ಹದಗೆಟ್ಟ ರಸ್ತೆ ಕಾಮಗಾರಿಗೆ ಆಗ್ರಹ

ರಸ್ತೆ ನಿರ್ಮಿಸದ ಗುತ್ತಿಗೆದಾರನ ವಿರುದ್ಧ ತಾಪಂ ಸದಸ್ಯರ ಆಕ್ರೋಶ •ಶಾಸಕರಿಂದಲೂ ಎಚ್ಚರಿಕೆ

Team Udayavani, Aug 23, 2019, 12:24 PM IST

ತರೀಕೆರೆ: ತಾಲೂಕು ಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಶಾಸಕ ಡಿ.ಎಸ್‌.ಸುರೇಶ್‌, ಅಧ್ಯಕ್ಷೆ ಪದ್ಮಾವತಿ ಇತ‌ರರು ಭಾಗವಹಿಸಿದ್ದರು.

ತರೀಕೆರೆ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬದ ಕುರಿತು ಗಂಭೀರ ಚರ್ಚೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸದಸ್ಯ ಕೆಂಪೇಗೌಡ ಅವರು, ಸಿದ್ಧೇಶ್ವರ ಗ್ರಾಮದಲ್ಲಿ ರಸ್ತೆ ನಿರ್ಮಾಣಕ್ಕೆ 50 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಿರ್ವಹಿಸುವಂತೆ ಕಾರ್ಯಾದೇಶ ನೀಡಿ ಮೂರು ವರ್ಷ ಕಳೆದಿದೆ. ಆದರೂ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಗುತ್ತಿಗೆದಾರ ಬಾಲು ಮೂರು ಕಾಮಗಾರಿಗಳನ್ನು ನಿರ್ವಹಿಸಿ ಇನ್ನುಳಿದ ಎರಡು ಕಾಮಗಾರಿಗಳನ್ನು ಮಾಡದೇ ಇರುವುದರಿಂದ ಗ್ರಾಮಸ್ಥರು ರಸ್ತೆಯಲ್ಲಿ ಸಂಚರಿಸಲು ತೀರಾ ತೊಂದರೆಯಾಗಿದೆ ಎಂದು ಹದಗೆಟ್ಟ ರಸ್ತೆ ಫೋಟೋ ಪ್ರದರ್ಶಿಸಿ ಗಮನ ಸೆಳೆದರು.

ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಿಲ್ಲ. ಅಲ್ಲದೇ, ಕೆಲಸ ನಿರ್ವಹಿಸುವಂತೆ ನೋಟಿಸ್‌ ನೀಡಲಾಗಿದೆ ಎಂದು ಎಇಇ ರವಿ ಸಭೆಗೆ ಮಾಹಿತಿ ನೀಡಿದರು.

