ತುಮಕೂರಿನಲ್ಲಿ ವಿಶ್ರಾಂತಿಗೆ ತೆರಳಿದ ಅಭ್ಯರ್ಥಿಗಳು

Team Udayavani, May 14, 2018, 2:32 PM IST

MIA IXE.jpg

ತುಮಕೂರು: ಕಳೆದ ಒಂದು ತಿಂಗಳಿನಿಂದ ಕ್ಷೇತ್ರದಲ್ಲಿ ಸುಡು ಬಿಸಿಲ ಬೇಗೆಯಲ್ಲಿ ಬೆಂದು ಬೆವರಿಳಿಸಿ ಬಸವಳಿದು ಮತದಾರರ ಮನಗೆಲ್ಲಲು ಕಸರತ್ತು ನಡೆಸಿದ್ದ ವಿವಿಧ ಪಕ್ಷಗಳ ಅಭ್ಯರ್ಥಿಗಳು ಚುನಾವಣಾ ಸಮರದಲ್ಲಿ ಗೆಲ್ಲುವ ವಿಶ್ವಾಸದೊಂದಿಗೆ ಕಾರ್ಯಕರ್ತರಿಂದ ದೂರವಿದ್ದು, ರಿಲ್ಯಾಕ್ಸ್‌ ಮೂಡಿನಲ್ಲಿ ಇರುವುದು ಕಂಡು ಬಂದಿದೆ.

ಕಲ್ಪತರು ನಾಡಿನಲ್ಲಿ ಕಳೆದ ಒಂದು ತಿಂಗಳಿನಿಂದ ಚುನಾವಣಾ ರಣರಂಗದ ಕಾವು ತಾರಕಕ್ಕೇರಿ ಮೇ.12 ರಂದು ಅಭ್ಯರ್ಥಿಗಳ ನಡುವೆ ಅದೃಷ್ಟ ಪರೀಕ್ಷೆಯ ಚುನಾವಣಾ ಸಮರ ಮುಗಿದಿದ್ದು, ಈ ಸಮರದಲ್ಲಿ ಗೆಲುವು ಸಾಧಿಸಲು ಕಳೆದ ಒಂದು ತಿಂಗಳಿನಿಂದ ನಿರಂತರ ಹೋರಾಟ ನಡೆಸಿದ್ದ ಅಭ್ಯರ್ಥಿಗಳು ಚುನಾವಣೆ ಮುಗಿದ ಮಾರನೆಯ ದಿನ ತಮ್ಮ ಕುಟುಂಬದೊಂದಿಗೆ ತಮಗಾಗಿ ಶ್ರಮಿಸಿದ ಕಾರ್ಯಕರ್ತರೊಂದಿಗೆ ಆರಾಮವಾಗಿ ಕಾಲ ಕಳೆಯುತ್ತಿದ್ದುದು ಕಂಡು ಬಂದಿತು.

ಕುಟುಂಬ ಮಿಲನ: ಬಿಸಿಲಾದರೇನು ಮಳೆಯಾದರೇನುಕಾಲಲ್ಲಿ ಬೊಬ್ಬೆ ಬಂದರೇನುಎಂತಹ ಆಯಾಸವಾದರೂ ಪರವಾಗಿಲ್ಲ ಈ ಭಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೇರೆ ಅಭ್ಯರ್ಥಿಗಳಿಗಿಂತ ಹೆಚ್ಚು ಮತಗಳನ್ನು ಗಳಿಸಿ ಚುನಾವಣಾ ಸಮರದಲ್ಲಿ ಎದುರಾಳಿಗಳನ್ನು ಮಣಿಸಿ ಗೆಲುವು ಸಾಧಿಸಬೇಕೆಂದು ಹಗಲಿರುಳು ಕಾರ್ಯಕರ್ತರ ಪಡೆಯೊಂದಿಗೆ ಹೋರಾಟ ನಡೆಸಿದ್ದರು.

