿದರು.

ಸುರಪುರ: ಬದುಕು ಕಟ್ಟಿಕೊಡುವಲ್ಲಿ ಬಡತನ ಭದ್ರ ಬುನಾದಿ ಇದ್ದಂತೆ. ಈ ಬಗ್ಗೆ ಯಾವೊಬ್ಬ ಕಾರ್ಮಿಕರಲ್ಲಿಯೂ ಕೀಳರಿಮೆ ಬೇಡ. ಒಪ್ಪತ್ತು ಉಪಾವಿಸವಿದ್ದರೂ ಪರವಾಗಿಲ್ಲ. ಮಕ್ಕಳಿಗೆ ಶಿಕ್ಷಣ ಕೊಡಿಸಿ ಅವರನ್ನು ಅಧಿಕಾರಿಗಳನ್ನಾಗಿ ಮಾಡಿ ಎಂದು ದಾವಣಗೇರಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ಸಾಯಿಬಣ್ಣ ಮೇಲಗಲ್ ಹೇಳಿದರು.

ಇಲ್ಲಿಯ ನ್ಯಾಯಾಲಯದಲ್ಲಿ ಬುಧವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಜಿಲ್ಲಾ ಹಾಗೂ ತಾಲೂಕು ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರದ ಸೌಲಭ್ಯಗಳಿಂದ ಬಡತನ ದೂರಾಗಲು ಸಾಧ್ಯವಿಲ್ಲ. ಶಿಕ್ಷಣದಿಂದ ಮಾತ್ರ ಬದುಕು ಬದಲಾಯಿಸಿಕೊಳ್ಳಲು ಸಾಧ್ಯ. ಆದ್ದರಿಂದ ಮಕ್ಕಳಿಗೆ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡಿ ಅವರು ಒಳ್ಳೆ ಉದ್ಯೋಗ ಪಡೆದಲ್ಲಿ ಬಡತನ ದೂರವಾಗುತ್ತದೆ ಎಂದು ಸಲಹೆ ನೀಡಿದರು.

ಸಿವಿಲ್ ನ್ಯಾಯಾಧೀಶ ವಿನೋದ ಬಾಳನಾಯಕ ಮಾತನಾಡಿ, ದುಡಿಯುವ ವರ್ಗಗಳಿಗಾಗಿ ಸರ್ಕಾರ ಕಾರ್ಮಿಕ ಇಲಾಖೆಯಿಂದ ಅನೇಕ ಸೌಲಭ್ಯ ನೀಡುತ್ತಿದೆ. ಕಟ್ಟಡ ಮತ್ತು ಇತರೆ ಕಾರ್ಮಿಕರು ಇಲಾಖೆಯಲ್ಲಿ ಅಗತ್ಯ ದಾಖಲೆ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು.

ಹೆರಿಗೆ, ಮಕ್ಳಳ ಶಿಕ್ಷಣ, ಸಾಲ ಸೌಲಭ್ಯ, ಸಲಕರಣೆ, ಮದುವೆಗೆ ಧನ ಸಹಾಯ ಸೇರಿದಂತೆ ಇತರೆ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಈ ಬಗ್ಗೆ ಕಾರ್ಮಿಕರು ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿನ ಕಾನೂನು ಸೇವಾ ಪ್ರಾಧಿಕಾರದಿಂದ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಟಂಟಂ, ಆಟೋ, ಪಿಕಪ್‌ ಸೇರಿದಂತೆ ಇತರೆ ಸರುಕು ಸಾಗಣೆ ವಾಹನಗಳಲ್ಲಿ ಮದುವೆ ದಿಬ್ಬಣಗಳಿಗೆ ಪ್ರಯಾಣ ಮಾಡುವುದು. ಹೊಲ ಗದ್ದೆಗಳಿಗೆ ಕಾರ್ಮಿಕರನ್ನು ಕರೆದು ಕೊಂಡು ಹೋಗುವುದು. ಪ್ರಯಾಣಿಕರನ್ನು ಹೊತ್ತೂಯುವುದು ಅಪರಾಧ. ಇಂತಹ ಘಟನೆ ಕಂಡು ಬಂದಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಬೇಕು. ಇಂತಹ ಸಂದರ್ಭಗಳಲ್ಲಿ ಅವಘಡ ನಡೆದು ಸಾವು ನೋವು ಆದರೆ ಮೃತ ಕಟುಂಬದವರಿಗೆ ಯಾವುದೇ ಪರಿಹಾರ ಸಿಗುವುದಿಲ್ಲ. ಕಾರಣ ಕಾರ್ಮಿಕರು ಈ ಬಗ್ಗೆ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಕಾರ್ಮಿಕ ಯೋಜನಾ ನಿರ್ದೇಶಕ ರಘುವೀರ ಸಿಂಗ್‌ ಠಾಕೂರ ಮಾತನಾಡಿ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಾದ ಕೃಷಿ ಕೂಲಿ, ಹಮಾಲರು, ಕಟ್ಟಡ, ಕಲ್ಲು ಕ್ವಾರಿ, ಗಣಿ, ಇಟ್ಟಂಗಿ ಬಟ್ಟಿ ಟೈಲರ್‌ಗಳು, ಚಿಂದಿ ಆಯುವವರು, ಗೃಹ ಕಾರ್ಮಿಕರು ಮೆಕ್ಯಾನಿಕ್‌, ಅಗಸರು, ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಮಂಡಕ್ಕಿ ಸೇರಿದಂತೆ ಇತರೆ ವರ್ಗದ ಕಾರ್ಮಿಕರ ಹೆಸರು ನೋಂದಾಯಿಸಲಾಗುತ್ತಿದೆ. ರೇಷನ್‌ ಕಾರ್ಡ್‌, ಆಧಾರ್‌ ಕಾರ್ಡ್‌, ಭಾವಚಿತ್ರ ಇತರೆ ದಾಖಲೆ ನೀಡಿ ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.

