ಅಭಿವೃದ್ಧಿ ನೆಪದಲ್ಲಿ ಪರಿಸರ ಹಾನಿ ಸಲ್ಲ

ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎನ್‌. ರಾಮಮೂರ್ತಿ ಕಳವಳ

Team Udayavani, Jun 6, 2019, 5:25 PM IST

06-June-41

ತರೀಕೆರೆ: ಪಟ್ಟಣದ ಅರಣ್ಯ ಇಲಾಖೆ ಆವರಣದಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎನ್‌. ರಾಮಮೂರ್ತಿ ಸಸಿ ನೆಟ್ಟು ವಿಶ್ವ ಪರಿಸರ ದಿನಾಚರಣೆ ಆಚರಿಸಿದರು.

ತರೀಕೆರೆ: ಅಭಿವೃದ್ಧಿ ನೆಪದಲ್ಲಿ ಪರಿಸರದ ನಾಶವಾಗುತ್ತಿದ್ದು, ಮುಂದಿನ ಪೀಳಿಗೆಗೆ ಪರಿಸರ ಸಂಪನ್ಮೂಲ ಉಳಿಸುವ ಮಹತ್ತರ ಜವಾಬ್ದಾರಿ ಎಲ್ಲರ ಮೇಲಿದೆ. ಇ-ತ್ಯಾಜ್ಯಗಳನ್ನು ಸಂಸ್ಕರಣಾ ಘಟಕಗಳಿಗೆ ತಲುಪಿಸುವ ಮೂಲಕ ಪರಿಸರ ಹಾನಿ ನಿಯಂತ್ರಣಗೊಳಿಸುವ ಅಗತ್ಯವಿದೆ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎನ್‌. ರಾಮಮೂರ್ತಿ ನುಡಿದರು.

ಬುಧವಾರ ಪಟ್ಟಣದ ಅರಣ್ಯಇಲಾಖೆ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ, ಶಿಕ್ಷಣ ಇಲಾಖೆ ಹಾಗೂ ಅರಣ್ಯಇಲಾಖೆ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಪರಿಸರ ದಿನಾಚರಣೆಯಂದು ಕೇವಲ ಗಿಡಗಳನ್ನು ನೆಟ್ಟರೆ ಸಾಲದು, ಅವುಗಳನ್ನು ಪೋಷಿಸಿ ಬೆಳಸಬೇಕು. ಮಾಲಿನ್ಯರಹಿತ ವಾತಾವರಣ ನಿರ್ಮಾಣವನ್ನು ಮಾಡಬೇಕಿದೆ, ಸ್ವಾರ್ಥಕ್ಕಾಗಿ ಪರಿಸರವನ್ನು ನಾಶ ಮಾಡದೆ, ಪರಿಸರವನ್ನು ಉಳಿಸುವ ಕೆಲಸವಾಗಬೇಕಿದೆ ಎಂದರು.

ತಹಸೀಲ್ದಾರ್‌ ಎನ್‌.ಟಿ. ಧರ್ಮೋಜಿರಾವ್‌ ಮಾತನಾಡಿ, ಪರಿಸರ ಉತ್ತಮವಾಗಿದ್ದರೆ ಮನಸ್ಸು ಆಹ್ಲಾದಕರವಾಗಿರುತ್ತದೆ. ಪರಿಸರದ ಮಡಿಲಿನಲ್ಲಿ ಬೆಳೆದ ವ್ಯಕ್ತಿಗಳು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿರುವ ಸಾಕಷ್ಟು ಉದಾಹರಣೆಗಳಿದ್ದು, ಆ ಹಾದಿಯಲ್ಲಿ ಮುಂದಿನ ಪೀಳಿಗೆ ಸಾಗಬೇಕಿದೆ. ನಗರೀಕರಣ, ವಿಜ್ಞಾನ ಬೆಳೆದಂತೆಲ್ಲ ಅನಾನುಕೂಲ ಸೃಷ್ಟಿಯಾಗುತ್ತಿದ್ದು, ಪರಿಸರ ಪ್ರಜ್ಞೆ ಸ್ವಚ್ಛತೆ ಕಾಳಜಿ ಬಾಲ್ಯದಿಂದಲೇ ಮೈಗೂಡಿಸಿಕೊಳ್ಳಬೇಕು, ಪರಿಸರದ ಬಗ್ಗೆ ಎಲ್ಲರಲ್ಲೂ ಅರಿವು ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದರು. ಎಸಿಎಫ್‌ ಬಿ.ಎಂ. ರವೀಂದ್ರಕುಮಾರ್‌ ಮಾತನಾಡಿದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮಕ್ಕಳು ಪಟ್ಟಣದ ತಾಲೂಕು ಕಚೇರಿ ಆವರಣದ ಸುತ್ತಮುತ್ತ ಸ್ವಚ್ಛಗೊಳಿಸಿದರು. ತಾಪಂ ಇಒ ವಿಶಾಲಾಕ್ಷಮ್ಮ, ಬಿಇಒ ಶಿವರಾಜ್‌, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್‌, ಆರ್‌ಎಫ್‌ಒಗಳಾದ ಚರಣ್‌ಕುಮಾರ್‌, ಚಂದ್ರಶೇಖರ್‌ರೆಡ್ಡಿ, ಮಂಜುನಾಥ್‌, ರಾಘವೇಂದ್ರ, ಶಿವಕುಮಾರ್‌, ಅಪರ ಸರ್ಕಾರಿ ಅಭಿಯೋಜಕ ಎಸ್‌. ಸುರೇಶ್‌ಚಂದ್ರ, ವಕೀಲರ ಸಂಘದ ಅಧ್ಯಕ್ಷ ಟಿ.ಎನ್‌. ಮಹಾದೇವಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.