
ಆಹಾರ ಅರಸಿ ಬಂದು ಮರಕ್ಕೆ ಸಿಕ್ಕಿ ಹಾಕಿಕೊಂಡ ಕರಡಿ
Team Udayavani, Jan 26, 2023, 6:58 PM IST

ಕುಣಿಗಲ್ : ಸಪೋಟ ಹಣ್ಣಿನ ಮರಕ್ಕೆ ಕಟ್ಟಿದ ತಂತಿಗೆ ಸಿಕ್ಕಿಕೊಂಡು ಗಾಯಗೊಂಡಿದ್ದ ಕರಡಿಯನ್ನು ಅರಣ್ಯಾಧಿಕಾರಿಗಳು ಅರವಳಿಕೆ ನೀಡಿ ರಕ್ಷಣೆ ಮಾಡಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಕಾಡಬೋರನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.ಮೂರು ವರ್ಷದ ಗಂಡು ಕರಡಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸಂರಕ್ಷಿಸಿದ್ದಾರೆ.
ಕರಡಿ ಉಪಟಳ
ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಹಲವು ಗ್ರಾಮಗಳು ಬೆಟ್ಟ, ಗುಡ್ಡ, ದಟ್ಟವಾದ ಅರಣ್ಯವಿರುತ್ತದೆ ಈ ಪ್ರದೇಶದಲ್ಲಿ ಚಿರತೆ ಹಾಗೂ ಕರಡಿಗಳ ಉಪಟಳ ಹೆಚ್ಚಾಗಿದೆ, ಡಿ13 ರಂದು ಎಲೆಕಡಕಲು ಗ್ರಾಮದ ಯುವ ರೈತ ರಾಜು ಕರಡಿ ದಾಳಿಯಿಂದ ಮೃತಪಟ್ಟಿದ್ದು ಜನರು ಭಯಭೀತಿಯಲ್ಲಿ ಇದ್ದರು ಇತ್ತಾ ಅರಣ್ಯಾಧಿಕಾರಿಗಳ ನಿದ್ದೆ ಗೆಡಿಸಿದೆ.
ಆಹಾರ ಅರಸಿ ಬಂದು ಸಿಕ್ಕಿಕೊಂಡ ಕರಡಿ
ಕಾಡಬೋರನಹಳ್ಳಿ ಗ್ರಾಮದ ರಾಜಣ್ಣ ಅವರ ಜಮೀನಿನಲ್ಲಿ ಸಪೋಟ ಸೇರಿದಂತೆ ವಿವಿಧ ಹಣ್ಣಿನ ಮರಗಳು ಬೆಳೆದಿವೆ, ಮರಕ್ಕೆ ತಂತಿಯನ್ನು ಕಟ್ಟಲಾಗಿತ್ತು, ಈ ವೇಳೆ ಆಹಾರಕ್ಕಾಗಿ ಅರಸಿ ಬಂದ ಕರಡಿ ಮರ ಹತ್ತುವ ವೇಳೆ ಮರಕ್ಕೆ ಕಟ್ಟಿದ ತಂತಿಗೆ ಸಿಕ್ಕಿ ಹಾಕಿಕೊಂಡು ಕೆಳಕ್ಕೆ ಇಳಿಯಲಾಗದೇ ಜೋತು ಬಿದ್ದಿತು, ಈ ಸಂಬಂಧ ಗ್ರಾಮಸ್ಥರು ದೂರವಾಣಿ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಅರವಳಿಕೆ ನೀಡಿ ರಕ್ಷಣೆ
ತಕ್ಷಣ ಕಾರ್ಯಪ್ರವೃತ್ತರಾದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ, ವಲಯ ಅರಣ್ಯಾಧಿಕಾರಿ ಮಹಮದ್ ಮನ್ಸೂರ್, ಬನ್ನೇರುಘಟ್ಟ ವನ್ಯ ಜೀವಿ ವಿಭಾಗದ ಪಶು ವೈದ್ಯಾಧಿಕಾರಿ ಉಮಾಶಂಕರ್ ಕರಡಿಗೆ ಅರವಳಿಕೆ ನೀಡಿ ಅದನ್ನು ರಕ್ಷಿಸಿ, ಆರೋಗ್ಯ ತಪಾಸಣೆ ಮಾಡಿ ಸೂಕ್ತ ಜಾಗಕ್ಕೆ ಸ್ಥಳಾಂತರಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಟಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ 40 ಮನೆಗಳು ರಾತ್ರೋರಾತ್ರಿ ನೆಲಸಮ

ಸಾರ್ವಜನಿಕ ಕುಂದು-ಕೊರತೆ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

ಉಚಿತ ಸಾಮೂಹಿಕ ವಿವಾಹಕ್ಕೆ ಸಿದ್ದರಬೆಟ್ಟ ಶ್ರೀಗಳಿಂದ ಅರ್ಜಿ ಆಹ್ವಾನ

ರೈತರಿಗೆ ಸಾಗುವಳಿ ಚೀಟಿ ನೀಡಲು ಮೀನಾಮೇಷ: ಕಂದಾಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಮುಕ ಶಿಕ್ಷಕ ಕರ್ತವ್ಯದಿಂದ ಅಮಾನತು