Udayavni Special

ರಾಗಿ ಖರೀದಿಗೆ 2,400 ರೈತರ ನೋಂದಣಿ!


Team Udayavani, Feb 19, 2020, 3:00 AM IST

raagi-kharidige

ಹುಳಿಯಾರು: ಜಿಲ್ಲೆಯಲ್ಲೆ ಅತೀ ಹೆಚ್ಚು ರಾಗಿ ಬೆಳೆಯುವ ಪ್ರದೇಶವೆಂದು ಹೆಸರಾಗಿರುವ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಸರ್ಕಾರದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಹೆಸರು ನೋಂದಾಯಿಸಿರುವುದು ಕೇವಲ 2400 ಮಂದಿ!.

ಹೌದು… ತಾಲೂಕಿನಲ್ಲಿ ಅಪಾರ ಸಂಖ್ಯೆಯಲ್ಲಿ ರಾಗಿ ಬೆಳೆಗಾರರಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಎಲ್ಲರಿಗೂ ಉತ್ತಮ ಇಳುವರಿಯಾಗಿದೆ. ಎಲ್ಲರಿಗೂ ಸರ್ಕಾರದ 3,150 ರೂ. ಬೆಂಬಲ ಬೆಲೆಯಲ್ಲಿ ರಾಗಿ ಮಾರಲು ಇಚ್ಚೆಯಿದೆ. ಆದರೂ ಹುಳಿಯಾರು ಖರೀದಿ ಕೇಂದ್ರದಲ್ಲಿ 1300 ರೈತರು, ಚಿ.ನಾ.ಹಳ್ಳಿ ಕೇಂದ್ರದಲ್ಲಿ 1,100 ರೈತರು ಮಾತ್ರ ನೋಂದಣಿ ಮಾಡಿಸಿದ್ದಾರೆ. ರೈತರ ನೋಂದಣಿಯಲ್ಲಿ ಕುಂಠಿತವಾಗಲು ಪಹಣಿಯಲ್ಲಿ ಬೆಳೆ ತಪ್ಪಾಗಿ ನಮೂದಾಗಿರುವುದು ಪ್ರಮುಖ ಕಾರಣ ಎನ್ನಲಾಗಿದೆ.

ಸಹವಾಸವೇ ಬೇಡ: ಇತ್ತೀಚೆಗೆ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆ ಖರೀದಿ ಕೇಂದ್ರ ತೆರೆಯುತ್ತಿದ್ದಂತೆ ಮಾರುಕಟ್ಟೆಗಿಂತಲೂ ಉತ್ತಮ ಬೆಲೆ ಕಂಡು ಸಂತಸದಿಂದ ರಾಗಿ ಮಾರಾಟಕ್ಕೆ ನೋಂದಣಿಗೆ ಹೋದ ರೈತರಲ್ಲಿ ಸಾಕಷ್ಟು ಜನರಿಗೆ ತಪ್ಪಾದ ಬೆಳೆ ಮಾಹಿತಿಯಿಂದ ಸಂಕಷ್ಟ ಎದುರಾಗಿತ್ತು. ಪಹಣಿಯಲ್ಲಿ ಪರಿಷ್ಕರಣೆಯಾಗದ ಮಾಹಿತಿಯಿಂದ ಕಚೇರಿಯಿಂದ ಕಚೇರಿಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿ, ಅನೇಕ ರೈತರು ಪಹಣಿಯಲ್ಲಿನ ದೋಷ ಪರಿಹರಿಸುವ ದಾರಿ ತಿಳಿಯದೆ ಖರೀದಿ ಕೇಂದ್ರದ ಸಹವಾಸವೇ ಬೇಡ ಎಂದು ಸುಮ್ಮನಾಗಿದ್ದಾರೆ.

