ಜಿಲ್ಲೆಗೆ 25 ಟಿಎಂಸಿ ನೀರು ಈವರೆಗೂ ಹರಿದಿಲ್ಲ

ಬಾಗೂರು ನವಿಲೆ ಬಳಿ ನಾಲೆ ಪರಿಶೀಲಿಸಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ••ಪರಿಹಾರ ಭರವಸೆ

Team Udayavani, Jul 8, 2019, 1:33 PM IST

tk-tdy-3..

ತುಮಕೂರು ಜಿಲ್ಲೆಗೆ ನೀರು ಹರಿಸುವ ಹಾಸನ ಜಿಲ್ಲೆಯ ಬಾಗೂರು ನವಿಲೆ ಬಳಿ ಭಾನುವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭೇಟಿ ನೀಡಿ ನಾಲೆ ವೀಕ್ಷಿಸಿದರು.

ತುಮಕೂರು: ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ಹರಿಯಬೇಕಾಗಿರುವ 25 ಟಿಎಂಸಿ ನೀರು ಈವರೆಗೂ ಹರಿದಿಲ್ಲ, ನೀರು ಹರಿಯುವ ನಾಲೆಗೆ ಬಂಡೆಗಳನ್ನು ಹಾಕಿ ಹರಿಯುವ ನೀರಿಗೆ ತಡೆಯೊಡ್ಡಲಾಗುತ್ತಿದೆ. ಇದನ್ನು ಮನಗಂಡು ಖುದ್ದು ವೀಕ್ಷಣೆಗೆ ಬಂದಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಭಾನುವಾರ ಬಾಗೂರು ನವಿಲೆ ಬಳಿ ಸುರಂಗ ಮಾರ್ಗದಲ್ಲಿ ನಾಲೆ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ನೀರು ತಡೆಗಟ್ಟುವ ಕೆಲಸ ನಡಿತೀದೆ: ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ 25 ಟಿ.ಎಂ.ಸಿ. ನೀರು ಹರಿಸುವಂತೆ ನಿಗದಿಪಡಿಸಲಾಗಿದೆ. ಆದರೆ ಇದುವರೆವಿಗೂ 25 ಟಿ.ಎಂ.ಸಿ. ನೀರು ಹರಿದಿಲ್ಲ. ಬದಲಾಗಿ ನಾಲೆಗೆ ಬಂಡೆಗಳನ್ನು ಹಾಕಿ ಹರಿಯುವ ನೀರು ತಡೆಗಟ್ಟುವ ಕೆಲಸ ನಡೆಯುತ್ತಿದೆ. ನಾಲೆಗೆ ಬಂಡೆ ಹಾಕುವವರು ಯಾರು ಎಂಬ ವಿಚಾರ ಎಲ್ಲರಿಗೂ ತಿಳಿದಿದೆ ಎಂದು ಮಾರ್ಮಿಕವಾಗಿ ಹೇಳಿದರು.

ತುಮಕೂರು ಜಿಲ್ಲೆಯಲ್ಲಿ ಜನ ಕುಡಿಯಲು ನೀರಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಿದ್ದರೂ ನಿಗದಿಯಾಗಿರುವ ನೀರು ಹರಿಸಲು ಅಡ್ಡಿಪಡಿಸುತ್ತಿರುವುದರಿಂದ ಈ ಭಾಗದ ಜನರು ನೀರಿಗಾಗಿ ಪರಿತಪಿಸುವಂತಾಗಿದೆ ಎಂದರು.

ಸಮಸ್ಯೆ ನಿವಾರಿಸುವ ಭರವಸೆ: ಹೇಮಾವತಿ ನಾಲೆ ಆಧುನೀಕರಣಗೊಳಿಸಿ ಅಲ್ಲಿಗೆ ನಿಗದಿಪಡಿಸಿರುವ 25 ಟಿಎಂಸಿ ನೀರನ್ನು ಹರಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸೂಚಿಸಿದ ಅವರು, ಜನಸಾಮಾನ್ಯರ ಹಿತ ಕಾಪಾಡಲು ಸರ್ಕಾರಗಳು ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿವೆ. ಸರ್ಕಾರದ ಹಣ ದುರುಪಯೋಗವಾಗದೆ ಸದುಪಯೋಗವಾಗಬೇಕು ಎಂಬ ಆಶಯ ತಮ್ಮದಾಗಿದೆ. ಹೀಗಾಗಿ ಹೇಮಾವತಿ ನಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಇಲ್ಲಿರುವ ಜ್ವಲಂತ ಸಮಸ್ಯೆ ಶಾಶ್ವತವಾಗಿ ನಿವಾರಿಸಲು ಶ್ರಮಿಸುವುದಾಗಿ ತಿಳಿಸಿದರು.

