ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ

ಅನುಷ್ಠಾನ ಅಧಿಕಾರಿಗಳು ಗೈರು: ಕ್ರಮಕ್ಕೆ ಒತ್ತಾಯ

Team Udayavani, Oct 6, 2019, 5:17 PM IST

06-October-21

ಸುರಪುರ: ತಾಲೂಕು ಆಡಳಿತದಿಂದ ಅ. 13ರಂದು ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಗ್ರೇಡ್‌-2 ತಹಶೀಲ್ದಾರ್‌ ಸೋμಯಾ ಸುಲ್ತಾನ್‌ ಹೇಳಿದರು.

ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಶನಿವಾರ ಜಯಂತ್ಯುತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9:30 ಗಂಟೆಗೆ ಡೊಣ್ಣಿಗೇರಾದ ಮಹರ್ಷಿ ವಾಲ್ಮೀಕಿ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳ ಮುಂಖಾತರ ತಹಶೀಲ್ದಾರ್‌ ಕಚೇರಿವರೆಗೆ ಮಹರ್ಷಿಗಳ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದರು.

ನಂತರ ವಾಲ್ಮೀಕಿ ಭವನದಲ್ಲಿ ಬಹಿರಂಗ ಕಾರ್ಯಕ್ರಮ ಆಯೋಜಸಲಾಗಿದ್ದು, ಶಾಸಕ ನರಸಿಂಹ ನಾಯಕ ರಾಜುಗೌಡ ಉದ್ಘಾಟಿಸುವರು. ತಾಲೂಕು ಪಂಚಾಯಿತಿ, ಎಪಿಎಂಸಿ ಅಧ್ಯಕ್ಷರು ಉಪಸ್ಥಿತರಿರುವರು. ಓರ್ವ ಉಪನ್ಯಾಸಕರಿಂದ ಮಹರ್ಷಿಗಳ ಕುರಿತು ಉಪನ್ಯಾಸ ನಡೆಯಲಿದೆ ಎಂದು ತಿಳಿಸಿದರು.

ಸಮಾಜದ ಹಿರಿಯ ಮುಖಂಡ ಉಪನ್ಯಾಸಕ ವೇಣುಗೋಪಾಲ ಜೇವರ್ಗಿ ಮಾತನಾಡಿ, ಜಯಂತಿಯನ್ನು ಕಾಟಾಚಾರಕ್ಕಾಗಿ ಆಚರಿಸಬೇಡಿ, ಅರ್ಥಪೂರ್ಣವಾಗಿ ಆಚರಿಸಿ. ಆಮಂತ್ರಣ ಪತ್ರಿಕೆಯಲ್ಲಿ ಉಪನ್ಯಾಸಕರ ಹೆಸರು ಕೊನೆ ಸಾಲಿನಲ್ಲಿ ಹಾಕುವುದು ಸರಿಯಲ್ಲ ಎಂದರು.

ವಾಲ್ಮೀಕಿ ನಾಯಕ ಸಮಾಜದ ತಾಲೂಕು ಅಧ್ಯಕ್ಷ ಗಂಗಾಧರ ನಾಯಕ ಮಾತನಾಡಿ, ಪೂರ್ವಭಾವಿ ಸಭೆಯಲ್ಲಿ ಬಹುತೇಕ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿಲ್ಲ. ಪ್ರತಿ ಜಯಂತಿಗಳ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರಾಗುತ್ತಿದ್ದಾರೆ. ಈ ಬಗ್ಗೆ ಅನೇಕ ಬಾರಿ ತಿಳಿಸಿದರೂ ತಾಲೂಕು ಆಡಳಿತ ಯಾವುದೇ ಕ್ರಮ ಜರುಗಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಗೈರಾದವರ
ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮುಖಂಡ ಅನೀಲ ಇಟ್ಟಂಗಿ, ಚಂದ್ರಶೇಖರ ದೇವರಗೋನಾಲ ಮಾತನಾಡಿ, ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರ ಸೇರಿದಂತೆ ಸರಕಾರಿ ಅರೇ ಸರಕಾರಿ ಸ್ವಾಮ್ಯಕ್ಕೆ ಒಳಪಟ್ಟ ಎಲ್ಲಾ ಕಚೇರಿಗಳಲ್ಲಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಬೇಕು. ತಾಲೂಕು ಆಡಳಿತದಿಂದ ನಡೆಯುವ ಜಯಂತ್ಯುತ್ಸವದಲ್ಲಿ
ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಕಟ್ಟುನಿಟ್ಟಾಗಿ ಸೂಚಿಸಬೇಕು ಎಂದು ಒತ್ತಾಯಿಸಿದರು.

ವೆಂಕಟೇಶ ಬೇಟೆಗಾರ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ
ಸಮಾಜದ ಸಾಧಕರು ಹಾಗೂ ಹತ್ತನೇ ತರಗತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ತಾಲೂಕು ಆಡಳಿತದಿಂದ ಸನ್ಮಾನಿಸಬೇಕು ಎಂದು ಸಲಹೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಪ್ರಭು ದೊರೆ, ರಾಜು ದರಬಾರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಮಾಜದ ಅನೇಕ ಮುಖಂಡರು ಭಾಗವಹಿಸಿದ್ದರು. ಶಿರಸ್ತೇದಾರ್‌ ಕೊಂಡಲ ನಾಯಕ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.