ರೈಲ್ವೇ ಟರ್ಮಿನಲ್‌ಗಾಗಿ 31ರಂದು ಧರಣಿ

ಮತ್ತೊಂದು ಹೋರಾಟಕ್ಕೆ ಸಾಗರ ಸಜ್ಜುಟರ್ಮಿನಲ್‌ ಕೋಟೆಗಂಗೂರಿಗೆ ಸ್ಥಳಾಂತರ ಬೇಡ

Team Udayavani, Dec 25, 2019, 5:19 PM IST

25-December-30

ಸಾಗರ: ತಾಲೂಕಿನ ತಾಳಗುಪ್ಪಕ್ಕೆ ಮಂಜೂರಾಗಿದ್ದ ರೈಲ್ವೆ ಟರ್ಮಿನಲ್‌ನ್ನು ಶಿವಮೊಗ್ಗ ಸಮೀಪದ ಕೋಟೆಗಂಗೂರಿಗೆ ಸ್ಥಳಾಂತರಿಸಿರುವುದನ್ನು ಖಂಡಿಸಿ ಡಿ.31ರಂದು ಮಲೆನಾಡು ರೈಲ್ವೆ ಹೋರಾಟ ಸಮಿತಿ ವತಿಯಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಪರಮೇಶ್ವರ ದೂಗೂರು ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, 31ರಂದು ಬೆಳಗ್ಗೆ 11ಕ್ಕೆ ಗಣಪತಿ ದೇವಸ್ಥಾನದಿಂದ ಪ್ರತಿಭಟನಾ ರ್ಯಾಲಿ ಹೊರಡಲಿದ್ದು, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ನಂತರ ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ ಎಂದು ಹೇಳಿದರು.

ರೈಲ್ವೆ ಹೋರಾಟ ಸಮಿತಿ ಮತ್ತು ಮಲೆನಾಡು ರೈಲ್ವೆ ಹೋರಾಟ ಸಮಿತಿ ಜಂಟಿಯಾಗಿ ರೈಲ್ವೆ ಟರ್ಮಿನಲ್‌ ತಾಳಗುಪ್ಪದಲ್ಲಿಯೇ ನಿರ್ಮಾಣ ಮಾಡಬೇಕು ಎನ್ನುವ ಹಕ್ಕೊತ್ತಾಯವನ್ನು ಮಂಡಿಸಲಿದೆ. ಈಗಾಗಲೇ ರೈಲ್ವೆ ಹೋರಾಟ ಸಮಿತಿಯ ಹಿರಿಯರನ್ನು ಸಂಪರ್ಕಿಸಿ ಅವರ ಸಹಕಾರವನ್ನು ಕೋರಲಾಗಿದೆ. ರೈಲ್ವೆ ಟರ್ಮಿನಲ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 90 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಜತೆಗೆ ರೈಲ್ವೆ ಇಲಾಖೆಗೆ ಸೇರಿದ 12 ಎಕರೆ ಜಾಗ ತಾಳಗುಪ್ಪದಲ್ಲಿದೆ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ತಾಳಗುಪ್ಪದಲ್ಲಿ ಟರ್ಮಿನಲ್‌ ಮಾಡಲು ಸೂಕ್ತ ಸ್ಥಳಾವಕಾಶವಿದೆ ಎಂಬ ಮಾಹಿತಿ ನೀಡಿದ್ದಾರೆ. ತಾಳಗುಪ್ಪದಲ್ಲಿ ಟರ್ಮಿನಲ್‌ ಸ್ಥಾಪನೆಯಾದರೆ ಸ್ಥಳೀಯರಿಗೆ ಉದ್ಯೋಗಾವಕಾಶ ಸಹ ಸಿಗಲಿದೆ ಎಂದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಅವರು ಸಾಗರ ತಾಲೂಕಿಗೆ ಸಿಗಬೇಕಾಗಿದ್ದ ಪ್ರತಿಯೊಂದು ಅವಕಾಶವನ್ನು ತಪ್ಪಿಸುತ್ತಿದ್ದಾರೆ. ಸಾಗರ ಕ್ಷೇತ್ರದ ಶಾಸಕ ಎಚ್‌.ಹಾಲಪ್ಪ ಮತ್ತು ಸೊರಬ ಕ್ಷೇತ್ರದ ಶಾಸಕ ಕುಮಾರ ಬಂಗಾರಪ್ಪ ರೈಲ್ವೆ ಟರ್ಮಿನಲ್‌ ವಿಷಯದಲ್ಲಿ ಚಕಾರ ಎತ್ತುತ್ತಿಲ್ಲ. ಅಪ್ಪ, ಮಕ್ಕಳು ಸೇರಿ ಟರ್ಮಿನಲ್‌ ಕೋಟೆಗಂಗೂರಿಗೆ ಸ್ಥಳಾಂತರಿಸುತ್ತಿದ್ದರೂ ಶಾಸಕದ್ವಯರ ಮೌನ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದರು.