ವಿವಿಧ ಇಲಾಖೆಗಳಲ್ಲಿ ಸೇವೆಯಲ್ಲಿರುವ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಹಣಮಂತ್ರಾಯ ಕರಡಿ. ಸದಸ್ಯ ಮಾಳಪ್ಪ ವಂಟೂರ, ತಾಲೂಕು ಕಾರ್ಮಿಕ ಅಧಿಕಾರಿ ಶಿವಶಂಕರ ತಳವಾರ, ಸಿಡಿಪಿ ಲಾಲಸಾಹೇಬ ಪೀರಾಪುರ, ವಕೀಲರ ಸಂಘದ ಅಧ್ಯಕ್ಷ ನಂದನಗೌಡ ಪಾಟೀಲ ಮಕ್ಕಳ ರಕ್ಷಣಾ ಘಟಕದ ರಾಜೇಂದ್ರಯಾದವ ವೇದಿಕೆಯಲ್ಲಿದ್ದರು. ವಕೀಲ ಅಪ್ಪಣ್ಣ ಗಾಯಕವಾಡ ನಿರೂಪಿಸಿ, ವಂದಿಸಿದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ನಗರದ ಜನನಿಬಿಡ ಪ್ರದೇಶ, ಪ್ಯಾಲೆಸ್‌ ಗುಟ್ಟಹಳ್ಳಿಯ ಸಾಮ್ರಾಟ್‌ ಜ್ಯುವೆಲ್ಲರಿ ಒಳಗೆ ನುಗ್ಗಿ, ದರೋಡೆಗೆ ಯತ್ನಿಸಿ, ವಿಫ‌ಲರಾಗಿ ಗುಂಡು ಹಾರಿಸಿ ಮರಳಲು...

  • ಬೆಂಗಳೂರು: ನಗರದ ವಿವಿಧ ಮಾರುಕಟ್ಟೆಗಳಲ್ಲಿ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ (ಪಿಒಪಿ) ಗಣೇಶ ಮೂರ್ತಿಗಳ ಅಬ್ಬರ ನಡೆಯುತ್ತಿದೆ. ಕೆಲವು ಅಧಿಕಾರಿಗಳು ಸದ್ದಿಲ್ಲದೆ...

  • ಬೆಂಗಳೂರು: ಇತ್ತೀಚೆಗೆ ಅಪ್ರಾಪ್ತ ವಯಸ್ಸಿನ ಪುತ್ರಿಯೊಬ್ಬಳು ತನ್ನ ಪ್ರಿಯಕರನ ಜತೆ ಸೇರಿ ತಂದೆಯನ್ನು ಭೀಕರವಾಗಿ ಕೊಲೆಮಾಡಿದ ಘಟನೆಯ ನೆನಪು ಮಾಸುವ ಮುನ್ನವೇ,...

  • ಬೆಂಗಳೂರು: ಪ್ರತಿನಿತ್ಯ 40 ಲಕ್ಷ ಪ್ರಯಾಣಿಕರಿಗೆ ಸುರಕ್ಷಿತ ಸಂಚಾರ ಸೇವೆ ನೀಡುತ್ತಿರುವ ಬಿಎಂಟಿಸಿ ಸಿಬ್ಬಂದಿಯ ಜೀವನಕ್ಕೆ ಭದ್ರತೆ ಇಲ್ಲದಂತಾಗಿದ್ದು, ಒಂದು...

  • ಬೆಂಗಳೂರು: ಮೂತ್ರಪಿಂಡ ವೈಫ‌ಲ್ಯದಿಂದ ಬಳಲುತ್ತಿದ್ದ ತಾಯಿಗೆ ಮಗಳು ತನ್ನ ನಿಶ್ಚಿತಾರ್ಥ ರದ್ದು ಮಾಡಿಕೊಂಡು ಮೂತ್ರಪಿಂಡ ದಾನಮಾಡಿ ಜನ್ಮದಾತೆಯ ಜೀವ ಉಳಿಸಿದ್ದಾಳೆ....

ಹೊಸ ಸೇರ್ಪಡೆ