ಈ ಹೋರಾಟದ ಫ‌ಲವಾಗಿ ಮತದಾರ ಪ್ರಭು ಯಾರ ಶಕ್ತಿ ಎಷ್ಟಿದೆ ಎನ್ನುವುದನ್ನು ಮತಯಂತ್ರದಲ್ಲಿ ಬರೆದಿದ್ದು, ಇದರ ಫ‌ಲಿತಾಂಶ ಮೇ 15 ರಂದು ಪ್ರಕಟವಾಗಿ ವಿಜಯಮಾಲೆ ಯಾರ ಕೊರಳಿಗೆ ಬೀಳುತ್ತದೆ ಎನ್ನುವ ಕೌತುಕದಲ್ಲಿರುವಾಗ ಕಳೆದೊಂದು ತಿಂಗಳಿನಿಂದ ಮನೆ, ಮಠ, ಬಂಧು, ಬಳಗ ಬಿಟ್ಟು ಚುನಾವಣೆಯ ಗುಂಗಿನಲ್ಲಿದ್ದ ಅಭ್ಯರ್ಥಿಗಳು ಇಂದು ಕೂಲ್‌ ಕೂಲ್‌ ಆಗಿ ಕುಟುಂಬದೊಂದಿಗೆ ಸಂತಸ ಹಂಚಿಕೊಂಡರು.

ಇಲ್ಲಿಯ ಗಾಂಧಿನಗರದಲ್ಲಿರುವ ಮಾಜಿ ಸಂಸದ ಜಿ.ಎಸ್‌. ಬಸವರಾಜ್‌ ಪುತ್ರ ಜಿ.ಬಿ. ಜ್ಯೋತಿಗಣೇಶ್‌ ತುಮಕೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಳೆದೊಂದೂವರೆ ತಿಂಗಳಿನಿಂದ ಮತದಾರ ಪ್ರಭುವಿನ ಮನೆ ಬಾಗಿಲು ತಟ್ಟಿ ಕಾರ್ಯಕರ್ತರೊಂದಿಗೆ ಬೆರೆತು ಪ್ರತಿನಿತ್ಯ ಬೆಳಿಗ್ಗೆ 5.30 ಕ್ಕೆ ಎದ್ದು ವಾಯು ವಿಹಾರಕ್ಕೆ ತೆರಳುವ ಮತದಾರ ಬಂದುಗಳನ್ನು ಭೇಟಿ ಮಾಡುವುದರಿಂದ ತಮ್ಮ ಚುನಾವಣಾ ಪ್ರಚಾರ ಆರಂಭಿಸಿ ರಾತ್ರಿ 1.30 ರವರೆಗೆ ಚುನಾವಣೆಯಲ್ಲಿಯೇ ಬ್ಯುಸಿಯಾಗಿರುತ್ತಿದ್ದರು.

ಜ್ಯೋತಿಗಣೇಶ್‌ ಸಂತಸ: ಈಗ ಚುನಾವಣೆ ಮುಗಿದ ಹಿನ್ನಲೆಯಲ್ಲಿ ತಮ್ಮ ಕುಟುಂಬದೊಂದಿಗೆ ಜ್ಯೋತಿಗಣೇಶ್‌ ಭಾನುವಾರ ಸಂತಸದ ಕ್ಷಣಗಳನ್ನು ಹಂಚಿಕೊಂಡು ಜೊತೆಯಲ್ಲಿದ್ದರು. ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ ಕಳೆದ ಒಂದೂವರೆ ತಿಂಗಳಿನಿಂದ ದಿನಪತ್ರಿಕೆಗಳನ್ನು ಓದಲು ಸಾಧ್ಯವೇ ಆಗುತ್ತಿರಲಿಲ್ಲ.

