ಅಗತ್ಯ ವಸ್ತು ಖರೀದಿಗಾಗಿ ಕೊರೊನಾ ಮರೆತ ಜನ

Team Udayavani, Oct 14, 2021, 5:00 PM IST

ಕೊರೋನ ಮರೆತ ಜನ

ತಿಪಟೂರು: ಆಯುಧ ಪೂಜೆ, ವಿಜಯದಶಮಿ ಹಬ್ಬದ ಆಚರಣೆಗೆ ತಾಲೂಕಿನ ಜನತೆ ಕೊರೊನಾದ ನಡುವೆಯೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರದಲ್ಲಿ ಕಳೆದ ಎರಡು ದಿನಗಳಿಂದ ಎಲ್ಲಿ ನೋಡಿದರು ಜನವೋ ಜನ. ಕೊರೊನಾವನ್ನು ಲೆಕ್ಕಿಸದೆ ಜನರು ಓಡಾಡುತ್ತಿದ್ದಾರೆ. ಸರ್ಕಾರದ ನಿಯಮಾವಳಿಯನ್ನು ಯಾರು ಪಾಲಿಸುತ್ತಿಲ್ಲ. ಇತ್ತ ಎಚ್ಚರಿಕೆ ನೀಡಬೇಕಿದ್ದ ನಗರಸಭೆ ಮತ್ತು ಪೊಲೀಸ್‌ ಇಲಾಖೆ ಕೈಚೆಲ್ಲಿ ಕೂತಿದ್ದು, ಕೊರೊನಾಗೆ ಜನರು ಡೋಂಟ್‌ ಕೇರ್‌ ಎನ್ನುತ್ತಿದ್ದಾರೆ.

ಆಯುಧ ಪೂಜೆ ಪ್ರಯುಕ್ತ ನಗರದ ಬಿ.ಎಚ್‌.ರಸ್ತೆ ಸೇರಿದಂತೆ ದೊಡ್ಡಪೇಟೆ, ರೈಲ್ವೆ ಸ್ಟೇಷನ್‌ ರಸ್ತೆ, ಮಾರುಕಟ್ಟೆಗಳ ಕೆಲ ಮುಖ್ಯರಸ್ತೆಗಳು ಜನಜಂಗುಳಿಯಿಂದ ತುಂಬಿವೆ. ಮನೆ, ಅಂಗಡಿ, ಕಚೇರಿ, ವಾಹನಗಳಿಗೆ ಪೂಜೆ ಸಲ್ಲಿಸಲು ಹಣ್ಣು ಹೂವು, ಬಾಳೆಕಂದು, ಮಾವಿನ ಸೊಪ್ಪು, ನಿಂಬೆಹಣ್ಣು ಮತ್ತು ಬೂದ ಕುಂಬಳ ಕಾಯಿಗಳನ್ನು ಖರೀದಿಸಲು ಜನ ಮುಗಿಬಿದ್ದಿದ್ದಾರೆ.

ಬಾಳೆಹಣ್ಣು ಕೆಜಿಗೆ ರೂ 80, ಬಾಳೆಕಂದು ಜೊತೆ 40, ಬೂದಕುಂಬಗಳ ಒಂದಕ್ಕೆ 30-50, ಒಂದು ಮಾರು ಹೂವಿಗೆ 50-150ರೂಗೆ ಮಾರಾಟವಾಗುತ್ತಿತ್ತು. ಇನ್ನು ವಾಹನ ಮಾಲೀಕರು ಗ್ಯಾರೇಜು, ಆಟೋ ಮೊಬೈಲ್ಸ್‌ ಮತ್ತು ವಾಟರ್‌ ಸರ್ವಿಸ್‌ ಸೆಂಟರ್‌ ಗಳಲ್ಲಿ ವಾಹನಗಳನ್ನು ಸರ್ವೀಸ್‌ ಮಾಡಿಸುವಲ್ಲಿ ನಿರತರಾಗಿದ್ದರು. ನಗರದ ಸರ್ಕಾರಿ ಹಾಗೂ ಖಾಸಗಿಯ ಸಾಕಷ್ಟು ಕಚೇರಿಗಳಲ್ಲಿ ಬುಧವಾರವೇ ಆಯುಧಪೂಜೆ ಹಮ್ಮಿಕೊಂಡಿದ್ದರಿಂದ ಕೆಲ ಕಚೇರಿಗಳಲ್ಲಿ ಅಧಿಕಾರಿಗಳು ಪೂಜೆಯಲ್ಲೇ ನಿರತರಾಗಿ ಅತಿಥಿಗಳನ್ನು ಸ್ವಾಗತಿಸಿ ಕಳುಹಿಸುತ್ತಿದ್ದ ದೃಶ್ಯಗಳು ಕಂಡುಬಂದವು.

ಇದನ್ನೂ ಓದಿ;- ಅಕ್ರಮ ಅಕ್ಕಿ ಸಾಗಾಣಿಕೆ: ಪೊಲೀಸರ ದಾಳಿ

ಕೊರೊನಾ ಮರೆತ ಜನತೆ: ನಗರದ ಹೆಚ್ಚು ವ್ಯಾಪಾರ ವಹಿವಾಟು ನಡೆಯುವ ದೊಡ್ಡಪೇಟೆ ಸೇರಿದಂತೆ ಮುಖ್ಯ ಸ್ಥಳಗಳು ಜನಜಂಗುಳಿ ಯಿಂದ ಕೂಡಿದ್ದು, ಸಾಮಾಜಿಕ ಅಂತರ ಮಾಯವಾಗಿತ್ತು. ಬೆರೆಳೆಣಿಕೆಯಷ್ಟು ಜನರು ಮಾತ್ರ ಮಾಸ್ಕ್ ಧರಿಸಿದ್ದು ಬಿಟ್ಟರೆ ಕೊರೊನಾ ಇಲ್ಲವೇನೋ ಎಂಬಂತೆ ಜನರು ಗುಂಪು- ಗುಂಪಾಗಿ ಓಡಾಡುತ್ತಿದ್ದರು. ಹೂ, ಹಣ್ಣು ಕೊಂಡುಕೊಳ್ಳಲು, ಬಟ್ಟೆ ಅಂಗಡಿಗ ಳಲ್ಲಿ ಜನವೋ ಜನ.

ಕೊರೊನಾವನ್ನು ಮೈ ಮರೆತು ಹಬ್ಬದ ಸಡಗರದಲ್ಲಿ ಜನತೆ ಭಾಗಿಯಾಗಿದ್ದಾರೆ. ಇದೇ ರೀತಿ ಜನರು ಕೊರೊನಾವನ್ನು ನಿರ್ಲಕ್ಷ್ಯಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಒಟ್ಟಾರೆ ಕೊರೊನಾ ಇದ್ದರೂ, ವಸ್ತುಗಳ ಬೆಲೆ ಎಷ್ಟೇ ದುಬಾರಿಯಾದರೂ ಗ್ರಾಹಕರು ಅಂಗಡಿಗಳ ಮುಂದೆ ಸಾಲುಗಟ್ಟಿದ್ದು ಕಂಡುಬಂತು. ಎಲ್ಲಿಯೂ ಸಹ ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸುವವರು ಇಲ್ಲವಾಗಿದ್ದು, ಕೊರೊನಾವನ್ನು ಸ್ವಾಗತಿಸುವಂತಿತ್ತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.