ಹೋರಾಟ ಸಮಿತಿಯ ಇನ್ನೋರ್ವ ಸಂಚಾಲಕ ಎಚ್‌.ಬಿ.ರಾಘವೇಂದ್ರ ಮಾತನಾಡಿ, ತಾಳಗುಪ್ಪದಲ್ಲಿರುವ ಸೌಲಭ್ಯ ನೋಡಿ ರೈಲ್ವೆ ಇಲಾಖೆ ಅ ಧಿಕಾರಿಗಳು ಟರ್ಮಿನಲ್‌ ಮಂಜೂರು ಮಾಡಿದ್ದಾರೆ. ರೈಲ್ವೆ ಟರ್ಮಿನಲ್‌ ಬಂದರೆ ತಾಳಗುಪ್ಪ ಹೋಬಳಿ ಒಂದಷ್ಟು ಅಭಿವೃದ್ಧಿಯೂ ಆಗುತ್ತದೆ. ಆದರೆ ಕೋಟೆಗಂಗೂರಿನಲ್ಲಿರುವ ಜಮೀನು ಹೊಂದಿರುವ ಕೆಲವು ಬಿಜೆಪಿ ಪ್ರಮುಖರು ತಮ್ಮ ಜಾಗಕ್ಕೆ ಉತ್ತಮ ಬೆಲೆ ಪಡೆಯಲು ಟರ್ಮಿನಲ್‌ ಸ್ಥಳಾಂತರಕ್ಕೆ ಮುಂದಾಗಿದ್ದಾರೆ. ಈ ಹೋರಾಟಕ್ಕೆ ಶಾಸಕ ಹಾಲಪ್ಪನವರು ಸಹಕಾರ ನೀಡಬೇಕು. ಜತೆಗೆ ಮುಖ್ಯಮಂತ್ರಿಗಳಿಗೆ ಹಾಗೂ ಸಂಸದರಿಗೆ ತೀರ ಆಪ್ತವಾಗಿರುವ ಟಿ.ಡಿ.ಮೇಘರಾಜ್‌ ತಾಳಗುಪ್ಪದಲ್ಲಿಯೇ ಟರ್ಮಿನಲ್‌ ನಿರ್ಮಾಣ ಮಾಡುವಂತೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‌ನ ಮಾಜಿ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್‌ ಮಾತನಾಡಿ, ಈಗಾಗಲೇ ಮುಖ್ಯಮಂತ್ರಿಗಳು ಶಿಕಾರಿಪುರವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಲ್ಲಿ ಸಾಗರ ತಾಲೂಕಿಗೆ ಮಲತಾಯಿ ಧೋರಣೆ ತೋರಿಸುತ್ತಿದ್ದಾರೆ. ಶಿಕಾರಿಪುರ ಮೂಲಕ ಚೆನ್ನೈಗೆ ರೈಲ್ವೆ ಸಂಪರ್ಕ ಕಲ್ಪಿಸಲು ಮುಖ್ಯಮಂತ್ರಿಗಳು 1 ಸಾವಿರ ಕೋಟಿ ರೂ. ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಮಲೆನಾಡು ಭಾಗದ ಬಹುಕಾಲದ ಬೇಡಿಕೆಯಾಗಿರುವ ಕೊಂಕಣ ರೈಲ್ವೆಗೆ ಸಂಪರ್ಕಕ್ಕೆ ಈತನಕ ಅನುದಾನ ನೀಡಿಲ್ಲ. ಈ ಬಾರಿ ಬಜೆಟ್‌ನಲ್ಲಿ ತಾಳಗುಪ್ಪದಿಂದ ಕೊಂಕಣ ರೈಲ್ವೆಗೆ ಸಂಪರ್ಕ ಕಲ್ಪಿಸುವ ಯೋಜನೆಗೆ ಹಣ ಇಡಬೇಕು. ಜತೆಗೆ ರೈಲ್ವೆ ಟರ್ಮಿನಲ್‌ ತಾಳಗುಪ್ಪದಲ್ಲಿ ಸ್ಥಾಪಿಸಬೇಕು. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಪಂ ಮಾಜಿ ಸದಸ್ಯ ರವಿಕುಗ್ವೆ ಮಾತನಾಡಿ, ರಾಘವೇಂದ್ರ ಅವರಿಗೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಿಕಾರಿಪುರಕ್ಕಿಂತ  ಚ್ಚಿನ ಮತವನ್ನು ಸಾಗರ ಮತ್ತು ಸೊರಬ ಕ್ಷೇತ್ರದ ಮತದಾರರು ನೀಡಿದ್ದಾರೆ. ಇದನ್ನು ಸಂಸದರು ಮರೆತಂತೆ ಕಾಣುತ್ತಿದೆ. ಸಂಸದರಿಗೆ ಎರಡೂ ಕ್ಷೇತ್ರದ ಮತದಾರರ ಬಗ್ಗೆ ಅಭಿಮಾನವಿದ್ದರೆ ರೈಲ್ವೆ ಟರ್ಮಿನಲ್‌ ತಾಳಗುಪ್ಪದಲ್ಲಿಯೆ ಸ್ಥಾಪಿಸಲು ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ಸುಧಾಕರ ಕುಗ್ವೆ, ಪುಟ್ಟಪ್ಪ, ವೈ.ಎನ್‌.ಹುಬ್ಬಳ್ಳಿ ಹಾಜರಿದ್ದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.