ಸಚಿವರಿಂದ ಶಿಷ್ಟಾಚಾರ ಉಲ್ಲಂಘನೆ


Team Udayavani, Jul 5, 2020, 6:40 AM IST

achiva-shishta

ತುಮಕೂರು: ಸಚಿವರ ಎದುರೇ ಜನಪ್ರತಿ ನಿಧಿಗಳಿಗೆ ಅಗೌರವ ಆಗುವಂತೆ ಅಧಿಕಾರಿ ಗಳು ನಡೆದು ಕೊಂಡರೂ ಅವರಿಗೇ ಕುಮ್ಮಕ್ಕು ನೀಡುತ್ತಾ, ಅಧಿಕಾರಿಗಳನ್ನು ಕೈಗೊಂಬೆಯಂತೆ ಕುಣಿಸುತ್ತಿರುವ ಉಸ್ತುವಾರಿ ಸಚಿವರ ಧೋರಣೆ  ಖಂಡಿಸಿ ಕೆಡಿಪಿ ಸಭೆ ಬಹಿಷ್ಕರಿಸಿರು ವುದಾಗಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಜಿಪಂ ಸದಸ್ಯರು ಆರೋಪಿಸಿದರು.

ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಆರ್‌. ರಾಮಚಂದ್ರಯ್ಯ, ಜಿಪಂ ಸದಸ್ಯರಾದ  ಹುಳಿಯಾರು ಕ್ಷೇತ್ರದ ಸಿದ್ಧರಾಮಯ್ಯ ಮತ್ತು ಶೆಟ್ಟಿಕೆರೆ ಕ್ಷೇತ್ರದ ಕಲ್ಲೇಶ್‌ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಚಿಕ್ಕನಾಯಕನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಜಿಪಂ ಸದಸ್ಯರನ್ನು  ಅಧಿಕಾರಿಗಳು ಕಡೆಗಣಿಸುತ್ತಿದ್ದಾರೆ ಎಂದು ದೂರಿದರು.

ಮಾಹಿತಿ ನೀಡುವುದಿಲ್ಲ: ತಾಲೂಕಿನ ಅಧಿಕಾರಿಗಳು ಶಾಸಕರ ಮಾತು ಕೇಳಿ ಶಿಷ್ಟಾಚಾರವನ್ನು ಉಲ್ಲಂಘನೆ ಮಾಡುತ್ತಿದ್ದು ಯಾವುದೇ ಕಾರ್ಯಕ್ರಮವಿದ್ದರೂ ಜಿಪಂ ಸದಸ್ಯರಿಗೆ ಮಾಹಿತಿ ನೀಡುವುದಿಲ್ಲ. ಜೊತೆಗೆ ರಾಷ್ಟ್ರೀಯ ಹಬ್ಬ,  ರಾಷ್ಟ್ರೀಯ ನಾಯಕರ ಜಯಂತಿ, ಮಹಾಪುರುಷರ ಜಯಂತಿ ಮತ್ತು ನಮ್ಮ ಕ್ಷೇತ್ರಗಳಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಕ್ಕೂ ನಮ್ಮನ್ನು ಆಹ್ವಾನಿಸುತ್ತಿಲ್ಲ. ಈ ಸಂಬಂಧ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ  ಬರೆಯುವುದಾಗಿ ಎಚ್ಚರಿಸಿದರು.

ಸಚಿವರ ವಿರುದ್ಧ ಕಿಡಿ: ಚಿಕ್ಕನಾಯಕನಹಳ್ಳಿ ತಾಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ 2020-21ನೇ ಸಾಲಿನ ತ್ರೆçಮಾಸಿಕ ಕೆಡಿಪಿ ಸಭೆಯಲ್ಲಿ ಅಗೌರವ ತೋರಿ ಶಿಷ್ಟಾಚಾರ  ಉಲ್ಲಂ ಸಿದ್ದಾರೆ ಎಂದು ಸಚಿವರ ವಿರುದ್ಧವೇ ಕಿಡಿಕಾರಿದರು.

ಸರಿಯಾದ ಮಾಹಿತಿ ನೀಡಲ್ಲ: ಅಲ್ಲಿಯ ತಹಶೀಲ್ದಾರ್‌, ತಾಪಂ ಕಾರ್ಯನಿರ್ವ ಹಣಾಧಿಕಾರಿಗಳು ಶನಿವಾರ ತಾಪಂ ಕೆಡಿಪಿ ಸಭೆ ಇದೆ ಎಂದು ಶುಕ್ರವಾರ ಸಂಜೆ ನಮಗೆ ಮಾಹಿತಿ ನೀಡಿದ್ದಾರೆ. ಒಂದು ದಿನದಲ್ಲಿ ನಾವು ಕ್ಷೇತ್ರದ ಸಮಸ್ಯೆಗಳ  ಬಗ್ಗೆ ಅವಲೋಕನ ಮಾಡು ವುದಾದರೂ ಹೇಗೆ? ವರದಿಯಲ್ಲಿರುವ ಮಾಹಿತಿ ತಿಳಿದುಕೊಳ್ಳಲು ನಮಗೆ ಸಮಯ ಬೇಡವೇ ಎಂದು ಪ್ರಶ್ನಿಸಿದರು.

