ವೇತನ, ಭವಿಷ್ಯ ನಿಧಿ ನೀಡದೆ ದಬ್ಟಾಳಿಕೆ


Team Udayavani, Sep 14, 2019, 2:29 PM IST

tk-tdy-2

ಕೊರಟಗೆರೆ ತಾಲೂಕು ಕಸಬಾ ಹೋಬಳಿ ಬಜ್ಜನಹಳ್ಳಿ ಬಳಿಯ ಗಾರ್ಮೆಂಟ್ಸ್‌ ಎದುರು ಭವಿಷ್ಯನಿಧಿ ಮತ್ತು ಸಂಬಳಕ್ಕೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಕೊರಟಗೆರೆ: ಎರಡು ತಿಂಗಳ ವೇತನ ಮತ್ತು 1 ವರ್ಷದ ವಿಶೇಷ ಭತ್ಯೆ ಜೊತೆ ಭವಿಷ್ಯ ನಿಧಿ ನೀಡದೆ ದಬ್ಟಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗಾರ್ಮೆಂಟ್ಸ್‌ ಎದುರು 300ಕ್ಕೂ ಹೆಚ್ಚು ಕಾರ್ಮಿಕರು ಶುಕ್ರವಾರ ಪ್ರತಿಭಟನೆ ನಡೆಸಿದರು. ಕಸಬಾ ಹೋಬಳಿ ಬಜ್ಜನಹಳ್ಳಿ ಬಳಲಿಯ ಬಳಿಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಕಳೆದ ಎರಡು ತಿಂಗಳ ಸಂಬಳ ಮತ್ತು 1 ವರ್ಷದಿಂದ ಭವಿಷ್ಯನಿಧಿ ನೀಡದೆ ಮಾಲೀಕರು ದಬ್ಟಾಳಿಕೆ ನಡೆ ಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಾರ್ಮೆಂಟ್ಸ್‌ ಲೆಕ್ಕಾಧಿಕಾರಿ ರಾಘವೇಂದ್ರ ರಾಜಅರಸ್‌ ಮಾತನಾಡಿ, ಕಂಪನಿ ಪ್ರಾರಂಭ ಆದಾಗ 1600 ಕಾರ್ಮಿಕರಿದ್ದರು. ಈಗ ಕೇವಲ 300 ಕಾರ್ಮಿಕರಿದ್ದಾರೆ. ಐದು ಘಟಕದಲ್ಲಿ ನಾಲ್ಕು ಮುಚ್ಚಿದ್ದಾರೆ. ಈಗ ಗಾರ್ಮೆಂಟ್ಸ್‌ ಮಾತ್ರ ಉಳಿದಿದೆ. ನಮ್ಮ ಸಮಸ್ಯೆ ಹೇಳಿದರೆ ವರ್ಗಾವಣೆ ಅಥವಾ ಕೆಲಸದಿಂದ ವಜಾ ಮಾಡುತ್ತಾರೆ ಎಂದು ಕಿಡಿಕಾರಿದರು.

ಕಾರ್ಮಿಕ ಹರೀಶ್‌ ಮಾತನಾಡಿ, ಕಾರ್ಮಿಕರು ಪ್ರತಿಭಟನೆ ಮಾಡಿದಾಗ ಸಂಬಳ ಕೊಡುತ್ತಾರೆ. ಸಂಬಳದಿಂದ ಭವಿಷ್ಯನಿಧಿ ಕಡಿತ ಮಾಡಿ ಸರ್ಕಾರಕ್ಕೆ ಹಣ ಕಟ್ಟದೆ ನಿರ್ಲಕ್ಷ್ಯ ಮಾಡಿದ್ದಾರೆ. ನಮಗೆ ಎರಡು ತಿಂಗಳ ಸಂಬಳದ ಜೊತೆ ಒಂದು ವರ್ಷದ ಭವಿಷ್ಯನಿಧಿ ಬರಬೇಕಾಗಿದೆ ಎಂದು ಆಗ್ರಹಿಸಿದರು.

