108 ಆಂಬ್ಯುಲೆನ್ಸ್ ನಿರ್ವಹಣೆ ಸಿಬಂದಿ ವೈಫಲ್ಯ : ಸ್ಟಿಂಗ್ ಆಪರೇಷನ್ ನಿಂದ ಬಯಲು ಮಾಡಿದ ತಹಶೀಲ್ದಾರ್

ಸಿಬಂದಿಯ ಕೃತಕ ಸಮಸ್ಯೆ ಬಯಲಿಗೆಳೆದ ನಾಹಿದಾ ಜಮ್ ಜಮ್

Team Udayavani, Dec 12, 2022, 5:55 PM IST

1-sadssad

ಕೊರಟಗೆರೆ : ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಆಂಬ್ಯುಲೆನ್ಸ್ ಸಿಬಂದಿಯ ನಿರ್ಲಕ್ಷದ ಬಗ್ಗೆ ಸತ್ಯಾಂಶವನ್ನು ತಿಳಿಯಲು ಹಾಗೂ ಸಿಬಂದಿಗೆ ಪಾಠ ಕಲಿಸಲು ಕೊರಟಗೆರೆ ತಹಶೀಲ್ದಾರ್ ನಾಹಿದಾ ಜಮ್ ಜಮ್ ಸಿನಿಮಾದ ರೀತಿಯಲ್ಲಿ ಗ್ರಾಮೀಣ ಮಹಿಳೆ ರಾಮಕ್ಕನ ಹೆಸರಿನಲ್ಲಿ ಸ್ಪಿಂಗ್ ಆಪರೇಷನ್ ನಡೆಸಿ ಅಂಬ್ಯುಲೆನ್ಸ್ ಸಿಬಂದಿಯ ಕೃತಕ ಸಮಸ್ಯೆ ಬಯಲಿಗೆಳೆದಿದ್ದಾರೆ.

ಕಳೆದ ಶನಿವಾರ ಡಿ.10 ರಂದು ಬೆಳಗ್ಗೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಚಿರತೆ ದಾಳಿಯಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಸೇವೆ ಸಕಾಲದಲ್ಲಿ ಸಿಗದ ಬಗ್ಗೆ ಚಿರತೆ ದಾಳಿಗೆ ಒಳಗಾದ ಬಾಲಕರ ಪೋಷಕರು ಆಸ್ಪತ್ರೆಗೆ ಭೇಟಿ ನೀಡಿದ ಸಮಯದಲ್ಲಿ ಶಾಸಕ ಡಾ.ಜಿ.ಪರಮೇಶ್ವರ್ ರವರಿಗೆ ದೂರು ನೀಡಿದಾಗ ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೂಶ ವ್ಯಕ್ತವಾಗಿತ್ತು.

