ಕೆರೆ ಅಭಿವೃದ್ಧಿ ಮಾಡದೆ 3.16 ಲಕ್ಷ ವಂಚನೆ

Team Udayavani, Nov 28, 2019, 5:49 PM IST

tk-tdy-2

ಕುಣಿಗಲ್‌: ಕೆರೆ ಅಭಿವೃದ್ಧಿ ಕಾಮಗಾರಿ ನಡೆಸದೆ 1.70 ಲಕ್ಷ ರೂ. ಬಿಲ್‌ ಡ್ರಾ ಮಾಡಿಕೊಂಡಿರುವ ಪಿಡಿಒ ಹಾಗೂ ಅಧ್ಯಕ್ಷನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತಾಲೂಕಿನ ಕೆ.ಹೊನ್ನಮಾಚನ ಹಳ್ಳಿ ವ್ಯಾಪ್ತಿಯ ಪುಟ್ಟನಪಾಳ್ಯ ಗ್ರಾಮಸ್ಥರು ಆಗ್ರಹಿಸಿದರು.

2019-20ನೆ ಸಾಲಿನಲ್ಲಿ ನರೇಗಾ ಯೋಜನೆಯಡಿ 3.20 ಲಕ್ಷ ರೂ. ವೆಚ್ಚದಲ್ಲಿ ಪುಟ್ಟನಪಾಳ್ಯ ಕೆರೆ ಅಭಿವೃದ್ಧಿ ಕೈಗೊಂಡು ಕಾಮಗಾರಿ ಮಾಡದೆ ಈಗಾಗಲೇ ಪಿಡಿಒ ಕೃಷ್ಣ ಮೂರ್ತಿ, ಗ್ರಾಪಂ ಅಧ್ಯಕ್ಷ ಉಮೇಶ್‌ ಹಾಗೂ ಎಂಜಿನಿಯರ್‌ ದೇವೇಗೌಡ 2.30ಲಕ್ಷ ರೂ. ವಂಚಿಸಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮಕೈಗೊಂಡು ಕಾಮಗಾರಿ ಅನುಷ್ಠಾನಗೊಳಿಸ ಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕೆಲವರ ಹೆಸರಿಗೆ ಹಣ: ಗ್ರಾಮದ ಮುಖಂಡ ನಾಗರಾಜ್‌ ಮಾತನಾಡಿ, 2019-20ನೇ ಸಾಲಿನನರೇಗಾ ಯೋಜನೆಯಡಿ ಪುಟ್ಟನಪಾಳ್ಯ ಗ್ರಾಮದ ಕೆರೆ ಅಭಿವೃದ್ಧಿ ಯೋಜನೆಯಡಿ 3.20 ಲಕ್ಷ ರೂ. ಕಾಮಗಾರಿಗೆ ಕ್ರಿಯಾಯೋಜನೆ ರೂಪಿಸಿ ಈ ಪೈಕಿ 2.70 ಲಕ್ಷ ರೂ. ಕೂಲಿ ಹಣ ಹಾಗೂ 50 ಸಾವಿರ ರೂ. ಸಾಮಗ್ರಿ ಹಣ ಎಂದು ನಮೂದಿಸಿ ಕಾಮಗಾರಿಗೆ ಅನುಮೋದನೆ ಪಡೆದಿದ್ದು, ಕೆರೆಯಲ್ಲಿ ಒಂದು ಮಣ್ಣು ತೆಗೆಯದೆ ಗ್ರಾಪಂ ಅಧ್ಯಕ್ಷ, ಪಿಡಿಒ, ನರೇಗಾ ಎಂಜಿನಿಯರ್‌ ಶಾಮೀಲಾಗಿ 1.70 ಲಕ್ಷರೂ. 8ನೇ ತಿಂಗಳಲ್ಲಿ ಕೂಲಿ ಮಾಡಲಾಗಿದೆ ಎಂದು ಕೆಲವರ ಹೆಸರಿಗೆ ಹಣ ವರ್ಗಾವಣೆ ಮಾಡಿ ಕೊಂಡಿದ್ದಾರೆ ಎಂದು ದೂರಿದ್ದಾರೆ.

