ಉಜ್ವಲ ಯೋಜನೆಯಿಂದ ಮಹಿಳೆಯರಿಗೆ ಅನುಕೂಲ

Team Udayavani, Jul 10, 2019, 1:39 PM IST

ಹುಳಿಯಾರು: ಹುಳಿಯಾರಿನ ಹೊಯ್ಸಳ ಇಂಡೇನ್‌ ಗ್ರಾಮೀಣ ವಿತರಕ ಗ್ಯಾಸ್‌ ಏಜೆನ್ಸಿ ಯಿಂದ ಹೋಬಳಿಯ ನಂದಿಹಳ್ಳಿ ಗ್ರಾಮದಲ್ಲಿ ಅಡುಗೆ ಅನಿಲ ಬಳಕೆ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಅರಿವು ಕಾರ್ಯಕ್ರಮ ನಡೆಸಲಾಯಿತು.

ಆರೋಗ್ಯ ಸುಧಾರಣೆ: ಗ್ರಾಪಂ ಅಧ್ಯಕ್ಷ ಎನ್‌.ಬಿ. ದೇವರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿ, ಕೇಂದ್ರ ಸರ್ಕಾರದ ಉಜ್ವಲ ಯೋಜನೆ ಕುಟುಂಬದ ವೆಚ್ಚ ಕಡಿಮೆ ಮಾಡುವುದಷ್ಟೇ ಅಲ್ಲದೇ ಮಹಿಳೆಯರ ಆರೋಗ್ಯ ಸುಧಾರಣೆಯಲ್ಲಿ ಹೆಚ್ಚಿನ ಪಾತ್ರ ವಹಿಸಿದೆ. ಹಿಂದೆ ಅಡುಗೆ ಮಾಡ ಬೇಕಾದರೆ ಬಳಸುವ ಸೌದೆಯಿಂದ ವಿಪರೀತ ಹೊಗೆ ಬರುತ್ತಿದ್ದ ಕಾರಣ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿತ್ತು. ಇದೀಗ ಅಡುಗೆ ಅನಿಲ ಉಪಯೋಗಿಸುವುದರಿಂದ ಸಮಯ ಉಳಿತಾಯವಾಗುವ ಜೊತೆಗೆ ಸೌದೆ ಕಡಿದು ಅರಣ್ಯ ನಾಶದಿಂದ ಉಂಟಾಗುತ್ತಿದ್ದ ಪರಿಸರ ಹಾನಿ ತಪ್ಪಿದೆ ಎಂದರು.

ಬಡತನ ರೇಖೆಗಿಂತ ಕೆಳಗಿರುವ ಎಲ್ಲಾ ಕುಟುಂಬಗಳಿಗೂ ಅಡುಗೆ ಅನಿಲ ಸಿಗಬೇಕು ಹಾಗೂ ಸೌದೆ ಒಲೆ ಬಳಕೆಯಿಂದ ಬರುವ ಹೊಗೆ ಯಿಂದ ಕುಟುಂಬದ ಆರೋಗ್ಯ ರಕ್ಷಿಸುವ ಸಲುವಾಗಿ ಸರ್ಕಾರ ಜಾರಿಗೆ ತಂದಿರುವ ಉಜ್ವಲ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳ ಬೇಕಿದೆ. ಆದರೆ ನಂದಿಹಳ್ಳಿ ಗ್ರಾಮದಲ್ಲಿ ಇನ್ನೂ ಗ್ಯಾಸ್‌ ಸಂಪರ್ಕ ಪಡೆಯದವರು ಹೆಚ್ಚಿದ್ದು, ತಕ್ಷಣ ರೇಷನ್‌ ಕಾರ್ಡ್‌, ಆಧಾರ್‌ ಕಾರ್ಡ್‌ ಮತ್ತು ಬ್ಯಾಂಕ್‌ ಪಾಸ್‌ ಬುಕ್‌ ಸಹಿತ ಗ್ಯಾಸ್‌ ಏಜೆನ್ಸಿ ಅವರನ್ನು ಭೇಟಿಯಾಗುವಂತೆ ತಿಳಿಸಿದರು.

ಅಡುಗೆ ಅನಿಲ ಬಳಸುವಾಗ ಎಚ್ಚರ: ಏಜೆನ್ಸಿಯ ಪ್ರಶಾಂತ್‌ ಮಾತನಾಡಿ, ಮಹಿಳೆಯರು ಅಡುಗೆ ಅನಿಲ ಬಳಸುವಾಗ ಎಚ್ಚರಿಕೆಯಿಂದರಬೇಕು. ಅಡುಗೆ ಅನಿಲ ಬಳಸುವಾಗ ಸೋರುವಿಕೆ ವಾಸನೆ ಬಂದರೆ ತಕ್ಷಣ ಗ್ಯಾಸ್‌ ವಿತರಕರಿಗೆ ಮಾಹಿತಿ ನೀಡಿದಲ್ಲಿ ಅವರು ಬಂದು ಸೋರುವಿಕೆ ತಡೆಗಟ್ಟುವ ಕೆಲಸ ಮಾಡುತ್ತಾರೆ. ಮನೆಗಳಲ್ಲಿ ಅಡುಗೆ ಅನಿಲ ಆನ್‌ ಮಾಡಿಟ್ಟು ಟಿ.ವಿ., ಧಾರಾವಾಹಿ ನೋಡಲು ಹೋಗದೆ ಜಾಗೃತೆ ವಹಿಸಿರಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ವಿಜಯ ಕುಮಾರಿ, ಎಸ್‌ಡಿಎಂಸಿಯ ಬಸವರಾಜು, ಹಿರಿಯ ನಾಗರೀಕ ಬಸವರಾಜು, ಹೊಯ್ಸಳ ಇಂಡೇನ್‌ ಏಜೆನ್ಸಿಯ ನಟರಾಜು, ಕರಿನಿಂಗಯ್ಯ, ಗೌಡರು ಮತ್ತಿತರರು ಹಾಜರಿದ್ದರು.


