

Team Udayavani, May 22, 2020, 1:56 PM IST
ತುಮಕೂರು: ಕಲ್ಪತರು ನಾಡಿನಲ್ಲಿ ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 9 ಮಂದಿಗೆ ಕೋವಿಡ್-19 ಸೋಂಕು ತಗಲಿದೆ. ಇವರಲ್ಲಿ ಮುಂಬೈನಿಂದ ಬಂದವರಲ್ಲಿಯೇ ಹೆಚ್ಚು ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯ ಕೋವಿಡ್-19 ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ 9 ಮಂದಿಗೆ ಸೋಂಕು ಇರುವುದು ದೃಢವಾಗಿದೆ. ಈ ಪೈಕಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಂಕಿತೆ ತುಮಕೂರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರಲ್ಲಿಯೂ ಸೋಂಕು ದೃಢaವಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 25 ಕ್ಕೆ ಎರಿಕೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದು ಒಟ್ಟು 105 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1710ಕ್ಕೆ ಏರಿಕೆಯಾಗಿದೆ. ಇದರಲ್ಲಿ 588 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 41 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾನೆ
Ad
ಸಾರ್ವಜನಿಕ ಸ್ಮಶಾನದ ಅಭಿವೃದ್ಧಿಗೆ ಮೀನಾಮೇಷ: ಎ.ಸಿ., ಡಿ.ಸಿ. ಸೂಚನೆಗೂ ಕೇರ್ ಮಾಡದ ಗ್ರಾ.ಪಂ.
Koratagere: ಕಲ್ಲುಕ್ವಾರೆ ಅವಘಡ; ಓರ್ವ ಸಾವು, ಇಬ್ಬರಿಗೆ ಗಾಯ
ಕ್ಯಾಂಟರ್-ಕಾರು ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃ*ತ್ಯು
ಪ್ರಧಾನಿ ಮೋದಿ ಬಿಜೆಪಿಯ ಮಾರ್ಗದರ್ಶಕ ಮಂಡಳಿಗೆ ಹೋಗಬೇಕು: ಕೆ.ಎನ್.ರಾಜಣ್ಣ
Koratagere: ನಿದ್ದೆ ಮಂಪರು… ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರಕ್…
You seem to have an Ad Blocker on.
To continue reading, please turn it off or whitelist Udayavani.