ಉಡಾಫೆ ಉತ್ತರ: ಅಕ್ರಮದ ಕುರಿತು ಪಿಡಿಒ ಕೃಷ್ಣಮೂರ್ತಿ ಅವರನ್ನು ಕೇಳಿದರೆ “ಅಚಾತುರ್ಯದಿಂದ ಕೂಲಿ ಹಣ ಹಾಕಲಾಗಿದೆ. ವಾಪಸ್‌ ತೆಗೆ ಸೋಣ’ ಎನ್ನುತ್ತಾರೆ. ನರೇಗಾ ಎಂಜಿನಿಯರ್‌ ದಾಸೇಗೌಡರನ್ನು ಕೇಳಿದರೆ “ಏನೋ ಅಗಿದೆ ಬಿಡ್ರಿ ಕೆಲಸ ಮಾಡಿಸೋಣ’ ಎಂಬ ಹಾರಿಕೆ ಉತ್ತರ ನೀಡುತ್ತಾರೆ. ಇದನ್ನು ಖಂಡಿಸಿ ಇಒ, ಎಸಿಬಿಗೆ ದೂರು ನೀಡಿದ್ದರಿಂದ ಗುತ್ತಿಗೆ ಪಡೆದವರು ಜೆಸಿಬಿ ಬಳಸಿ ಕೆಲಸ ಮಾಡಲು ಬಂದಿದ್ದು, ತಡೆದಿದ್ದಕ್ಕೆ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ಹೇಳಿದರು.

ಮೊದಲೇ ತಾಲೂಕಿನಲ್ಲಿ ನರೇಗಾ ಅಕ್ರಮ ಸಾಕಷ್ಟಿದ್ದು, ಈಗಾಗಲೇ ರಾಜ್ಯಮಟ್ಟದ ತಂಡ ತನಿಖೆ ನಡೆಸುತ್ತಿದ್ದರೂ ಕೆಲ ಪ್ರಭಾವಿಗಳು ಹಾಗೂ ಭ್ರಷ್ಟ ಅಧಿಕಾರಿಗಳು ನಿಯಮ ಗಾಳಿಗೆ ತೂರಿ ಯಾವುದೇ ಕಾಮಗಾರಿ ಮಾಡದೆ ಹಣ ಲೂಟಿ ಮಾಡುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಮೇಲಧಿಕಾರಿಗಳು ಗಮನ ಹರಿಸಿ ಕಾಮಗಾರಿ ಮಾಡದೆ ಹಣ ಪಾವತಿ ಮಾಡಿದ ಎಲ್ಲರ ಮೇಲೂ ಪ್ರಕರಣ ದಾಖಲಿಸ ಬೇಕೆಂದು ಒತ್ತಾಯಿಸಿದ್ದಾರೆ, ಗ್ರಾಮಸ್ಥರಾದ ಹರೀಶ್‌, ಪಿಎಸ್‌ ನಾಗರಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6arrest

ಕುಣಿಗಲ್: ಕತ್ತು ಸೀಳಿ ಹತ್ಯೆ; ಆರೋಪಿಗಳಿಬ್ಬರ ಬಂಧನ

ಸಂವಿಧಾನದ ಸವಿ ನೆನಪಿಗೆ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕು:  ನಾಹಿದಾ ಜಮ್ ಜಮ್

ಸಂವಿಧಾನದ ಸವಿ ನೆನಪಿಗೆ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕು:  ನಾಹಿದಾ ಜಮ್ ಜಮ್

ಹಾಸ್ಟೆಲ್‌ ಮಕ್ಕಳಿಗೆ 3 ತಿಂಗಳಿಂದ ಅಕ್ಕಿಯಿಲ್ಲ 

ಹಾಸ್ಟೆಲ್‌ ಮಕ್ಕಳಿಗೆ 3 ತಿಂಗಳಿಂದ ಅಕ್ಕಿಯಿಲ್ಲ 

ಪುರದಮಠದ ಬಳಿ ತ್ಯಾಜ್ಯ ವಿಲೇವಾರಿ ಘಟಕ ಬೇಡ

ಪುರದಮಠದ ಬಳಿ ತ್ಯಾಜ್ಯ ವಿಲೇವಾರಿ ಘಟಕ ಬೇಡ

ಬಿಜೆಪಿ ಸರ್ಕಾರದ ಸಾಧನೆ ಜನರಿಗೆ ತಿಳಿಸಿ

ಬಿಜೆಪಿ ಸರ್ಕಾರದ ಸಾಧನೆ ಜನರಿಗೆ ತಿಳಿಸಿ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.