ಸಚಿವರ ಸರ್ವಾಧಿಕಾರ ಧೋರಣೆ: ಸಭೆ ಯಲ್ಲಿ ಈ ಬಗ್ಗೆ ಸಚಿವ ಮಾಧುಸ್ವಾಮಿ ಯವರನ್ನು ಪ್ರಶ್ನೆ ಮಾಡಿದರೆ ಮೌನವಹಿಸು ತ್ತಾರೆ. ನಮಗೆ ಅಗೌರವ ತೋರಿರುವ ಸಭೆ ಯಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಸಭೆಯಿಂದ ಹೊರ  ನಡೆಯುತ್ತೇವೆ ಎಂದರೆ ಸಚಿವರು ಹೋಗಿ ಎನ್ನುತ್ತಾರೆ. ಆದ್ದರಿಂದ ನಾವು ಸಭೆ ಬಹಿಷ್ಕಾರ ಮಾಡಿ ಹೊರ ಬಂದೆವು. ಇದು ಸಚಿವರ ಸರ್ವಾಧಿಕಾರ  ಧೋರಣೆ ಎಂದು ದೂರಿದರು.

ನಾವು ಚುನಾಯಿತ ಪ್ರತಿನಿಧಿಗಳು, ನಮ್ಮ ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಬಗ್ಗೆ ಸಾರ್ವ ಜನಿಕರು ಪ್ರಶ್ನಿಸುತ್ತಾರೆ. ಹೀಗಿರುವಾಗ ನಾವು ಸಾರ್ವಜನಿಕರಿಗೆ ಏನು ಉತ್ತರ ಕೊಡುವುದು, ನಮ್ಮನ್ನು ತಾಲೂಕು ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಸಚಿವರ ಕೈಗೊಂಬೆಯಾಗಿ ಅಧಿಕಾರಿಗಳು ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದೇ ರೀತಿ ಅಧಿಕಾರಿಗಳು ನಮ್ಮನ್ನು ನಿರ್ಲಕ್ಷಿಸುತ್ತಾ ಹೋದರೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿ  ಅಧಿಕಾರಿಗಳ ಸರ್ವಾಧಿಕಾರ ಧೋರಣೆ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗು ತ್ತದೆ ಎಂದು ಎಚ್ಚರಿಸಿದರು

ಕಾನೂನು ಸಚಿವರಾಗಿರುವ ಜೆ.ಸಿ.ಮಾಧುಸ್ವಾಮಿ ತಮ್ಮಂ ತೆಯೇ ಜನರಿಂದ ಆಯ್ಕೆಯಾಗಿ ರುವ ಪ್ರತಿನಿಧಿ, ನಾವೂ 45 ಸಾವಿರ ಜನರನ್ನು ಪ್ರತಿನಿಧಿಸುವ ಜಿಪಂ ಸದಸ್ಯರು, ಅಧಿಕಾರ ಯಾರಿಗೂ ಶಾಶ್ವತವಲ್ಲ, ಅಧಿಕಾರಿಗಳು ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. 
-ಸಿದ್ದರಾಮಯ್ಯ, ಜಿಪಂ ಸದಸ್ಯ

ಟಾಪ್ ನ್ಯೂಸ್

chikkaballapura news

ವೃದ್ದ ಮಹಿಳೆಯ ಅನುಮಾನಸ್ಪದ ಸಾವು : ಅತ್ಯಾಚಾರ ಆರೋಪ

h vishwanath and siddaramaiah

ಕುರುಬರಿಗೆ ಸಿದ್ದರಾಮಯ್ಯನ ನೋಡಿದ್ರೆ ಇಂಗ್ಲೀಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್

