ಬೆಸ್ಕಾಂ ನೌಕರನ ಅಮಾನತು, ಪ್ರತಿಭಟನೆ

ಮೇಲಧಿಕಾರಿಗಳ ವರ್ತನೆಗೆ ಖಂಡನೆ • ಆದೇಶ ಹಿಂಪಡೆಯುವಂತೆ ಕೆಪಿಟಿಸಿಎಲ್ ಯೂನಿಯನ್‌ ಒತ್ತಾಯ

Team Udayavani, May 7, 2019, 4:25 PM IST

tumkur-tdy-2..

ತಿಪಟೂರು: ಅನಿರೀಕ್ಷಿತವಾಗಿ ನಡೆದ ಘಟನೆಯಿಂದ ರೈತರೊಬ್ಬರು ಇತ್ತೀಚೆಗೆ ಮೃತಪಟ್ಟಿರುವ ಕಾರಣಕ್ಕೆ ಬೆಸ್ಕಾಂ ನೌಕರನನ್ನು ಕರ್ತವ್ಯಲೋಪ ಎಸಗಿದ್ದಾರೆಂದು ಅಮಾನತ್ತು ಮಾಡಿರುವುದು ಖಂಡನೀಯವಾಗಿದ್ದು, ಕೂಡಲೆ ಮೇಲಧಿಕಾರಿಗಳು ಆದೇಶವನ್ನು ಹಿಂಪಡೆದು ನೌಕರನನ್ನು ಕರ್ತವ್ಯಕ್ಕೆ ಹಾಜರು ಪಡಿಸಬೇಕೆಂದು ಕೆಪಿಟಿಸಿಎಲ್ ಯೂನಿಯನ್‌ನ ಪದಾಧಿ ಕಾರಿಗಳು ನಗರದ ಬೆಸ್ಕಾಂನ ವಿಭಾಗೀಯ ಕಾರ್ಯ ನಿರ್ವಾಹಕ ಎಂಜಿನಿಯರ್‌ ಕಚೇರಿಯ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂದ‌ರ್ಭದಲ್ಲಿ ಮಾತನಾಡಿದ ತುಮಕೂರು ವಿಭಾಗದ ನೌಕರರ ಸಂಘದ ಸಂಘಟನಾ ಕಾರ್ಯ ದರ್ಶಿ ಲಿಂಗದೇವರು ಮಾತನಾಡಿ, ಕಳೆದವಾರ ನೊಣವಿನಕೆರೆ ಹೋಬಳಿಯ ಆಲ್ಬೂರು ಗ್ರಾಮದ ಗದ್ದೆ ಬಯಲಿನಲ್ಲಿ ಆಕಸ್ಮಿಕವಾಗಿ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿತ್ತು. ಸ್ಥಳಿಯರು ಇದನ್ನು ನೋಡಿ ವಿದ್ಯುತ್‌ ಇಲಾಖೆಗೆ ಮಾಹಿತಿ ನೀಡಿದ್ದರು. ಮಾಹಿತಿ ಬಂದ 10 ನಿಮಿಷದಲ್ಲಿ ನೊಣವಿನಕೆರೆ ಶಾಖೆಯ ಲೈನ್‌ಮೆನ್‌ ಚಂದ್ರು ಸ್ಥಳಕ್ಕೆ ಹೋಗಿ ವಿದ್ಯುತ್‌ ಸಂಪರ್ಕ ವನ್ನು ಖಡಿತಗೊಳಿಸಿ ವಿದ್ಯುತ್‌ ತಂತಿಯನ್ನು ತೆಗೆಯಲು ಹೋಗಿದ್ದಾರೆ. ಅಷ್ಟರಲ್ಲಿ ಗದ್ದೆ ನೋಡಲು ಹೋಗಿದ್ದ ರೈತ ಕೃಷ್ಣೇಗೌಡ ಎಂಬುವವರು ತಂತಿಯನ್ನು ತುಳಿದು ಸಾವಿಗೀಡಾಗಿದ್ದರು. ಈ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಇಲಾಖೆಯ ಮೇಲಾಗಲಿ ಅಥವಾ ನೌಕರನ ಮೇಲಾಗಲಿ ಪ್ರಕರಣಗಳು ದಾಖಲಾಗಿರುವುದಿಲ್ಲ. ಆದರೆ ಮೇಲಧಿಕಾರಿಗಳು ಇಲಾಖೆಯ ನೌಕರರನ್ನು ಹೊಣೆ ಮಾಡುವ ಉದ್ದೇಶದಿಂದ ನೌಕರ ಚಂದ್ರು ಎಂಬುವವರನ್ನು ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.

ನಿರಪರಾಧಿಯಾದ ಚಂದ್ರು ಹಲವಾರು ವರ್ಷ ಗಳಿಂದ ಇಲಾಖೆಯಲ್ಲಿ ಉತ್ತಮವಾಗಿ ಕೆಲಸ ನಿರ್ವ ಹಿಸುತ್ತಿದ್ದು, ಅಧಿಕಾರಿಗಳು ಒತ್ತಡಕ್ಕೆ ಮಣಿದು ಇಂತಹ ಕೆಲಸ ಮಾಡಿದ್ದಾರೆ. ಇದನ್ನು ನಮ್ಮ ಯೂನಿಯನ್‌ ಖಂಡಿಸಿದ್ದು, ಕೂಡಲೇ ಅಮಾನತ್ತು ಆದೇಶವನ್ನು ಹಿಂಪಡೆದು ನೌಕರ ಚಂದ್ರುನನ್ನು ಕರ್ತವ್ಯಕ್ಕೆ ಹಾಜರುಪಡಿಸಬೇಕು. ಇಲ್ಲವಾದರೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದರು.

ಪ್ರತಿಭಟನೆಯಲ್ಲಿ ಸಹಾಯಕ ಎಂಜಿನಿಯರ್‌ ಚಂದ್ರಶೇಖರ್‌, ಜೆ.ಇ. ಮರುಳಸಿದ್ದಸ್ವಾಮಿ, ಚಿಕ್ಕನಾಯಕನಹಳ್ಳಿ ಸಹಾಯಕ ಎಂಜಿನಿಯರ್‌ ಯೋಗೇಂದ್ರ, ತೇಜಮೂರ್ತಿ, ನರಸಿಂಹಮೂರ್ತಿ, ನಿರಂಜನ್‌ಮೂರ್ತಿ, ತುರುವೇಕೆರೆ, ತಿಪಟೂರು, ಚಿ.ನಾ.ಹಳ್ಳಿ ವಿಭಾಗದ ಅಧಿಕಾರಿಗಳು ಹಾಗೂ ನೌಕರರು ಹಾಜರಿದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.