ಕಾಂಗ್ರೆಸ್‌ ಕಾರ್ಯಕರ್ತರೇ ಚುನಾವಣೆಗೆ ಸಜ್ಜಾಗಿ

ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ನಿರ್ದೇಶನ

Team Udayavani, Sep 2, 2021, 5:46 PM IST

ಕಾಂಗ್ರೆಸ್‌ ಕಾರ್ಯಕರ್ತರೇ ಚುನಾವಣೆಗೆ ಸಜ್ಜಾಗಿ

ತುಮಕೂರು: ಪ್ರಸುತ್ತ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದರೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಯಾವಾಗ ‌ ಬೇಕಾದರೂ ಬರಬಹುದು. ಹಾಗಾಗಿ, ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ಚುನಾವಣೆ ಎದುರಿಸಲು ಸಿದ್ಧರಾಗಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ
ಸಲೀಂ ಅಹಮದ್‌ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ಕೆಲವೇ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳು ಎದುರಾಗಲಿವೆ. ಇದರ ಜೊತೆಗೆ, ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ವಿಧಾನ ಪರಿಷತ್‌ ಚುನಾವಣೆಯೂ ಎದುರಾಗಲಿದೆ. ಹಾಗಾಗಿ, ಪಕ್ಷದ ಕಾರ್ಯಕರ್ತರು, ಮುಖಂಡರು, ಹೋಬಳಿ ಮತ್ತು ಬೂತ್‌ಮಟ್ಟದಲ್ಲಿ ಯುವ ಕಾರ್ಯಪಡೆ ರಚಿಸಿಕೊಂಡು, ಪಕ್ಷದ ಪರ ಕೆಲಸ ಮಾಡುವ ಮೂಲಕ ಅತಿ ಹೆಚ್ಚು
ಸ್ಥಾನ ಪಡೆಯುವಂತೆ ಮಾಡಬೇಕಾಗಿದೆ ಎಂದರು.

ಪಕ್ಷ ಸದೃಢ: ಒಂದು ಕಾಲದಲ್ಲಿ ಜಿಲ್ಲೆಯಲ್ಲಿ ಪಕ್ಷ 13ರಲ್ಲಿ 9 ಸ್ಥಾನಗಳನ್ನು ಗೆದ್ದ ಉದಾಹರಣೆ ಇದೆ. ಈಗಲೂ ಪಕ್ಷ ಸದೃಢವಾಗಿದೆ. ಪಕ್ಷದ ಪರವಾಗಿ ಮುಖಂಡರಾದ ‌ಡಾ.ಜಿ.ಪರಮೇಶ್ವರ್‌,ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಸೇರಿದಂತೆ ಎಲ್ಲಾ ನಾಯಕರು ತಮ್ಮ ಶಕ್ತಿ ಮೀರಿ ದುಡಿಯುತ್ತಿದ್ದಾರೆ. ಅವರ ಹಾದಿಯಲ್ಲಿಯೇ ಇತರೆ ನಾಯಕರು ಸಹ ಪಕ್ಷವನ್ನು ಬಲಪಡಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಇದರ ಫ‌ಲವಾಗಿ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ನಾವು ,ನೀವುಗಳೆಲ್ಲರೂ ಒಗ್ಗೂಡಿ ಈ ಕಾರ್ಯವನ್ನು ಯಶಸ್ವಿಗೊಳಿಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಮಾಹಿತಿ ಪ್ರಬಲ ಅಸ್ತ್ರವಾಗಲಿದೆ:ಕೋವಿಡ್‌ ದಂತಹ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಕಾಂಗ್ರೆಸ್‌ ಪಕ್ಷದ ಸಹಾಯಹಸ್ತ, ಆರೋಗ್ಯ ಹಸ್ತ ಕಾರ್ಯಕ್ರಮದ ಮೂಲಕ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ. ತಾವು ಮಾಡಿರುವ ಕೆಲಸ ಮತ್ತು ಸಂಗ್ರಹಿಸಿರುವ ಮಾಹಿತಿಗಳನ್ನು ಅದಷ್ಟು ಬೇಗ ಕೆಪಿಸಿಸಿಗೆ ಸಲ್ಲಿಸಬೇಕಿದೆ. ಇದು ಸರ್ಕಾರದ ವಿರುದ್ಧ ವಿರೋಧ ಪಕ್ಷಕ್ಕೆ ಸಿಗುವ ದೊಡ್ಡ ಸಾಕ್ಷ್ಯ ವಾಗಿದೆ. ಕೋವಿಡ್‌ ಸಾವು,ನೋವು, ಔಷಧ ಹಂಚಿಕೆ, ಫ‌ುಡ್‌ ಕಿಟ್‌ ಹಂಚಿಕೆ ಸೇರಿದಂತೆ ಎಲ್ಲ ವಿಭಾಗಗಳಲ್ಲಿಯೂ ಸರ್ಕಾರ ಸುಳ್ಳು ಮಾಹಿತಿ ನೀಡುತ್ತಿದೆ. ಇಂತಹ ಹಸಿ ಸುಳ್ಳು ಹೇಳಿದ ಸರ್ಕಾರದ ವಿರುದ್ಧ ಹೋರಾಡಲು ಕಾರ್ಯಕರ್ತರು ನೀಡುವ ಈ ಮಾಹಿತಿ ಪ್ರಬಲ ಅಸ್ತ್ರ ವಾಗಲಿದೆ ಎಂದರು.