“ಬೆಳೆ ದರ್ಶಕ’ ಮೊಬೈಲ್‌ ಆಪ್‌ ಕೇವಲ 300 ಮಂದಿ ಆಕ್ಷೇಪಣೆ ಸಲ್ಲಿಸಿ ಬೆಳೆ ಸರಿಪಡಿಸಿಕೊಂಡಿದ್ದು, ಉಳಿದ ರೈತರು ಈ ಬಗ್ಗೆ ನಿರಾಸಕ್ತಿ ತಾಳಿದ್ದಾರೆ. ಇದಕ್ಕೆ ರೈತರ ಬಳಿ ಸ್ಮಾರ್ಟ್‌ಫೋನ್‌ಗಳಿಲ್ಲ ಎನ್ನುವುದು ಕಾರಣ ಎನ್ನಲಾಗಿದೆ. “ಬೆಳೆ ದರ್ಶಕ’ ಮೊಬೈಲ್‌ ಆಪ್‌ ಮೂಲಕ ಆಕ್ಷೇಪಣೆ ಸಲ್ಲಿಸಲು ತಮ್ಮಿಂದ ಆಗದು ಎಂದು ರೈತರು ಕೊರಗಬಾರದೆಂದು ಹತ್ತಿರದ ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರಿಗೆ ಅಥವಾ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಿಗೆ ರೈತರು ಭೇಟಿ ನೀಡಿ ಲಿಖೀತವಾಗಿಯೂ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಆದರೆ ಈ ಬಗ್ಗೆ ವ್ಯಾಪಕ ಪ್ರಚಾರವಿಲ್ಲದ ಕಾರಣ ರೈತರು ಆಕ್ಷೇಪಣೆಗೆ ಮುಂದಾಗಿಲ್ಲ. ಈ ನಡುವೆ ರಾಗಿ ಖರೀದಿ ಪ್ರಕ್ರಿಯೆ ನೋಂದಣಿ ಫೆ. 29 ಕೊನೇ ದಿನವೆಂದು ಘೋಷಿಸಲಾಗಿದೆ. ಅಷ್ಟರಲ್ಲಿ ಅಗತ್ಯ ದಾಖಲೆಯೊಂದಿಗೆ ರೈತರು ಹೆಸರು ನೋಂದಾಯಿಸಿಕೊಳ್ಳಬೇಕಿದೆ. ಆದರೆ ಕಳೆದ ವಾರದಿಂದ ದಿನಕ್ಕೆ ಒಂದಿಬ್ಬರು ರೈತರು ಬಂದು ಹೆಸರು ನೋಂದಾಯಿಸಿದರೆ ಹೆಚ್ಚು ಅನ್ನುವಂತೆ ನೀರಸ ಪ್ರತಿಕ್ರಿಯೆಯಿದೆ. ಹಾಗಾಗಿ ಅಧಿಕಾರಿಗಳು ಮಾಡಿದ ಬೆಳೆ ಮಾಹಿತಿ ತಪ್ಪಿಗೆ ರೈತರು ಸರ್ಕಾರದ ಸೌಲಭ್ಯ ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ.

“ಬೆಳೆ ದರ್ಶಕ’ ಮೊಬೈಲ್‌ ಆಪ್‌ ಮೂಲಕ ಆಕ್ಷೇಪಣೆ ಪಡೆದು ತಪ್ಪು ಸರಿಪಡಿಸಿ ಖರೀದಿ ಕೇಂದ್ರದಲ್ಲಿ ಹೆಸರು ನೋಂದಣಿಗೆ ಸಮಸ್ಯೆ ತಲೆದೋರದಂತೆ ಸರ್ಕಾರ ವ್ಯವಸ್ಥೆ ಮಾಡಿದೆ.
-ಹನುಮಂತರಾಜು, ತಾಲೂಕು ಕೃಷಿ ಅಧಿಕಾರಿ

* ಎಚ್‌.ಬಿ.ಕಿರಣ್‌ ಕುಮಾರ್‌

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Supreme-Court-Of-India-3-726

 ಹೈಕೋರ್ಟ್ ಗಳಲ್ಲಿ ಪ್ರಕರಣಗಳ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್‌ ಬಳಸಲು ಸುಪ್ರೀಂ ನಿರ್ದೇಶನ

ಕೋವಿಡ್ ವೈರಸ್ ಮಹಾಮಾರಿಗೆ ಸೋಲುತ್ತಿದೆಯೇಕೆ ಅಮೆರಿಕ ?

ಕೋವಿಡ್ ವೈರಸ್ ಮಹಾಮಾರಿಗೆ ಸೋಲುತ್ತಿದೆಯೇಕೆ ಅಮೆರಿಕ ?

