Kunigal: ಪೋಕ್ಸೊ ಪ್ರಕರಣದಡಿ ಬಾಲಮಂಜುನಾಥ ಸ್ವಾಮೀಜಿ ಬಂಧನ
Team Udayavani, Mar 8, 2024, 7:36 AM IST
ಕುಣಿಗಲ್: ತಾಲೂಕಿನ ಹುಲಿಯೂರುದುರ್ಗದ ಹಂಗರಹಳ್ಳಿ ಶ್ರೀ ವಿದ್ಯಾಚೌಡೇಶ್ವರಿ ಮಹಾ ಸಂಸ್ಥಾನ ಮಠದ ಬಾಲ ಮಂಜುನಾಥ ಸ್ವಾಮೀಜಿ ಅವರನ್ನು ಮಾ.7ರ ಗುರುವಾರ ತಡರಾತ್ರಿ ಪೊಲೀಸರು ಪೋಕ್ಸೊ ಕಾಯ್ದೆ ಅಡಿ ಬಂಧಿಸಿದ್ದಾರೆ.
ಚರ್ಮರೋಗ ಚಿಕಿತ್ಸೆ ಕೊಡುವ ನೆಪದಲ್ಲಿ ಬೆತ್ತಲೆ ವಿಡಿಯೋ ಮಾಡಿ ತನ್ನನ್ನು ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಆರು ಮಂದಿ ವಿರುದ್ದ ದೂರು ದಾಖಲಿಸಿದ್ದ ಸ್ವಾಮೀಜಿ ಈಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಚರ್ಮ ರೋಗಕ್ಕೆ ಚಿಕಿತ್ಸೆ ಕೊಡುವ ನೆಪದಲ್ಲಿ ಮಠದ ಬಾಲ ಮಂಜುನಾಥ ಸ್ವಾಮೀಜಿ ಬೆತ್ತಲೆ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್ ಮಾಡಿರುವುದಾಗಿ ಸ್ವಾಮೀಜಿ ಸೇವಕ ಅಭಿಷೇಕ್ ಆತನ ಸಂಬಂದಿ ಯುವತಿ ಸೇರಿ ಆರು ಮಂದಿ ವಿರುದ್ದ ಬ್ಲಾಕ್ ಮೇಲ್ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತನಿಖೆ ಆರಂಭಿಸಿದ ಪೊಲೀಸರಿಗೆ ಅಸಲಿ ಸತ್ಯ ತಿಳಿದು ಬಂದಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬ್ಲಾಕ್ ಮೇಲ್ ತನಿಖೆ ಜಾಡು ಹಿಡಿದ ಪೊಲೀಸರು ಗುರುವಾರ ಸಂಜೆಯಿಂದಲೇ ಮಠದಲ್ಲಿ ತನಿಖೆ ಕೈಗೊಂಡು ರಾತ್ರಿ 11.30 ರವರೆಗೆ ಮುಂದುವರೆದಿದ್ದರು, ಈ ವೇಳೆ ಅಭಿಷೇಕ್ ಕೊಟ್ಟ ಮಾಹಿತಿ ಆಧರಿಸಿ ಸ್ವಾಮೀಜಿ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸತ್ಯ ತಿಳಿದು ಬಂದಿದೆ ಎನ್ನಲಾಗಿದ್ದು, ಎಸ್ಪಿ ಕೆ.ವಿ ಅಶೋಕ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮೂರು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಬಳಿಕ ಸ್ವಾಮೀಜಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