ನ್ಯಾಯಯುತ ಪರಿಹಾರ ನೀಡಲು ಆಗ್ರಹ


Team Udayavani, Mar 9, 2022, 2:28 PM IST

ನ್ಯಾಯಯುತ ಪರಿಹಾರ ನೀಡಲು ಆಗ್ರಹ

ತಿಪಟೂರು: ರಾಷ್ಟ್ರೀಯ ಹೆದ್ದಾರಿ ಯೋಜನೆಗಾಗಿ ಮನೆ, ನಿವೇಶನ, ಜಮೀನುಗಳನ್ನು ಕಳೆದುಕೊಂಡಭೂ ಸಂತ್ರಸ್ತರಿಗೆ ಕಳೆದ ಆರು ವರ್ಷಗಳಿಂದಲೂಸೂಕ್ತ ಪರಿಹಾರ ನೀಡದೆ ಸತಾಯಿಸುತ್ತಿದ್ದು, ಪರಿಹಾರಕೊಡುವವರೆಗೂ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್‌ ಮುಖಂಡ ಕೆ.ಟಿ.ಶಾಂತಕುಮಾರ್‌ ಹೇಳಿದರು.

ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್‌ನಲ್ಲಿ ಭೂಸಂತ್ರಸ್ತರೊಂದಿಗೆ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ತುಮಕೂರಿನಿಂದ ಶಿವಮೊಗ್ಗದವರೆಗೆ ರಾಷ್ಟ್ರೀಯ ಹೆದ್ದಾರಿ ಯೋಜನೆ ಪ್ರಾರಂಭಗೊಂಡಿದ್ದು, ಇದರಿಂದನೂರಾರು ರೈತರು ತಮ್ಮ ಜಮೀನು, ಮನೆ, ಅಂಗಡಿ ಮಳಿಗೆಗಳನ್ನು ಕಳೆದುಕೊಂಡಿದ್ದಾರೆ. ಆದರೆ ಆರುವರ್ಷಗಳಿಂದ ನೋಟಿಸ್‌ ನೀಡಿದ್ದು, ಬಿಟ್ಟರೆ ನಯಾಪೈಸೆ ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು.ಭೂ ಕಾಯ್ದೆ ಪ್ರಕಾರ ಭೂಮಿ ಕಳೆದುಕೊಂಡವರಿಗೆಒಂದು ವರ್ಷದೊಳಗೆ ಪರಿಹಾರ ನೀಡಬೇಕು. ಆದರೆ ಇಷ್ಟು ವರ್ಷಗಳಾದರೂ ಜಿಲ್ಲಾಧಿಕಾರಿಗಳಾಗಲಿ, ಸರ್ಕಾರವಾಗಲಿ ಯಾವುದೇ ಪರಿಹಾರ ನೀಡಲುಕ್ರಮ ಕೈಗೊಳ್ಳದೆ ರೈತರ ಜೀವನವನ್ನು ಸಂಕಷ್ಟಕ್ಕೀಡು ಮಾಡಿದೆ.

ಉಡಾಫೆ ಉತ್ತರ: ಭೂಮಿಯನ್ನು ಕಳೆದುಕೊಳ್ಳುತ್ತಿರುವ ರೈತರಿಗೆ ಪರಿಹಾರ ಗಗನ ಕುಸುಮವಾಗಿದ್ದು, ಸರ್ಕಾರ ಕಣ್ಣೊರೆಸುವ ಕೆಲಸ ಬಿಟ್ಟು ನ್ಯಾಯಯುತಪರಿಹಾರ ನೀಡಬೇಕು. ಸಂಬಂಧಪಟ್ಟ ಇಲಾಖೆಗಳಿಗೆಪ್ರತಿನಿತ್ಯ ಅಲೆಯುವಂತಾಗಿದ್ದು, ಅಧಿಕಾರಿಗಳಉಡಾಫೆ ಉತ್ತರದಿಂದ ರೈತರು ಬೇಸತ್ತಿದ್ದಾರೆ. ಸರ್ಕಾರ ಭೂಮಿಯನ್ನು ಸ್ವಾಧೀನಪಡಿಸಿ ಸರ್ವೆಮಾಡಿ ಕೈಚೆಲ್ಲಿ ಕುಳಿತಿದ್ದು, ಇತ್ತ ಮನೆ ಇಲ್ಲದೇಬೀದಿಯಲ್ಲಿ ಜೀವನ ನಿರ್ವಹಿಸುವಂತಾಗಿದೆ ಎಂದು ದೂರಿದರು.