ಮೃತ ವೃದ್ಧನ ಪತ್ನಿ, ಸಹೋದರನಿಗೂ  ಸೋಂಕು ; ಬಾಗಲಕೋಟೆಯಲ್ಲಿ ಸೋಂಕಿತ ಸಂಖ್ಯೆ ಮೂರಕ್ಕೆ ಏರಿಕೆ

ಮೃತ ವೃದ್ಧನ ಪತ್ನಿ, ಸಹೋದರನಿಗೂ  ಸೋಂಕು ; ಬಾಗಲಕೋಟೆಯಲ್ಲಿ ಸೋಂಕಿತ ಸಂಖ್ಯೆ ಮೂರಕ್ಕೆ ಏರಿಕೆ

ಕೋವಿಡ್ 19 ವಿರುದ್ಧ ಹೋರಾಡಲು ಲಾಕ್ ಡೌನ್ ಮುಂದುವರಿಸಿ: ಪ್ರಧಾನಿಗೆ ಸಿಎಂ ಕೆಸಿಆರ್

ಕೋವಿಡ್ 19 ವಿರುದ್ಧ ಹೋರಾಡಲು ಲಾಕ್ ಡೌನ್ ಮುಂದುವರಿಸಿ: ಪ್ರಧಾನಿಗೆ ಸಿಎಂ ಕೆಸಿಆರ್

ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ

ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ

ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು

ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು

ಚೀನದಲ್ಲಿ ಮತ್ತೆ 30 ಕೋವಿಡ್ 19 ಸೋಂಕು ಕೇಸ್‌

ಚೀನದಲ್ಲಿ ಮತ್ತೆ 30 ಕೋವಿಡ್ 19 ಸೋಂಕು ಕೇಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tk–tdy-1

ಮಹಿಳಾ ಸಂಘದಿಂದ ಮಾಸ್ಕ್ ತಯಾರಿ

ಮಾಸ್ಕ್ ವಿತರಣೆಗೆ ಚಾಲನೆ

ಮಾಸ್ಕ್ ವಿತರಣೆಗೆ ಚಾಲನೆ

ರೈತರ ನೆರವಿಗೆ ಬಂದ ಜಿಲ್ಲಾಡಳಿತ

ರೈತರ ನೆರವಿಗೆ ಬಂದ ಜಿಲ್ಲಾಡಳಿತ

ಜಿಲ್ಲಾದ್ಯಂತ ಕುಡಿವ ನೀರಿಗೆ ಹಾಹಾಕಾರ

ಜಿಲ್ಲಾದ್ಯಂತ ಕುಡಿವ ನೀರಿಗೆ ಹಾಹಾಕಾರ

ವರ್ತಕರಿಂದ ಅಗತ್ಯ ವಸ್ತು ಸಂಗ್ರಹ

ವರ್ತಕರಿಂದ ಅಗತ್ಯ ವಸ್ತು ಸಂಗ್ರಹ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

Supreme-Court-Of-India-3-726

 ಹೈಕೋರ್ಟ್ ಗಳಲ್ಲಿ ಪ್ರಕರಣಗಳ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್‌ ಬಳಸಲು ಸುಪ್ರೀಂ ನಿರ್ದೇಶನ

14 ತಿಂಗಳ ಮಗುವಿಗೆ ಕೋವಿಡ್ 19 ಸೋಂಕು

14 ತಿಂಗಳ ಮಗುವಿಗೆ ಕೋವಿಡ್ 19 ಸೋಂಕು

ಕೋವಿಡ್ ಕಳವಳ: ಏಕತಾ ಪ್ರತಿಮೆಯನ್ನೇ ಹರಾಜಿಗಿಟ್ಟ OLX

ಕೋವಿಡ್ ಕಳವಳ: ಏಕತಾ ಪ್ರತಿಮೆಯನ್ನೇ ಹರಾಜಿಗಿಟ್ಟ OLX!

ಕೋವಿಡ್ ವೈರಸ್ ಮಹಾಮಾರಿಗೆ ಸೋಲುತ್ತಿದೆಯೇಕೆ ಅಮೆರಿಕ ?

ಕೋವಿಡ್ ವೈರಸ್ ಮಹಾಮಾರಿಗೆ ಸೋಲುತ್ತಿದೆಯೇಕೆ ಅಮೆರಿಕ ?

ಮೃತ ವೃದ್ಧನ ಪತ್ನಿ, ಸಹೋದರನಿಗೂ  ಸೋಂಕು ; ಬಾಗಲಕೋಟೆಯಲ್ಲಿ ಸೋಂಕಿತ ಸಂಖ್ಯೆ ಮೂರಕ್ಕೆ ಏರಿಕೆ

ಮೃತ ವೃದ್ಧನ ಪತ್ನಿ, ಸಹೋದರನಿಗೂ  ಸೋಂಕು ; ಬಾಗಲಕೋಟೆಯಲ್ಲಿ ಸೋಂಕಿತ ಸಂಖ್ಯೆ ಮೂರಕ್ಕೆ ಏರಿಕೆ