ತುಂಬೆ: ಹಾಡುಹಗಲೇ ಕಳವು

Team Udayavani, Nov 17, 2019, 7:48 PM IST

ಬಂಟ್ವಾಳ : ತಾಲೂಕಿನ ತುಂಬೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯ ಮನೆಯೊಂದಕ್ಕೆ ಹಾಡುಹಗಲೇ ನುಗ್ಗಿದ ಕಳ್ಳರು ಚಿನಾಭರಣ ಹಾಗೂ ನಗದು ದೋಚಿರುವ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.

ಬಂಟ್ವಾಳ ತಾ.ಪಂ.ಮಾಜಿ ಸದಸ್ಯ ಸೋಮಪ್ಪ ಕೋಟ್ಯಾನ್ ಅವರ ಮನೆಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ನುಗ್ಗಿದ್ದು, ಸುಮಾರು 15 ಪವನ್ ಚಿನ್ನ ಹಾಗೂ 15 ಸಾವಿರ ರೂ. ನಗದು ದೋಚಿದ್ದಾರೆ ಎನ್ನಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