ಹೇಮಾವತಿ ನಾಲೆ ಆಧುನೀಕರಣ ಕಾಮಗಾರಿಗೆ ಮಂಜೂರಾಗಿರುವ ಹಣವನ್ನು ಸಕಾಲದಲ್ಲಿ ಬಿಡುಗಡೆ ಮಾಡಿಸಿ ಮುಂದಿನ ವರ್ಷದಿಂದಲಾದರೂ ನೀರು ಹರಿಯಲು ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಸದರು ಮತ್ತು ಶಾಸಕರಿಗೆ ತಿಳಿಸಿದ್ದೇನೆ ಎಂದರು.

ಈಗಾಗಲೇ ಹೇಮಾವತಿ ನಾಲೆಯ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ. ಇನ್ನೊಮ್ಮೆ ನಾಲಾ ವೀಕ್ಷಣೆಗೆ ಬಂದು ಅಧಿಕಾರಿಗಳೊಂದಿಗೆ ಅರ್ಧ ದಿನ ಇಲ್ಲೇ ಇದ್ದು, ಏನೇನು ಕೆಲಸ ಆಗಬೇಕು, ಏನೇನು ಆಗಿದೆ ಎಂಬ ಬಗ್ಗೆ ಸುದೀರ್ಘ‌ವಾಗಿ ಚರ್ಚಿಸಿ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಅನುದಾನ ಸದುಪಯೋಗವಾಗಲಿ: ಹೇಮಾವತಿ ನಾಲಾ ಆಧುನೀಕರಣ ಕಾಮಗಾರಿಗೆ ಇನ್ನು ಹೆಚ್ಚಿನ ಹಣದ ಅಗತ್ಯವಿದ್ದರೆ ಸರ್ಕಾರದಿಂದ ಬಿಡುಗಡೆ ಮಾಡಿಸಲು ಪ್ರಯತ್ನಿಸುವುದಾಗಿ ಹೇಳಿದ ಅವರು, ಸಾವಿರಾರು ಕೋಟಿ ರೂ. ಖರ್ಚು ಮಾಡಿದರೂ ಜನತೆ ನೀರಿಲ್ಲದೆ ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಮುಂದಾದರೂ ಸರ್ಕಾ ರದ ಹಣ ದುರುಪಯೋಗವಾಗದೆ ಸದುಪ ಯೋಗವಾಗಬೇಕು. ಈ ದಿಸೆಯಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಎಚ್ಚರಿಸಿದರು.

ನಾಲಾ ಆಧುನೀಕರಣ ಕಾಮಗಾರಿ ಕೆಲಸ ಯಾವಾಗ ಪ್ರಾರಂಭ ಮಾಡುತ್ತಾರೆ. ಎಷ್ಟೆಷ್ಟು ಹಣ ಮಂಜೂರಾಗಿದೆ. ಎಲ್ಲದರ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ ಎಂದರು.

ಸಂಸದ ಜಿ.ಎಸ್‌.ಬಸವರಾಜು, ಶಾಸಕರಾದ ಪ್ರೀತಂಗೌಡ, ಮಸಾಲೆ ಜಯರಾಮ್‌, ಬಿ.ಸಿ.ನಾಗೇಶ್‌, ಮಾಜಿ ಸಚಿವ ಎಸ್‌.ಶಿವಣ್ಣ, ಮಾಜಿ ಶಾಸಕ ಬಿ.ಸುರೇಶ್‌ಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಡಾ.ಎಂ.ಆರ್‌.ಹುಲಿನಾಯ್ಕರ್‌, ಎಸ್‌.ಶಿವಪ್ರಸಾದ್‌, ಹೆಬ್ಟಾಕ ರವಿಶಂಕರ್‌ ಮತ್ತಿತರರಿದ್ದರು.

ಮುಖ್ಯ ಇಂಜಿನಿಯರ್‌ ಜೊತೆ ಚರ್ಚೆ:

ಬಾಗೂರು-ನವಿಲೆ ಸುರಂಗ ಮಾರ್ಗ ಹಾಗೂ ನಾಲೆ ಆಧುನೀಕರಣ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಮಾವತಿ ನಾಲಾ ಮುಖ್ಯ ಇಂಜಿನಿಯರ್‌ ಬಾಲಕೃಷ್ಣ ಜೊತೆ ಚರ್ಚಿಸಿದರು. ನಾಲಾ ಆಧುನೀಕರಣ ಕಾಮಗಾರಿ ಶೀಘ್ರ ಮುಗಿಸಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ನೀರು ಒದಗಿಸಬೇಕು ಎಂದು ಇಂಜಿನಿಯರ್‌ಗೆ ಸೂಚಿಸಿದರು. ಇನ್ನೊಂದು ವಾರದೊಳಗೆ ನಾಲೆ ಸ್ವಚ್ಛತೆಗೊಳಿಸುವುದಾಗಿ ಮುಖ್ಯ ಇಂಜಿನಿಯರ್‌ ಬಾಲಕೃಷ್ಣ ಭರವಸೆ ನೀಡಿದರು.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.