ಇಂದು ಸ್ವಲ್ಪ ಆರಾಮವಾಗಿದೆ. ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದಿಸುವ ಕೆಲಸ ಮಾಡುತ್ತಾ ಮನೆಯವರೊಂದಿಗೆ ಬೆರೆತು ಹೋಗಿದ್ದೇನೆ. ಈ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ ಎನ್ನುವ ವಿಶ್ವಾಸ ನನಗಿದೆ ಎಲ್ಲ ಕಡೆ ಉತ್ತಮ ಪ್ರತಿಕ್ರಿಯೇ ಬರುತ್ತಿದೆ ಎಂದು ತಮ್ಮ ಸಂತಸ ಹಂಚಿಕೊಂಡರು.

ಕುಟುಂಬದೊಂದಿಗೆ ಕಾಲ ಕಳೆದ ರಫೀಕ್‌: ಇದೇ ರೀತಿಯಲ್ಲಿ ಕಳೆದ ಒಂದು ತಿಂಗಳಿನಿಂದಲೂ ಚುನಾವಣಾ ಪ್ರಚಾರದಲ್ಲಿ ಧುಮುಕಿ ಗೆಲುವಿಗೆ ಸಮರ ನಡೆಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಶಾಸಕ ಡಾ. ಎಸ್‌ ರಫೀಕ್‌ ಅಹಮದ್‌ ಕಾರ್ಯಕರ್ತರೊಂದಿಗೆ ಮತ ಎಣಿಕೆ ಕುರಿತು ಸ್ವಲ್ಪ ಚರ್ಚೆ ನಡೆಸಿ ನಂತರ ತಮ್ಮ ಪತ್ನಿ ಆಯಿಷಾ ರೊಂದಿಗೆ ಸಂತಸದಿಂದ ಕಾಲ ಕಳೆದರು.

ಇಷ್ಟು ದಿನ ಚುನಾವಣೆಯ ಗುಂಗಿನಲ್ಲಿದ್ದು, ಇಂದು ಸ್ವಲ್ಪ ರಿಲ್ಯಾಕ್ಸ್‌ ಆಗಿದೆ ಎನ್ನುವ ರಫೀಕ್‌ ಈ ಭಾರಿ ಚುನಾವಣೆ ನನಗೆ ಖುಷಿ ತರಲಿದೆ. ನಗರದ ಮತದಾರರು ನನ್ನ ಕೈಹಿಡಿದಿದ್ದಾರೆ. ಎನ್ನುವ ಆಶಾಭಾವನೆ ಹೊಂದಿದ್ದಾರೆ.

ಅದೇ ರೀತಿಯಲ್ಲಿ ಜಿಲ್ಲೆಯ ವಿವಿಧ ರಾಜಕಾರಣಿಗಳು ಚುನವಣೆಯಲ್ಲಿ ಈವೆಗೂ ಬ್ಯುಸಿಯಾಗಿ ಭಾನುವಾರ ಆರಾಮಾಗಿ ಕಾರ್ಯಕರ್ತರೊಂದಿಗೆ ಚುನಾವಣೆ ನಡೆದಿರುವ ಬಗ್ಗೆ ಯಾವ ಮತಗಟ್ಟೆಯಲ್ಲಿ ಎಷ್ಟು ಮತಗಳು ಬರಬಹುದು ಎನ್ನುವ ಲೆಕ್ಕಾಚಾರವನ್ನು ಹಾಕುತ್ತಿದ್ದಾರೆ. ಕೆಲವರು ಫೋನ್‌ ಸಂಪರ್ಕಕ್ಕೆ ಸಿಗದೆ ವಿಶ್ರಾಂತಿಗಾಗಿ ತೆರಳಿದ್ದಾರೆ. ಚುನಾವಣೆಯ ಗುಂಗಿನಿಂದ ಹೊರ ಬಂದು ಸಂತಸದ ಕ್ಷಣವನ್ನು ಭಾನುವಾರ ಅಭ್ಯರ್ಥಿಗಳು ಕುಟುಂಬದೊಂದಿಗೆ ಕಳೆದರು.

* ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.