ಈ ವಿಭಾಗದಿಂದ ಇನ್ನಷ್ಟು

  • ಚಿಕ್ಕನಾಯಕನಹಳ್ಳಿ: ಪಟ್ಟಣದ ಸಮೀಪದ ಹೊನ್ನೇಭಾಗಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಮಸಾಲ್ತಿ ಗುಡ್ಲು ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಇಲ್ಲದೇ ಗ್ರಾಮಸ್ಥರು ಸಾಂಕ್ರಾಮಿಕ...

  • ಕೊರಟಗೆರೆ: ಎಚ್‌ಐವಿ ಸೋಂಕು ತಡೆಗಟ್ಟುವಲ್ಲಿ ಯುವಜನತೆ ಪಾತ್ರ ಅತಿ ಮುಖ್ಯವಾಗಿದೆ. ಆರೋಗ್ಯವಂತೆ ಸಮಾಜವನ್ನು ನಿರ್ಮಿಸ ಬೇಕಾದರೆ ಪ್ರತಿಯೊಬ್ಬರೂ ಈ ಮಾರಕ ರೋಗದ...

  • ತುಮಕೂರು: ಧಾರ್ಮಿಕ, ಶೈಕ್ಷಣಿಕ ನಗರ ತುಮಕೂರಿನಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಕಾಮಗಾರಿಗಳ...

  • ತುಮಕೂರು: ಮಾಂಸಹಾರಿಗಳಿಗೆ ಉತ್ಕೃಷ್ಟದ ಮಾಂಸ ನೀಡಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ರಾಜ್ಯದಲ್ಲೇ ಅತೀ ಹೆಚ್ಚು ಕುರಿ, ಮೇಕೆ ಸಾಕಾಣಿಕೆ ಕೇಂದ್ರವಾಗಿರುವ...

  • ಹುಳಿಯಾರು: ವಾಯುಭಾರ ಕುಸಿತದಿಂದ ತಾಲೂಕಿನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆ ರಾಗಿ ಬೆಳೆಗಾರರಿಗೆ ಸಂಭ್ರಮಕ್ಕೆ ಅಡ್ಡಿಯುಂಟು ಮಾಡಿದೆ. ಸಮಯಕ್ಕೆ ತಕ್ಕಂತೆ...

ಹೊಸ ಸೇರ್ಪಡೆ

  • ಕುಂದಾಪುರ: ರಾಜ್ಯದ ನಿರ್ವಸಿತ ಮೀನುಗಾರರಿಗೆ ಆಶ್ರಯ ಕಲ್ಪಿಸುವ ಮತ್ಸ್ಯಾಶ್ರಯ ಯೋಜನೆಯನ್ನು ಮೀನುಗಾರರ ಬೇಡಿಕೆಯಂತೆ ರಾಜೀವ್‌ ಗಾಂಧಿ ವಸತಿ ನಿಗಮದ ಬದಲು ಮತ್ತೆ...

  • ಮುಖ್ಯವಾಹಿನಿ ರಾಜಕೀಯ ಪಕ್ಷಗಳಿಗೆ ಆಟದ ಮೈದಾನವಾಗುತ್ತಿರುವ ವಿದ್ಯಾರ್ಥಿಒಕ್ಕೂಟಗಳನ್ನು ಮುಂದಿನ 10 ವರ್ಷಗಳವರೆಗೆ ನಿಷೇಧಿಸಬೇಕು. ಈ ವಿದ್ಯಾರ್ಥಿ ಒಕ್ಕೂಟಗಳಿಂದಾಗಿ...

  • ನಗದು ರಹಿತ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳುವರ ಪ್ರಮಾಣ ಹೆಚ್ಚುತ್ತಿದ್ದು,ಹಣ ವರ್ಗಾವಣೆ, ಬಿಲ್‌ ಪಾವತಿ ಗಳನ್ನು ಕಾರ್ಡ್‌ ಅಥವಾ ಆ್ಯಪ್‌ಗ್ಳ ಮೂಲಕ ಮಾಡುತ್ತಿದ್ದಾರೆ....

  • ಯಾವುದೇ ಚಿತ್ರರಂಗವಿರಲಿ, ಸಾಮಾನ್ಯವಾಗಿ ಸ್ಟಾರ್‌ ನಟರು ಅಲ್ಲಿನ ಹಿರಿಯ ನಿರ್ದೇಶಕರು, ಅದರಲ್ಲೂ ಸಾಕಷ್ಟು ಹಿಟ್‌ ಚಿತ್ರಗಳನ್ನು ನಿರ್ದೇಶಿಸಿ ಜನಪ್ರಿಯವಾದ...

  • ದರ್ಶನ್‌ ನಾಯಕರಾಗಿ ನಟಿಸಿರುವ "ಒಡೆಯ' ಚಿತ್ರದ ಹಾಡು, ಟ್ರೇಲರ್‌ ಈಗಾಗಲೇ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಡುಗಡೆಯ ಹಂತದಲ್ಲಿರುವ "ಒಡೆಯ' ಬಗ್ಗೆ...