ಕುಡಿಯುವ ನೀರು ಒದಗಿಸಿ

ಅಧಿಕಾರಿಗಳು ಸಾರ್ವಜನಿಕರ ತಾಳ್ಮೆ ಪರೀಕ್ಷಿಸಬೇಡಿ: ಕೂರ್ಮಾರಾವ್‌

Team Udayavani, Sep 29, 2019, 4:53 PM IST

29-Sepctember-23

ಸುರಪುರ: ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ಸಾಕಷ್ಟು ವಿಳಂಬಯಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಸಾರ್ವಜನಿಕರ ತಾಳ್ಮೆ ಪರೀಕ್ಷಿಸಬೇಡಿ. ಪರಿಸ್ಥಿತಿ ಕೈ ಮೀರುವ ಮೊದಲೇ ಎಚ್ಚೆತ್ತುಕೊಳ್ಳಿ. ಕುಡಿಯುವ ನೀರು ಸಮರ್ಪಕವಾಗಿ ಕೊಡಿ ಎಂದು ಜಿಲ್ಲಾಧಿ ಕಾರಿ ಎಂ. ಕೂರ್ಮಾರಾವ್‌ ನಗರಸಭೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇಲ್ಲಿಯ ನಗರಸಭೆ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸುರಪುರ, ಕಕ್ಕೇರಾ, ಕೆಂಭಾವಿ ಮತ್ತು ಶಹಾಪುರ ನಗರಸಭೆ ವ್ಯಾಪ್ತಿಯ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ವಿವಿಧ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿವೆ. ಕಾಮಗಾರಿ ವೇಗ ಹೆಚ್ಚಿಸಿ ತ್ವರಿತವಾಗಿ ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸುರಪುರ ನಗರದಲ್ಲಿ ನೀರಿನ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳ ಕುರಿತು ನನ್ನ ಗಮನಕ್ಕೂ ಬಂದಿದೆ. ಅದನ್ನು ತಕ್ಷಣ ನಿವಾರಿಸಲು ನಗರಸಭೆ ಅಧಿ ಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ನಗರಕ್ಕೆ ಸಮರ್ಪಕ ನೀರು ಪೂರೈಸಲು ಅಧಿಕಾರಿಗಳಿಗೆ ಹೇಳಿದ್ದೇನೆ. ಶೆಳ್ಳಗಿ ಜಾಕ್‌ವೆಲ್‌ನಲ್ಲಿ ಸುಸ್ಥಿತಿಯಲ್ಲಿರುವ ಮೋಟಾರ್‌, ಟಿಸಿಗಳ ವ್ಯವಸ್ಥೆ ಮಾಡಲಾಗಿದೆ. ಪೈಪ್‌ಲೈನ್‌ ಒಡೆಯದಂತೆ ಮುಂಜಾಗ್ರತೆ
ಕ್ರಮ ವಹಿಸಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಬಯೋಮೆಟ್ರಿಕ್‌ಗೆ ಆದ್ಯತೆ: ನಗರಸಭೆಯಲ್ಲಿ ಅ. 10ರಿಂದ ನೂತನ ಬಯೋಮೆಟ್ರಿಕ್‌ ಯಂತ್ರ ಅಳವಡಿಸಲಾಗುವುದು. ಬಯೋಮೆಟ್ರಿಕ್‌ ಯಂತ್ರ ಅಳವಡಿಕೆಯಿಂದ ಆಡಳಿತ ವ್ಯವಸ್ಥೆ ಮತ್ತಷ್ಟು ಸುಧಾರಣೆಯಾಗುತ್ತದೆ. ನಗರಸಭೆಯಲ್ಲಿ ಅನೇಕ ವರ್ಷಗಳಿಂದ ಮಳಿಗೆಗಳ ಹಾರಾಜು ಆಗಿಲ್ಲ. ಕಾರಣ ಆ ಪ್ರಕ್ರಿಯೆ ಮುಗಿಸುವಂತೆ ತಿಳಿಸಿದ್ದೇನೆ. ನೀರು, ಮನೆ ಕರ ವಸೂಲಿ ವೇಗ ಹೆಚ್ಚಿಸುವಂತೆ ಸೂಚಿಸಿದ್ದೇನೆ. ಇದರಿಂದ ನಗರಸಭೆ ಆದಾಯ ವೃದ್ಧಿಯಾಗುತ್ತದೆ ಎಂದರು.

ನಗರಸಭೆಯಲ್ಲಿ ವಿವಿಧ ವಸತಿ ಯೋಜನೆ ಅಡಿಯಲ್ಲಿ ಮಂಜೂರಾದ ಮನೆಗಳಿಗೆ ತಕ್ಷಣ ಜಿಪಿಆರ್‌ಎಸ್‌ ಮಾಡಲು ಕ್ರಮ ಕೈಗೊಳ್ಳಬೇಕು. ಯಾವುದೇ ದೂರು ಬರಕೂಡದು ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ತಹಶೀಲ್ದಾರ್‌ ಸುರೇಶ ಅಂಕಲಗಿ ಸೇರಿದಂತೆ ಯಾದಗಿರಿ ನಗರಕೋಶದ ಮತ್ತು ಸುರಪುರ ನಗರಸಭೆ ಅಧಿಕಾರಿಗಳು, ಇಂಜಿನಿಯರ್‌ಗಳು ಇದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.