ಜ್ಞಾನ ವಿಕಾಸಕ್ಕೆ ಗ್ರಂಥಾಲಯ ಪೂರಕ
ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಿ: ರಾಜುಗೌಡ
Team Udayavani, Oct 20, 2019, 2:40 PM IST
ಸುರಪುರ: ಶಿಕ್ಷಣದಿಂದ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಯುವ ಸಮುದಾಯದ ಜ್ಞಾನ ವಿಕಾಸಗೊಳ್ಳಲು ಪುಸ್ತಕಗಳು ಅಗತ್ಯವಾಗಿದ್ದು, ಗ್ರಂಥಾಲಯಗಳಲ್ಲಿನ ಪುಸ್ತಕಗಳು ಇದಕ್ಕೆ ಪೂರಕವಾಗಿ ಕೆಲಸ ಮಾಡುತ್ತವೆ ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಹೇಳಿದರು.
ತಾಲೂಕಿನ ವಾಗಣಗೇರಿ ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದ ಸಾರ್ವಜನಿಕ ಗ್ರಂಥಾಲಯ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಡಿ ಹೈಟೆಕ್ ಗ್ರಂಥಾಲಯ ನಿರ್ಮಿಸಲಾಗುವುದು. ಇದರ ಉಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು.
ಗ್ರಂಥಾಲಯ ಕಾಮಗಾರಿ ಗುತ್ತಿಗೆ ಪಡೆದವರು ಗುಣಮಟ್ಟದಿಂದ ಕಾರ್ಯ ನಿರ್ವಹಿಸಬೇಕು. ಕಳಪೆ ಕಾಮಗಾರಿ ಮಾಡಿದರೆ ಸಹಿಸುವುದಿಲ್ಲ. ಗ್ರಾಮಸ್ಥರು ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಬೇಕು. ಗ್ರಂಥಾಲಯದ ಅಭಿವೃದ್ಧಿಗೆ ಬೇಕಾದ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ತಾಲೂಕಿನ ಎಲ್ಲಡೆ ಜ್ಞಾನಾರ್ಜನೆಗಾಗಿ ಗ್ರಂಥಾಲಯ ನಿರ್ಮಿಸಲಾಗುವುದು. ಯುವ ಸಮುದಾಯ ಮೊಬೈಲ್ ಗಳಲ್ಲಿ ಕಾಲ ಕಳೆಯದೆ ಓದಿನಡೆಗೆ ಒತ್ತು ನೀಡಿ ಜೀವನ ರೂಪಿಸಿಕೊಳ್ಳಬೇಕು ಎಂದರು.
ವಾಗಣಿಗೇರಿ ಗ್ರಾಮದ ಹರಿಜನ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ನಿವಾಸಿಗಳಿಂದ ತಿಳಿದು ಬಂದಿದೆ. ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಅ ಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಜಿಪಂ ಮಾಜಿ ಅಧ್ಯಕ್ಷ ರಾಜಾ ಹಣಮಪ್ಪ ನಾಯಕ ತಾತಾ, ಯಲ್ಲಪ್ಪ ಕುರುಕುಂದಿ, ಗ್ರಾಪಂ ಅಧ್ಯಕ್ಷೆ ಯಲ್ಲಮ್ಮ ಮಲ್ಲಪ್ಪ, ಉಪಾಧ್ಯಕ್ಷ ರಾಘು ಪೂಜಾರಿ, ಗ್ರಾಪಂ ಸದಸ್ಯರು, ಗ್ರಾಪಂ ಮಾಜಿ ಅಧ್ಯಕ್ಷ ಮಾನಪ್ಪ ಹುಜರತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಂಬೂ ಸವಾರಿ ಆನೆಗಳ ತೂಕ ಪರೀಕ್ಷೆ: ಮಾಜಿ ಕ್ಯಾಪ್ಟನ್ ಅರ್ಜುನನೇ ಫಿಟ್
ಚುನಾವಣೆಗೂ ಮುನ್ನವೇ ರಂಗೇರಿದ ಕಂಪ್ಲಿ – ಕುರುಗೋಡು ರಾಜಕೀಯ ನಾಯಕರ ಕದನ
ಧರ್ಮಸ್ಥಳದಲ್ಲಿ ರಾಜ್ಯಸಭಾ ಸದಸ್ಯರ ಅಧಿಕೃತ ಕಾರ್ಯಾಲಯ ಉದ್ಘಾಟನೆ
ಪ್ರವೀಣ್ ನೆಟ್ಟಾರ್ ಹತ್ಯೆ ಮಾಡಿದ್ದ ಮೂವರು ಪ್ರಮುಖ ಆರೋಪಿಗಳ ಬಂಧನ
ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್
MUST WATCH
3 ವರ್ಷಗಳ ಬಳಿಕ ಕೆಆರ್ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ
ಹೊಸ ಸೇರ್ಪಡೆ
ಜಂಬೂ ಸವಾರಿ ಆನೆಗಳ ತೂಕ ಪರೀಕ್ಷೆ: ಮಾಜಿ ಕ್ಯಾಪ್ಟನ್ ಅರ್ಜುನನೇ ಫಿಟ್
ಚುನಾವಣೆಗೂ ಮುನ್ನವೇ ರಂಗೇರಿದ ಕಂಪ್ಲಿ – ಕುರುಗೋಡು ರಾಜಕೀಯ ನಾಯಕರ ಕದನ
ಸತ್ಯ ಏನೆಂದು ನನಗೆ ಗೊತ್ತು, ನನ್ನ ನಿರ್ಣಯಗಳು ಗಟ್ಟಿಯಾಗಿದೆ: ಬದಲಾವಣೆ ವದಂತಿ ಬಗ್ಗೆ ಸಿಎಂ
ಧರ್ಮಸ್ಥಳದಲ್ಲಿ ರಾಜ್ಯಸಭಾ ಸದಸ್ಯರ ಅಧಿಕೃತ ಕಾರ್ಯಾಲಯ ಉದ್ಘಾಟನೆ
ಮಾರಾಟದಲ್ಲಿ ಕುಸಿತ: ಬೃಹತ್ ಇ-ವಾಣಿಜ್ಯ ಕಂಪನಿ ಅಲಿಬಾಬಾದಿಂದ 10 ಸಾವಿರ ಉದ್ಯೋಗಿಗಳ ವಜಾ