ಕೃಷಿ ಅಧಿಕಾರಿ ಚಿತ್ರಸೇನ ಮಾತನಾಡಿ, ತಾಲೂಕಿನಾದ್ಯಂತ ಮಳೆ ಪ್ರಮಾಣ ಶೇ.29ರಷ್ಟು ಹೆಚ್ಚಾಗಿದೆ. ವಾಡಿಕೆ ಮಳೆ ಪ್ರಮಾಣ 493 ಮಿ.ಮೀ. ಪ್ರಸ್ತುತ ಸಾಲಿನಲ್ಲಿ 637 ಮಿ.ಮೀ.ಮಳೆಯಾಗಿದೆ. ಶೇ.33ರಷ್ಟು ಬಿತ್ತನೆಯಾಗಿದೆ. 3000 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಬೇಕಿದ್ದು, ಇಲ್ಲಿಯ ತನಕ 900 ಹೆಕ್ಟೇರ್‌ ಬಿತ್ತನೆಯಾಗಿದೆ. 6500 ಹೆಕ್ಟೇರ್‌ ಕೃಷಿ ಭೂಮಿಯಿದ್ದು, 4856 ಹೆಕ್ಟೇರ್‌ ಭೂಮಿಯಲ್ಲಿ ಬಿತ್ತನೆಯಾಗಿದೆ. ಅತಿವೃಷ್ಟಿಯಿಂದಾಗಿ ಬೆಳೆ ನಾಶವಾದ ಬಗ್ಗೆ ರೈತರಿಂದ ಯಾವುದೇ ದೂರುಗಳು ಬಂದಿಲ್ಲ. ರೈತರಿಗೆ 700 ಟಾರ್ಪಲ್ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಶಾಸಕ ಡಿ.ಎಸ್‌.ಸುರೇಶ್‌ ಮಾತನಾಡಿ, ಮಳೆಯಿಂದಾಗಿ ಶಾಲಾ ಕಟ್ಟಡಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಹಲವಾರು ಸಮಸ್ಯೆಗಳು ಉಂಟಾಗಿವೆ. ಅವುಗಳನ್ನು ಕೂಡಲೇ ದುರಸ್ತಿ ಮಾಡುವ ಅಗತ್ಯವಿದೆ. ಅಂಗನವಾಡಿ ಮತ್ತು ಶಾಲಾ ಕಟ್ಟಡಗಳ ದುರಸ್ತಿ ಅಂದಾಜು ವೆಚ್ಚವನ್ನು ಸಂಪೂರ್ಣವಾಗಿ ಸಿದ್ಧಪಡಿಸಿ ಸಭೆಗೆ ಮಂಡಿಸುವಂತೆ ಪಿಆರ್‌ಇಡಿ ಎಇಇ ರವಿ ಅವರಿಗೆ ಸೂಚನೆ ನೀಡಿದರು. ಅಲ್ಲದೇ, 13 ಶಾಲೆಗಳು ಮತ್ತು 20 ಅಂಗನವಾಡಿ ಕಟ್ಟಡಗಳಿಗೆ ತುರ್ತಾಗಿ ದುರಸ್ತಿ ಮಾಡಬೇಕಾಗಿದೆ ಮತ್ತು ಕೆಲವು ಶಿಥಿಲಾವಸ್ಥೆಗೆ ತಲುಪಿವೆ. ಇವುಗಳ ಪೂರ್ಣ ವಿವರವನ್ನು ನೀಡಬೇಕೆಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ್‌ ಮಾತನಾಡಿ, ಹಿಂದಿನ ವರ್ಷದ ಎಸ್‌ಎಸ್‌ಎಲ್ಸಿ ಫಲಿತಾಂಶದಲ್ಲಿ ಕಡಿಮೆ ಯಾಗಿರುವುದನ್ನು ಗಮನಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ನೀಡಲಾಗಿದೆ. ಅಂಕ ಗಳಿಸುವಲ್ಲಿ ಹಿಂದುಳಿದ ಮಕ್ಕಳನ್ನು ವಿಶೇಷವಾಗಿ ಗಮನಿಸ ಲಾಗುತ್ತಿದೆ. ಜೊತೆಗೆ ಪ್ರತಿ ತಿಂಗಳಿಗೊಮ್ಮೆ ಶಿಕ್ಷಕರಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಅಧ್ಯಕ್ಷೆ ಪದ್ಮಾವತಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳತ್ತ ಹೆಚ್ಚಿನ ಗಮನ ಹರಿಸಬೇಕು. ಪಾಠಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಮಕ್ಕಳನ್ನು ಪರೀಕ್ಷೆಗೆ ಸರ್ವ ಸನ್ನದ್ಧಗೊಳಿಸಬೇಕು. ತಾಲೂಕಿನಲ್ಲಿ ಉತ್ತಮ ಫಲಿತಾಂಶ ತರುವತ್ತ ಎಲ್ಲರೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ತಾಲೂಕಿನಲ್ಲಿ ಯಾವುದೇ ಸಾಂಕ್ರಾಮಿಕ ರೋಗಗಳು ಇಲ್ಲ ಎಂದು ತಾಲೂಕು ವೈದ್ಯಾಕಾರಿ ಡಾ| ಚಂದ್ರಶೇಖರ್‌ ಸಭೆಗೆ ಮಾಹಿತಿ ನೀಡಿದರು. ಕಾಡಿನಂಚಿಲ್ಲಿರುವ ಗ್ರಾಮಗಳಲ್ಲಿ 17,000 ಜನರಿಗೆ ಕೆಎಫ್‌ಡಿ ಚುಚ್ಚುಮದ್ದು ನೀಡಲಾಗುತ್ತಿದೆ. ಇಲ್ಲಿಯ ತನಕ 3,460 ಜನರಿಗೆ ಚುಚ್ಚುಮದ್ದು ನೀಡಲಾಗಿದೆ. ಸತತವಾಗಿ ಮಳೆಯಾದ ಹಿನ್ನೆಲೆಯಲ್ಲಿ ಚುಚ್ಚುಮದ್ದು ನೀಡಲಾಗಿಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಮಂಜುಳಾ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್‌, ಇಒ ವಿಶಾಲಾಕ್ಷಮ್ಮ, ಅಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