ತಾಲೂಕಿನಲ್ಲಿ 108 ಆಂಬ್ಯುಲೆನ್ಸ್ ಸೇವೆಯಲ್ಲಿದ್ದರೂ ಏಕೆ ಲಭ್ಯವಾಗುತ್ತಿಲ್ಲ ಎಂದು ಕೊರಟಗೆರೆ ಜನಸ್ನೇಹಿ ತಹಶೀಲ್ದಾರ್ ನಾಹಿದಾ ಜಮ್ ಜಮ್‌ ಸ್ಪಿಂಗ್ ಆಪರೇಷನ್‌ಗೆ ಮುಂದಾದರು, ಸಂಜೆ 5 ಗಂಟೆಗೆ ತಾಲೂಕು ಆಸ್ಪತ್ರೆಗೆ ಬೇಟಿ ನೀಡಿದ ತಹಶೀಲ್ದಾರ್ ಆಂಬ್ಯುಲೆನ್ಸ್ ಸೇವೆಯ ಅವ್ಯವಸ್ಥೆಯ ಬಗ್ಗೆ ರೋಗಿಗಳ ದೂರು ಕೇಳಿ, 5 ಗಂಟೆಗೆ 2 ನಿಮಿಷಕ್ಕೆ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಎದುರಲ್ಲೆ ರಾಮಕ್ಕ ಹೆಸರಲ್ಲಿ 108 ಕ್ಕೆ ಕರೆ ಮಾಡಿ, ವಡ್ಡಗೆರೆ ಕ್ರಾಸ್ ಬಳಿ ಅಪಘಾತವಾಗಿದೆ ಎಂದು 108 ಗ್ರಾಹಕ ಸೇವಾ ಕೇಂದ್ರದ ಸಿಬಂದಿಗೆ ಮಾಹಿತಿ ನೀಡಿದರು. ನಂತರ ಕರೆ ಆಂಬ್ಯುಲೆನ್ಸ್ ಸಿಬಂದಿಗೆ ವರ್ಗಾವಣೆ ಆಯಿತು, ಸಿಬಂದಿ ಉಮಾದೇವಿ ಅವರು ರಾಮಕ್ಕ (ತಹಶೀಲ್ದಾರ್ ನಾಹಿದಾ ಜಮ್ ಜಮ್ ಬದಲಿ ಹೆಸರು) ಜತೆ 8 ನಿಮಿಷ ಮಾತನಾಡಿದ ಬಳಿಕ ಅಂಬ್ಯುಲೆನ್ಸ್ ತೋವಿನಕೆರೆ ಬಳಿ ಇದೆ, ಅಲ್ಲಿಂದ ಬರುವುದು 1 ಗಂಟೆ ತಡೆವಾಗುತ್ತದೆ, ಅಲ್ಲಿಯವರೆಗೆ ಕಾಯಿರಿ ಅಥವಾ ಖಾಸಗಿ ವಾಹನದ ಮೂಲಕ ಆಸ್ಪತ್ರೆಗೆ ರವಾನಿಸಿ ಎಂದು ಉಡಾಫೆ ಉತ್ತರ ನೀಡಿದರು.

ತೋವಿನಕೆರೆಯಿಂದ ಕೊರಟಗೆರೆ ಪಟ್ಟಣಕ್ಕೆ ಬರಲು 15 ರಿಂದ 20 ನಿಮಿಷ ಸಾಕು, ಆದರೆ ತಹಶೀಲ್ದಾರ್ ಕರೆ ಮಾಡಿದ ಬಳಿಕ ಆಂಬ್ಯುಲೆನ್ಸ್ ಬಂದಿದ್ದು 1 ಗಂಟೆಯ ಬಳಿಕ. ಅಷ್ಟೋತ್ತಿಗೆ ತಹಶೀಲ್ದಾರ್ ಸ್ಥಳದಿಂದ ಹಿಂತಿರುಗಿದ್ದು, 108 ಕಾರ್ಯವೈಖರಿ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ತಹಶೀಲ್ದಾರ್ ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ ವರದಿ ಸಲ್ಲಿಸಿದ್ದಾರೆ.

108 ಸೇವೆ ನಿರ್ವಹಣೆ ವೈಫಲ್ಯ
ತಹಶೀಲ್ದಾರ್ ನಾಹಿದಾ ಜಮ್ ಜಮ್ ಮಾತನಾಡಿ 108 ಆಂಬ್ಯುಲೆನ್ಸ್ ಸೇವೆಯ ನಿರ್ವಹಣೆ ವೈಫಲ್ಯ ಬಯಲಾಗಿದೆ, ಖುದ್ದು ಸ್ಪಿಂಗ್ ಆಪರೇಷನ್ ಮಾಡಿ ಪರಿಸ್ಥಿತಿ ಆರಿತಾಗ ನಿಜಕ್ಕೂ ಆಘಾತವಾಗಿದೆ, ಅಧಿಕಾರಿಗಳು, ಸಿಬಂದಿ ಮಾನವೀಯತೆಯಿಂದ ಕೆಲಸ ಮಾಡಬೇಕು, ಆಂಬ್ಯುಲೆನ್ಸ್ ಇದ್ದರೂ ಸೇವೆ ನೀಡಲು ವಿಳಂಬ ಮಾಡುತ್ತಿರುವುದು ಖಂಡನೀಯ ಎಂದು ಆಂಬ್ಯುಲೆನ್ಸ್ ಸಿಬಂದಿಗಳ ಕಾರ್ಯವೈಖರಿ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.