ಕಾರು ಖರೀದಿಗೆ ಬಂದಾತನ ಬಟ್ಟೆ ನೋಡಿ ಅವಮಾನ; ಒಂದೇ ಗಂಟೆಯಲ್ಲಿ 10 ಲಕ್ಷ ತಂದ ಗ್ರಾಹಕ
Team Udayavani, Jan 23, 2022, 12:40 PM IST
ತುಮಕೂರು: ಕಾರು ಖರೀದಿ ಮಾಡಲೆಂದು ಕಾರು ನೋಡಲು ಬಂದ ಗ್ರಾಹಕನಿಗೆ ಕಾರು ಶೋ ರೂಮ್ ಸಿಬ್ಬಂದಿ ನಿನ್ನ ಕೈಯಲ್ಲಿ ಹತ್ತು ಲಕ್ಷ ಕೊಟ್ಟುಕಾರು ಖರೀದಿ ಮಾಡಲು ಸಾಧ್ಯನಾ ಎಂದು ಅವಮಾನಿಸಿದ್ದು, ಇದರಿಂದ ಬೇಸತ್ತ ಗ್ರಾಹಕ ಹಣ ತಂದು ಕಾರು ನೀಡುವಂತೆ ಪಟ್ಟು ಹಿಡಿದಿದ್ದ ಘಟನೆ ಶನಿವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿದೆ.
ತಾಲೂಕಿನ ಹೆಬ್ಬೂರು ಹೋಬಳಿಯ ರಾಮನ ಪಾಳ್ಯದ ಕೆಂಪೇಗೌಡ ಎನ್ನುವ ಯುವಕನೊಬ್ಬ ನಗರದ ಶಾಸಗಿ ಕಾರ್ ಶೋರೂಮ್‌ಗೆ ಕಾರು ತೆಗೆದುಕೊಳ್ಳಲು ಬಂದಿದ್ದು, ಯುವಕನ ವೇಷಭೂಷನ ನೋಡಿ ಶೋರೂಂನಲ್ಲಿ ಕೆಲಸ ಮಾಡುವ ಸೇಲ್ಸ್ ಏಜೆಂಟ್ ಕೆಂಪೇಗೌಡನಿಗೆ ಹತ್ತು ರೂಪಾಯಿ ದುಡ್ಡು ಕೊಡುವ ಯೋಗ್ಯತೆ ಇಲ್ಲ ಕಾರು ತೆಗೆದುಕೊಳ್ಳಲು ಬಂದಿದೆಯೆಂದು ಅವಮಾನಿದ್ದಾನೆ.
ಅದನ್ನೇ ಚಾಲೆಂಜ್ ಆಗಿ ಸ್ವೀಕರಿಸಿದ ಕೆಂಪೇಗೌಡ ಹಾಗೂ ಆತನ ಸ್ನೇಹಿತರು ಒಂದು ಗಂಟೆಯಲ್ಲಿ ದುಡ್ಡು ತರುವೆ ಕಾರನ್ನು ನೀಡುವೆಯಾ ಎಂದು ಕಡ್ಡಿ ಮುರಿದ ಹಾಗೆ ಕೇಳಿದ್ದು, ಇದಕ್ಕೆ ಒಪ್ಪಿದ ಶೋರೂಮ್ ಕೆಲಸಗಾರ ಮೊದಲು ದುಡ್ಡು ತನ್ನಿ ಕಾರು ಕೊಡುವೆ ಎಂದಿದ್ದಾರೆ.
ಕೆಂಪೇಗೌಡ ಒಂದು ಗಂಟೆಯಲ್ಲಿ ಹತ್ತು ಲಕ್ಷ ರೂಪಾಯಿ ತಂದು ಕಾರು ನೀಡುವಂತೆ ಪಟ್ಟು ಹಿಡಿದಿದ್ದು, ಶೋ ರೂಮ್ ಕೆಲಸಗಾರರು ಇಲ್ಲಸಲ್ಲದ ಸಬೂಬು ಹೇಳಿ ಮುಂದಿನ ಎರಡು ದಿನದಲ್ಲಿ ಕಾರು ನೀಡುತ್ತೇವೆ ಎಂದಿದ್ದಾರೆ. ನಮ್ಮನ್ನು ಅವಮಾನಿಸುವ ಮುಂಚೆ ಇದರ ಅರಿವು ತಮಗೆ ಇರಬೇಕಾಗಿತ್ತು. ನಾನು ಒಂದು ಗಂಟೆಯಲ್ಲಿ 10 ಲಕ್ಷ ರೂ. ತಂದಿದ್ದೇನೆ. ನನಗೆ ಈಗ ಕಾರು ಕೊಡಿ ಎಂದು ಗ್ರಾಹಕ ಕೆಂಪೇಗೌಡ ಹಾಗೂ ಸ್ನೇಹಿತರು ಶೋರೂಮ್‌ನಲ್ಲಿ ವಾಗ್ವಾದ ನಡೆಸಿದ್ದಾರೆ.
ಒಮ್ಮತದ ನಿರ್ಧಾರಕ್ಕೆ ಬರದ ಕಾರಣ ಕೊನೆಗೆ ಗ್ರಾಹಕ ಹಾಗೂ ಶೋರೂಮ್‌ನವರು ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆ ಮೆಟ್ಟಿಲು ಏರುವಂತಾಯಿತು.
ಕೊನೆಗೆ ಸಿಬ್ಬಂದಿಯಿಂದ ಗ್ರಾಹಕನಿಗೆ ತಪ್ಪಾಯಿತು ಎಂದು ಮುಚ್ಚಳಿಕೆ ಬರೆಸುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಗ್ರಾಸವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊರಟಗೆರೆ : ಬೆಳ್ಳಂಬೆಳಗ್ಗೆ ಚಿಕ್ಕರಸನಹಳ್ಳಿ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದ ಕರಡಿಗಳು
ಹಿಂದಿನ ತಪ್ಪುಗಳು ಬಗರ್ಹುಕುಂನಲ್ಲಿ ಆಗಬಾರದು
ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ: ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ
ಕೊರಟಗೆರೆ : ಹೆಜ್ಜೇನು ದಾಳಿಗೆ ನಿವೃತ್ತ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸಾವು
ಜೂನ್ 1-3 ; ಕೊರಟಗೆರೆ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯ ಸುವರ್ಣ ಮಹೋತ್ಸವ