ಪರಿತ್ಯಕ್ತ ಮಕ್ಕಳಿಗಾಗಿ ಮಮತೆಯ ತೊಟ್ಟಿಲು ನಿರ್ಮಾಣ

ಜಿಲ್ಲಾ, ತಾಲೂಕು ಮಟ್ಟದಲ್ಲಿ ನಿರ್ಮಿಸಲು ಡೀಸಿ ರಾಕೇಶ್‌ ಕುಮಾರ್‌ ಅಧಿಕಾರಿಗಳಿಗೆ ನಿರ್ದೇಶನ

Team Udayavani, May 7, 2019, 5:10 PM IST

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಮಾತನಾಡಿದರು.

ತುಮಕೂರು: ಪರಿತ್ಯಕ್ತ ಮಕ್ಕಳಿಗಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಮಾದರಿ ಮಮತೆಯ ತೊಟ್ಟಿ ಲನ್ನು ನಿರ್ಮಾಣ ಮಾಡಬೇಕೆಂದು ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿ ಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಸೂಚನೆ ನೀಡಿದರು.

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ಮಟ್ಟದ ಸಮಿತಿ ಸಭೆ, ಮಕ್ಕಳ ರಕ್ಷಣಾ ಸಮಿತಿ ಹಾಗೂ ಮಕ್ಕಳ ಸಹಾಯ ವಾಣಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿ ದರು. ಪರಿತ್ಯಕ್ತ ಮಕ್ಕಳನ್ನು ವಶಕ್ಕೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಜಿಲ್ಲೆಯ 170 ಸ್ಥಳಗಳಲ್ಲಿ ಮಮತೆಯ ತೊಟ್ಟಿಲನ್ನು ಈಗಾಗಲೇ ಆರಂಭಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಕೇಂದ್ರದಲ್ಲಿ ಸುಸಜ್ಜಿತವಾದ ಸುರಕ್ಷತೆ ಮಾದರಿ ಮಮತೆಯ ತೊಟ್ಟಿಲನ್ನು ನಿರ್ಮಾಣ ಮಾಡಿ ಮುಂದಿನ ಸಭೆಯ ಹೊತ್ತಿಗೆ ವರದಿ ನೀಡುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಇಲ್ಲಿಯವರೆಗೂ 137 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 23 ಪ್ರಕರಣ ಗಳು ಖುಲಾಸೆಯಾಗಿ 114 ಪ್ರಕರಣಗಳು ವಿಚಾ ರಣೆ ಹಂತದಲ್ಲಿವೆ. ಈ ಪ್ರಕರಣಗಳ ಇತ್ಯರ್ಥಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಎಚ್ಐವಿ ಬಾಧಿತ ಪೋಷಕರು ಹಾಗೂ ಮಕ್ಕಳಿಗೆ ಜಿಲ್ಲೆಯ ತಪಾಸಣಾ ಕೇಂದ್ರಗಳಲ್ಲಿ ಉತ್ತಮ ಚಿಕಿತ್ಸೆ ಲಭ್ಯವಾಗುತ್ತಿರುವ ಬಗ್ಗೆ ಹಾಗೂ ಪ್ರತಿ ತಿಂಗಳು ತಪಾಸಣೆಗೆ ಆಗಮಿಸುತ್ತಿರುವ ಬಗ್ಗೆ ವರದಿ ನೀಡುವಂತೆ ಡಿಎಚ್ಒ ತಿಳಿಸಿದರು.

ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಾದಕ ವಸ್ತು ಸೇವನೆ, ಲೈಂಗಿಕ ದೌರ್ಜನ್ಯ ಮತ್ತಿತರ ವಿಷಯಗಳ ಬಗ್ಗೆ ಜಿಲ್ಲೆಯಲ್ಲಿರುವ ಪಿಯುಸಿ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಮೂಡಿಸಬೇಕು. ಇದಕ್ಕಾಗಿ ವೈದ್ಯರು, ಮನಶಾಸ್ತ್ರಜ್ಞರು, ಪೊಲೀಸ್‌ರನ್ನು ಒಳಗೊಂಡಂತೆ ಉತ್ತಮ ಸಂಪನ್ಮೂಲ ವ್ಯಕ್ತಿಗಳನ್ನು ನೇಮಿಸಿ ಕ್ರಿಯಾ ಯೋಜನೆ ತಯಾರಿಸುವಂತೆ ಸೂಚಿಸಿದರು.

ಬಾಲ್ಯ ವಿವಾಹ, ಮಕ್ಕಳ ರಕ್ಷಣೆ, ಮತ್ತಿತರ ಪ್ರಕರಣಗಳಲ್ಲಿ ಜಿಲ್ಲಾ ಮಟ್ಟದ ಸಮಿತಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪ್ರಕರಣಗಳ ತೀವ್ರತೆಯನ್ನು ಆಧರಿಸಿ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು. ಮಕ್ಕಳ ಸಹಾಯವಾಣಿ 1098 ಬಗ್ಗೆ ವ್ಯಾಪಕ ಪ್ರಚಾರ ನೀಡಲು ಪ್ರಚಾರ ಫ‌ಲಕವನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರದರ್ಶಿಸುವಂತೆ ಸೂಚನೆ ನೀಡಲಾಗುವುದು ಎಂದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಶೋಭಾರಾಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಟರಾಜು, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ವಾಸಂತಿ ಉಪ್ಪಾರ್‌, ಡಿಎಚ್ಒ ಡಾ.ಚಂದ್ರಿಕಾ ಸೇರಿದಂತೆ ಅಧಿಕಾರಿಗಳಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