vidhana soudha

‘ಅನುಗ್ರಹ ಯೋಜನೆ’ ಮುಂದುವರಿಸಲು ಸರ್ಕಾರದ ಆದೇಶ

ದಾಂಡೇಲಿ:  ಕೊನೆಗೂ ಪತ್ತೆಯಾದ ವಿನಾಯಕ ನಗರದ ಕಾಳಿ ನದಿಯಲ್ಲಿ ಮೊಸಳೆಯ ವಶದಲ್ಲಿದ್ದ ಬಾಲಕನ ಶವ

ದಾಂಡೇಲಿ: ಕೊನೆಗೂ ಪತ್ತೆಯಾದ ವಿನಾಯಕ ನಗರದ ಕಾಳಿ ನದಿಯಲ್ಲಿ ಮೊಸಳೆಯ ವಶದಲ್ಲಿದ್ದ ಬಾಲಕನ ಶವ

ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ: ಸಿ.ಟಿ.ರವಿ ವಾಗ್ದಾಳಿ

ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ: ಸಿ.ಟಿ.ರವಿ ವಾಗ್ದಾಳಿ

ಕಳ್ಳತನ ಮಾಡ್ತಿರಾ ಗೊತ್ತಿಲ್ಲ:ಆದ್ರೆ ರಸ್ತೆ ದುರಸ್ತಿ ಮಾಡಿ:ಬಿಬಿಎಂಪಿಗೆ ಹೈಕೋರ್ಟ್‌ ತಾಕೀತು

ಕಳ್ಳತನ ಮಾಡ್ತಿರಾ ಗೊತ್ತಿಲ್ಲ:ಆದ್ರೆ ರಸ್ತೆ ದುರಸ್ತಿ ಮಾಡಿ:ಬಿಬಿಎಂಪಿಗೆ ಹೈಕೋರ್ಟ್‌ ತಾಕೀತು

ಟಿ20 ವಿಶ್ವಕಪ್: ಒಂದೇ ಜಯದಿಂದ ಭಾರತ, ಪಾಕ್, ಕಿವೀಸ್ ಗೆ ಎಚ್ಚರಿಕೆ ರವಾನಿಸಿದ ಅಫ್ಘಾನ್!

ಟಿ20 ವಿಶ್ವಕಪ್: ಒಂದೇ ಒಂದು ಜಯದಿಂದ ಭಾರತ,ಪಾಕ್, ಕಿವೀಸ್ ಗೆ ಎಚ್ಚರಿಕೆ ರವಾನಿಸಿದ ಅಫ್ಘಾನ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

ಪಾಲಿಕೆಗೆ ಬರಬೇಕಿದೆ 18.81 ಕೋಟಿ ನೀರಿನ ಕರ „ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡರೆ ಎಲ್ಲರ ಮನೆಗೂ ನೀರು

ತುಮಕೂರಲ್ಲಿ 15 ಸಾವಿರಕ್ಕೂ ಹೆಚ್ಚು ಅಕ್ರಮ ನಲ್ಲಿ

ಏತ ನೀರಾವರಿ ಯೋಜನೆ ಅವೈಜ್ಞಾನಿಕ ಎಂಬ ಹೇಳಿಕೆ ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಾಗಿದೆ: ಸುರೇಶ್‌ಗೌಡ ವಾಗ್ದಾಳಿ

ನೀರಾವರಿ ಯೋಜನೆಗೆ ಗೌರಿಶಂಕರ್‌ ಅಡ್ಡಗಾಲು

Apply for Taluk Rajyotsava Award

ತಾಲೂಕು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ

1-ttt

ತಿಪಟೂರು: ಸಿಡಿಲು ಬಡಿದು ಕುರಿಗಾಹಿ ದುರ್ಮರಣ, ಇನ್ನೋರ್ವ ಗಂಭೀರ

MUST WATCH

udayavani youtube

ದಾಂಡೇಲಿ :ಕಳೆದ ಎರಡು ದಿನಗಳಿಂದ ಬಾಲಕನನ್ನು ಬಾಯಲ್ಲಿಟ್ಟುಕೊಂಡೇ ಓಡಾಡುತ್ತಿತ್ತು ಮೊಸಳೆ

udayavani youtube

ಎಡೆಬಿಡದೆ ಸುರಿದ ಮಳೆಗೆ ಜಲಾವೃತಗೊಂಡ ಮನೆಗಳು

udayavani youtube

ಮಂಗಳೂರು: ಬಲೆಗೆ ಬಿತ್ತು ಭಾರೀ ಗಾತ್ರದ ಶಾರ್ಕ್ ಮೀನು

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಹೊಸ ಸೇರ್ಪಡೆ

davanagere news

ಬೆಳಕಿನ ಹಬ್ಬದಲ್ಲಿ ಹಸಿರು ಪಟಾಕಿ ಬಳಸಿ

chikkaballapura news

ವೃದ್ದ ಮಹಿಳೆಯ ಅನುಮಾನಸ್ಪದ ಸಾವು : ಅತ್ಯಾಚಾರ ಆರೋಪ

15bidar

ಶಾಲಾ ಅಂಗಳದಲ್ಲಿ ಮತ್ತೆ ಚಿಣ್ಣರ ಕಲರವ

h vishwanath and siddaramaiah

ಕುರುಬರಿಗೆ ಸಿದ್ದರಾಮಯ್ಯನ ನೋಡಿದ್ರೆ ಇಂಗ್ಲೀಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್

chitradurga news

ವರುಣನಬ್ಬರಕ್ಕೆ 25 ಲಕ್ಷ ರೂ. ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.