ಶಿವಮ್ಮ ಮಾತನಾಡಿ, ಆರು ವರ್ಷದಿಂದ ಗಾರ್ಮೆಂಟ್ಸ್‌ ನಂಬಿ ಜೀವನ ಮಾಡುತ್ತಿದ್ದೇನೆ. ಈಗ ಏಕಾಏಕಿ ಗಾರ್ಮೆಂಟ್ಸ್‌ ವಾಹನಗಳಿಗೆ ವಿಮೆ ಮತ್ತು ದಾಖಲೆ ಇಲ್ಲವೆಂದು ಕಂಪನಿ ವಾಹನ ನಿಲ್ಲಿಸಿದ್ದಾರೆ. ಸಮಸ್ಯೆ ಕೇಳುವ ಕಾರ್ಮಿಕ ಅಧಿಕಾರಿ ಮತ್ತು ಭವಿಷ್ಯನಿಧಿ ಅಧಿಕಾರಿಗಳು ನಾಪತ್ತೆಯಾಗಿ ದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕರಾದ ರಾಕೇಶ್‌, ರಾಘವೇಂದ್ರ, ಈಶ್ವರ, ಸುರೇಶ್‌, ಲೊಕೇಶ್‌, ನಾಗರಾಜು, ಕೃಷ್ಣ, ಮೋಹನ, ಗೋಪಾಲ, ಅಂಬಿಕಾ, ಮಂಜುಳ, ಗಂಗಮ್ಮ, ರತ್ನಮ್ಮ, ಶಶಿ, ವೀರಕ್ಯಾತ, ಹರೀಶ, ರವಿಕುಮಾರ 300ಕ್ಕೂ ಹೆಚ್ಚು ಕಾರ್ಮಿಕರು ಇತರರು ಇದ್ದರು.

ಟಾಪ್ ನ್ಯೂಸ್

hgjghgfd

ಎರಡೂ ಉಪ ಚುನಾವಣೆ ಬಿಜೆಪಿ ಗೆಲುವುದು ನಿಶ್ಚಿತ : ನಾರಾಯಣಸ್ವಾಮಿ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಗ್ಗಾವಿ ಗ್ರಾಮದಲ್ಲಿ ಹಣ-ಆಸ್ತಿಗಾಗಿ ತಂದೆಯಿಂದಲೇ ಮಗನಿಗೆ ಹಿಂಸೆ

ಚಿಗ್ಗಾವಿ ಗ್ರಾಮದಲ್ಲಿ ಹಣ-ಆಸ್ತಿಗಾಗಿ ತಂದೆಯಿಂದಲೇ ಮಗನಿಗೆ ಹಿಂಸೆ

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

ಪಾಲಿಕೆಗೆ ಬರಬೇಕಿದೆ 18.81 ಕೋಟಿ ನೀರಿನ ಕರ „ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡರೆ ಎಲ್ಲರ ಮನೆಗೂ ನೀರು

ತುಮಕೂರಲ್ಲಿ 15 ಸಾವಿರಕ್ಕೂ ಹೆಚ್ಚು ಅಕ್ರಮ ನಲ್ಲಿ

ಏತ ನೀರಾವರಿ ಯೋಜನೆ ಅವೈಜ್ಞಾನಿಕ ಎಂಬ ಹೇಳಿಕೆ ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಾಗಿದೆ: ಸುರೇಶ್‌ಗೌಡ ವಾಗ್ದಾಳಿ

ನೀರಾವರಿ ಯೋಜನೆಗೆ ಗೌರಿಶಂಕರ್‌ ಅಡ್ಡಗಾಲು

Apply for Taluk Rajyotsava Award

ತಾಲೂಕು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

hgjghgfd

ಎರಡೂ ಉಪ ಚುನಾವಣೆ ಬಿಜೆಪಿ ಗೆಲುವುದು ನಿಶ್ಚಿತ : ನಾರಾಯಣಸ್ವಾಮಿ

ನಿಷೇಧಿತ ನೋಟುಗಳ ಬದಲಾವಣೆ ಯತ್ನ ಬಿಬಿಎಂಪಿ ಉಪ ಗುತ್ತಿಗೆದಾರ ಸೇರಿ ಐವರ ಬಂಧನ | 80 ಲಕ್ಷ ರೂ. ಮೌಲ್ಯದ ಅಮಾನ್ಯಗೊಂಡ ನೋಟು ವಶ

ನಿಷೇಧಿತ ನೋಟುಗಳ ಬದಲಾವಣೆ ಯತ್ನ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.