ಮುಂಗಾರು: ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿ

Team Udayavani, Apr 23, 2022, 3:45 PM IST

Untitled-1

ತುಮಕೂರು: ಜಿಲ್ಲೆಯಲ್ಲಿ ಉತ್ತಮ ಮಳೆಯಾಗು ತ್ತಿದ್ದು, ಪೂರ್ವ ಮುಂಗಾರು ಬೆಳೆಗೆ ಅಗತ್ಯವಾದ ಗುಣಮಟ್ಟದ ಬಿತ್ತನೆ ಬೀಜವನ್ನು ಸಕಾಲಕ್ಕೆ ರೈತ ಸಂಪರ್ಕ ಕೇಂದ್ರಗಳಿಗೆ ಪೂರೈಸುವಂತೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಕೃಷಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರ ವಾರ ನಡೆದ 2022ರ ಮುಂಗಾರು ಹಂಗಾಮು ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿ, ಪೂರ್ವ ಮುಂಗಾರು ಬೆಳೆ ಗಳಾದ ಹೆಸರು, ಉದ್ದು, ಹಲಸಂದೆ ಬಿತ್ತನೆ ಮಾಡಲು ಸಕಾಲವಾಗಿರುವುದರಿಂದ ರೈತರಿಗೆ ತೊಂದರೆ ಆಗದಂತೆ ಗುಣಮಟ್ಟದ ಬಿತ್ತನೆ ಬೀಜ ನೀಡುವಂತೆ ತಿಳಿಸಿದರು.

ಕಾರ್ಪೊರೇಷನ್‌ನಿಂದ ಪೂರೈಸಿ: ರೈತರಿಗೆ ನೀಡುವ ಬೀಜಗಳು ಗುಣಮಟ್ಟದಿಂದ ಕೂಡಿರುವ ಬಗ್ಗೆ ಖಾತರಿಪಡಿಸಿಕೊಂಡು ಜಿಲ್ಲೆಯ 50 ರೈತ ಸಂಪರ್ಕ ಕೇಂದ್ರಗಳಲ್ಲದೆ, ಹೆಚ್ಚುವರಿ 8 ಮಾರಾಟ ಕೇಂದ್ರಗಳಿಗೆ ಸರಬರಾಜು ಮಾಡಬೇಕು. ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲಾಗುವ ಬಿತ್ತನೆ ಬೀಜ ಅರ್ಹರಿಗೆ ವಿತರಿಸಲಾಗುವುದು. ಹೆಸರು, ತೊಗರಿ, ಶೇಂಗಾ, ಬಿತ್ತನೆ ಬೀಜಗಳ ಕೊರತೆ ಕಂಡುಬಂದಲ್ಲಿ ಕರ್ನಾಟಕ ಸೀಡ್‌ ಫೆಡರೇಷನ್‌ ಕಾರ್ಪೊರೇಷನ್‌ ನಿಂದ ಪೂರೈಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ರಸಗೊಬ್ಬರ ವಿತರಿಸಿ: ರಾಜ್ಯದಿಂದ ಜಿಲ್ಲೆಗೆ ನಿಗದಿ ಪಡಿಸಿರುವ ರಸಗೊಬ್ಬರವನ್ನು ಸಕಾಲಕ್ಕೆ ಪೂರೈಕೆ ಮಾಡುವಂತೆ ವಿವಿಧ ರಸಗೊಬ್ಬರಗಳ ಸರಬರಾಜು ಏಜೆನ್ಸಿಗಳಿಗೆ ಸೂಚಿಸಿದ ಅವರು, ಮಾರಾಟ ಗಾರರು ಕಡ್ಡಾಯವಾಗಿ ಪಿಒಎಸ್‌ ಯಂತ್ರದ ಮೂಲಕವೇ ರಸಗೊಬ್ಬರ ವಿತರಣೆ ಮಾಡಬೇಕು ಎಂದು ವಿವರಿಸಿದರು.

ಪರವಾನಗಿ ರದ್ದು: ರಸಗೊಬ್ಬರವನ್ನು ಅನವಶ್ಯಕ ದಾಸ್ತಾನು, ಎಂಆರ್‌ಪಿಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ದಲ್ಲಿ ರಸಗೊಬ್ಬರ ನಿಯಂತ್ರಣ ಕಾಯ್ದೆ 1985 ಹಾಗೂ ಅಗತ್ಯ ವಸ್ತುಗಳ ಕಾಯ್ದೆ 1955ರ ಪ್ರಕಾರ ಪರವಾನಗಿಯನ್ನು ರದ್ದುಪಡಿಸ ಲಾಗುವುದು ಎಂದು ಎಚ್ಚರಿಸಿದರು.

