150 ಕೋಟಿ ರೂ. ಅನುದಾನ ತಂದಿದ್ದೇನೆ

ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಶಾಸಕ ಸತ್ಯನಾರಾಯಣ ಹೇಳಿಕೆ

Team Udayavani, Aug 21, 2019, 5:07 PM IST

ಶಿರಾ ತಾಲೂಕಿನ ಕೆ.ಕೆ.ಪಾಳ್ಯದಲ್ಲಿ 1.5 ಕೋಟಿ ರೂ. ವೆಚ್ಚದ ರಸ್ತೆ ಕಾಮ ಗಾರಿಗೆ ಶಾಸಕ ಬಿ. ಸತ್ಯನಾರಾಯಣ ಭೂಮಿ ಪೂಜೆ ನೆರವೇರಿಸಿದರು.

ಶಿರಾ: ರಸ್ತೆ ಅಭಿವೃದ್ಧಿ ಮತ್ತು ಕುಡಿಯುವ ನೀರಿನ ಸೌಲಭ್ಯಕ್ಕೆ 150 ಕೋಟಿ ರೂ. ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಿಸಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಶಾಸಕ ಬಿ.ಸತ್ಯನಾರಾಯಣ ಹೇಳಿದರು. ತಾವರೆಕೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆ.ಕೆ. ಪಾಳ್ಯದಲ್ಲಿ 1.5 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿ ಮಾತ ನಾಡಿದರು. ಸರ್ಕಾರಿ ಶಾಲೆಗಳು ಗುಣ ಮಟ್ಟದ ಶಿಕ್ಷಣ ನೀಡುತ್ತಿದ್ದರೂ ಆಂಗ್ಲ ಮಾಧ್ಯಮ ವ್ಯಾಮೋಹಕ್ಕೆ ಬಿದ್ದಿರುವ ಪೋಷಕರು ಲಕ್ಷಾಂತರ ರೂ. ಖರ್ಚು ಮಾಡಿ ಖಾಸಗಿ ಶಾಲೆಗೆ ಮಕ್ಕಳ ದಾಖಲಿಸುತ್ತಿದ್ದಾರೆ. ಇದರಿಂದ ಖಾಸಗಿ ಕಾನ್ವೆಂಟ್ ಮಾಲೀಕರು ಕೋಟ್ಯಾಧೀಶ ರಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿಯೇ ಮಕ್ಕಳ ಓದಿಸುವ ಪ್ರವೃತ್ತಿ ಬೆಳೆಸಿ ಕೊಂಡರೆ ಹಣ ವ್ಯರ್ಥವಾಗುವುದು ತಪ್ಪುತ್ತದೆ ಎಂದು ಹೇಳಿದರು.

ಕೆ.ಕೆ.ಪಾಳ್ಯಕ್ಕೆ ಇದುವರೆಗೂ ಬಸ್‌ ಸೌಲಭ್ಯ ಕಲ್ಪಿಸಿಲ್ಲ ಎಂಬ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಶಾಸಕ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಶಿರಾ ಘಟಕದಲ್ಲಿ ಬಸ್‌ ಕೊರತೆ ಇದ್ದು ಶೀಘ್ರವೇ ಕೆ.ಕೆ.ಪಾಳ್ಯ ಮಾರ್ಗವಾಗಿ ಬಸ್‌ ಸಂಚರಿಸುವಂತೆ ಕ್ರಮ ಕೈಗೊಳ್ಳಲಾಗುವುದೆಂದರು.

ಎಪಿಎಂಸಿ ಅಧ್ಯಕ್ಷ ನರಸಿಂಹೇಗೌಡ, ಚಂಗಾವರ ಗ್ರಾಪಂ ಅಧ್ಯಕ್ಷೆ ಪುಟ್ಟರಂಗಮ್ಮ ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷ ವೈ.ಕೆ. ತಿಪ್ಪೇಸ್ವಾಮಿ, ಜೆಡಿಎಸ್‌ ಮುಖಂಡ ಚಂಗಾವರ ಮಾರಣ, ಲೋಕೋಪ ಯೋಗಿ ಎಇಇ ಷಣ್ಮುಖಪ್ಪ, ಇಒ ಮೋಹನ್‌ ಕುಮಾರ್‌, ಗ್ರಾಪಂ ಉಪಾಧ್ಯಕ್ಷ ಲಿಂಗಯ್ಯ, ಗುತ್ತಿಗೆದಾರ ಪಾಂಡುರಂಗಯ್ಯ ಇತರರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