ಭೂಮಿಯಲ್ಲಿ ಬೆಳೆ ಬೆಳೆಯಲು ಆಗುತ್ತಿಲ್ಲ. ಬ್ಯಾಂಕ್‌ಗಳಲ್ಲಿ ಲೋನ್‌ ತೆಗೆದುಕೊಳ್ಳಲು ಹೋದರೆಭೂಮಿ ನೋಟಿಫಿಕೇಷನ್‌ ಆಗಿದೆ ಎಂದುಹೇಳುತ್ತಾರೆ. ಇದರಿಂದ ಭೂಮಿ ಇದ್ದೂಇಲ್ಲದಂತಾಗಿದೆ ಎಂದರು.

ಹೋರಾಟ ಎಚ್ಚರಿಕೆ: ತುಮಕೂರು, ಶಿವಮೊಗ್ಗ ಮತ್ತಿತರ ಎಲ್ಲಾ ಕಡೆಗಳಲ್ಲಿ ಈಗಾಗಲೇ ಪರಿಹಾರ ನೀಡಲಾಗಿದೆ. ಈ ಭಾಗದ ರೈತರನ್ನು ಜನಪ್ರತಿನಿಧಿಗಳುಏಕೆ ಕಡೆಗಣಿಸುತ್ತಿದ್ದಾರೆಂದು ತಿಳಿಯುತ್ತಿಲ್ಲ.ಭೂಸ್ವಾಧೀನ ಮಾಡಿ ರೈತರಿಗೆ ನೋಟಿಸ್‌ನೀಡಿದಾಗಿನಿಂದಲೂ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸುತ್ತಾ ಬಂದಿದ್ದರೂ ಕ್ರಮವಹಿಸುತ್ತಿಲ್ಲ ಎಂದು ಆರೋಪಿಸಿದರು. ಸರ್ಕಾರಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರೈತರನ್ನುಒಗ್ಗೂಡಿಸಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಭೂಮಿ ಕಳೆದುಕೊಂಡಸಂತ್ರಸ್ತರಾದ ಲಕ್ಷ್ಮೀಶ್‌, ಶಶಿಧರ್‌, ದೇವರಾಜು, ಪ್ರಕಾಶ್‌ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಂತ್ರಸ್ತರು ಭಾಗವಹಿಸಿ ತಮ್ಮ ನೋವು ತೋಡಿಕೊಂಡರು.

ಕಚೇರಿಗೆ ಅಲೆದಾಟ :  ಜೆಡಿಎಸ್‌ ಮುಖಂಡ ಜಕ್ಕನಹಳ್ಳಿ ಲಿಂಗರಾಜುಮಾತನಾಡಿ, ಭೂಮಿ ಸರ್ವೆ ಮಾಡಿ ಆರು ವರ್ಷಗಳಾದರೂ ಪರಿಹಾರ ನೀಡಿಲ್ಲ.ಇಲಾಖೆಗಳಿಗೆ ಅಲೆದು ಅಲೆದು ಸಾಕಾಗಿದೆ.ನಿಟ್ಟೂರು, ಮಲ್ಲಸಂದ್ರ ಭಾಗದಲ್ಲಿ ಪರಿಹಾರನೀಡಲಾಗಿದೆ. ಈ ಭಾಗದ ಜನರಿಗೆ ಅನ್ಯಾಯಮಾಡುತ್ತಿದ್ದು, ಇದೇ ರೀತಿ ಮುಂದುವರಿದರೆಸಾವಿರಾರು ರೈತರ ಜೊತೆಗೆ ಪ್ರತಿಭಟನೆ ನಡೆಸಲಾಗುವುದು ಎಂದರು.

ಜೀವನ ನಿರ್ವಹಣೆ ಹೇಗೆ? :

ಜಿಪಂ ಮಾಜಿ ಸದಸ್ಯ ಪಂಚಾಕ್ಷರಿ ಮಾತನಾಡಿ, ಭೂಮಿ ಕೊಡಲು ನಾವೇನು ತಕರಾರು ಮಾಡಿಲ್ಲ, ಸರ್ಕಾರ ನೀಡಿದ ಬೆಲೆಗೆ ನಮ್ಮ ಭೂಮಿಯನ್ನು ನೀಡುತ್ತಿದ್ದೇವೆ. ಭೂಮಿ ಕೊಟ್ಟರೂ ಹಣ ಕೊಡದಿದ್ದರೆ ಜೀವನ ನಿರ್ವಹಿಸುವುದು ಹೇಗೆ? ಸರ್ಕಾರ,ಜನಪ್ರತಿನಿಧಿಗಳು ಹಾಗೂ ಭೂಸ್ವಾಧೀನಾಧಿಕಾರಿಗಳ ನಿರ್ಲಕ್ಷ್ಯ ಮುಂದುವರೆದರೆ ರಸ್ತೆಯಲ್ಲಿಕುಳಿತು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿ ಗಳನ್ನೇ ಸ್ಥಳಕ್ಕೆ ಕರೆಯಿಸುತ್ತೇವೆಂದು ಎಚ್ಚರಿಸಿದರು.

ಟಾಪ್ ನ್ಯೂಸ್

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.