ಕೃಷಿ ಇಲಾಖೆಗೆ ಮಾಹಿತಿ ನೀಡಿ: ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನ ಮಾತನಾಡಿ, ಕೃಷಿ ಇಲಾಖೆಯಿಂದ ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜ ವಿತರಿಸಲಾಗುವುದು. ಬಿತ್ತನೆ ಬೀಜಗಳ ಕೊರತೆ ಉಂಟಾದಲ್ಲಿ ಕರ್ನಾಟಕ ಸೀಡ್‌ ಫೇಡರೇಷನ್‌ ಕಾರ್ಪೊರೇಷನ್‌ ಪೂರೈಸಬೇಕು. ರಸಗೊಬ್ಬರಗಳ ಸರಬ ರಾಜು ಮಾಡುವ ಏಜೆನ್ಸಿಗಳಿಂದ ಕೃಷಿ ಇಲಾಖೆಗೆ ಆಗಾಗ್ಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಕೃಷಿ ಸಹಾಯಕ ಅಧಿಕಾರಿಗಳು ಹಾಜರಿದ್ದರು.

ಪೂರ್ವ ಮುಂಗಾರು ಮಳೆ: ರೈತರಲ್ಲಿ ಸಂತಸ : ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಗುಬ್ಬಿ ತಾಲೂಕಿನಲ್ಲಿ ಪೂರ್ವ ಮುಂಗಾರು ಮಳೆ ಆರಂಭ ಆಗುತ್ತಿದ್ದಂತೆ ಭೂಮಿ ಹಸನು ಮಾಡಿ ಮಳೆ ಆರಂಭವಾಗುವುದರೊಳಗೆ ಹೆಸರು, ಉದ್ದು, ಅಲಸಂದೆ ಬಿತ್ತನೆ ಮಾಡಿ ಒಂದು ಬೆಳೆ ಬೆಳೆಯುತ್ತಾರೆ. ಚಿಕ್ಕನಾಯಕನಹಳ್ಳಿ, ತಿಪಟೂರು ಭಾಗದಲ್ಲಿ ಈ ಪೂರ್ವ ಮುಂಗಾರಿನಲ್ಲಿ ಹೆಸರು ಕಾಳು ಬಿತ್ತನೆ ಮಾಡುತ್ತಾರೆ. ಸಕಾಲದಲ್ಲಿ ಪೂರ್ವ ಮುಂಗಾರು ಮಳೆ ಬಂದರೆ ಈ ಪ್ರದೇಶದ ರೈತರಿಗೆ ಒಳ್ಳೆಯ ಆದಾಯ ಕೈಸೇರುತ್ತದೆ. ಈ ಬೆಳೆ ಮುಗಿದ ನಂತರ ಜುಲೈ, ಆಗಸ್ಟ್‌ನಲ್ಲಿ ಮತ್ತೆ ಮುಂಗಾರು ಬಿತ್ತನೆಯಾಗಿ ರಾಗಿ, ಜೋಳ, ಅವರೆ ಬಿತ್ತನೆ ಮಾಡುತ್ತಾರೆ. ಈಗ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಆರಂಭಗೊಂಡಿರುವುದು ರೈತರಲ್ಲಿ ಸಂತಸ ಮೂಡಿದೆ.

ತುಮಕೂರು ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಪೂರ್ವ ಮುಂಗಾರು ಮಳೆಗೆ ಬಿತ್ತನೆ ಮಾಡಲು ಅನುವಾಗುವಂತೆ ಅಲ್ಲಿಲ್ಲಿ ಮಳೆ ಬಿದ್ದಿರುವ ಪರಿಣಾಮ ರೈತರು ಹೆಸರು, ಅಲಸಂದೆ ಸೇರಿ ವಿವಿಧ ಬೆಳೆಗಳನ್ನು ಬೆಳೆಯಲು ಭೂಮಿ ಹಸನು ಮಾಡುತ್ತಿದ್ದಾರೆ. ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ● ರಾಜಸುಲೋಚನಾ, ಜಂಟಿ ನಿರ್ದೇಶಕಿ, ಕೃಷಿ ಇಲಾಖೆ

ರೈತರಿಗೆ ನೀಡುವ ಬೀಜಗಳು ಗುಣಮಟ್ಟದಿಂದ ಕೂಡಿರುವ ಬಗ್ಗೆ ಖಾತರಿಪಡಿಸಿಕೊಂಡು ಜಿಲ್ಲೆಯ 50 ರೈತ ಸಂಪರ್ಕ ಕೇಂದ್ರಗಳಲ್ಲದೆ, ಹೆಚ್ಚುವರಿ 8 ಮಾರಾಟ ಕೇಂದ್ರಗಳಿಗೆ ಸರಬರಾಜು ಮಾಡಬೇಕು. ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲಾಗುವ ಬಿತ್ತನೆ ಬೀಜವನ್ನು ಅರ್ಹ ರೈತ ಫ‌ಲಾನುಭವಿಗಳಿಗೆ ವಿತರಿಸಬೇಕು. ಹೆಸರು, ತೊಗರಿ, ಶೇಂಗಾ, ಬಿತ್ತನೆ ಬೀಜಗಳ ಕೊರತೆ ಕಂಡುಬರದಂತೆ ಅಧಿಕಾರಿಗಳು ಕ್ರಮವಹಿಸಬೇಕು. – ವೈ.ಎಸ್‌.ಪಾಟೀಲ್‌, ತುಮಕೂರು ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.