ಇದನ್ನೂ ಓದಿ:ಸಾರ್ವಕಾಲಿಕ ದಾಖಲೆ ವಹಿವಾಟು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 514 ಅಂಕ ಜಿಗಿತ

ಶಿಸ್ತು ಕ್ರಮಕ್ಕೆ ಶಿಫಾರಸು: ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ರಾಮಕೃಷ್ಣ ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷರು ತಿಳಿಸಿರುವಂತೆ ಕೊರೊನಾ ಸಂದರ್ಭದಲ್ಲಿ ಪಕ್ಷದ ವತಿಯಿಂದ ಕೈಗೊಂಡ ಸಹಾಯಹಸ್ತ, ಆರೋಗ್ಯ ಹಸ್ತ, ಕಾರ್ಯಕ್ರಮಗಳು ಆಡಳಿತ ಪಕ್ಷದ ವಿರುದ್ಧ ಹೋರಾಟ ನಡೆಸಲು ಪ್ರಬಲ ಅಸ್ತ್ರವಾಗಿದೆ. ಈ ಹಿನ್ನೆಲೆ ಆರೋಗ್ಯ ಹಸ್ತ, ಸಹಾಯಹಸ್ತ, ಪಂಚಾಯಿತಿ ಕಮಿಟಿ, ವಾರ್ಡ್‌ ಕಮಿಟಿ ರಚನೆ ಇವುಗಳ ಜವಾಬ್ದಾರಿ ಹೊತ್ತಿರುವ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ಕೂಡಲೇ ಮಾಹಿತಿಯನ್ನು ಪಕ್ಷದ ಕಚೇರಿಗೆ ಸಲ್ಲಿಸಬೇಕು. ಇಲ್ಲದಿದ್ದ ಪಕ್ಷದಲ್ಲಿ ಅಂತಹ ಅಧ್ಯಕ್ಷರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹೈಕಮಾಂಡ್‌ ನಿರ್ಧಾರಕ್ಕೆ ಸ್ವಾಗತ: ವಿಧಾನ ಪರಿಷತ್‌ನ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಈಗಾಗಲೇ ಕೆಲವರು ಅರ್ಜಿ ಸಲ್ಲಿಸಿದ್ದಾರೆ. ಪರಿಶಿಷ್ಟ ಜಾತಿ ಎಡಗೈ ಸಮುದಾಯದಿಂದ ಜಿಪಂ ಸದಸ್ಯರಾದ ಕೆಂಚಮಾರಯ್ಯ, ಒಕ್ಕಲಿಗ ಸಮಾಜದಿಂದ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಆಡಿಟರ್‌ ಯಲಚವಾಡಿ ನಾಗರಾಜು, ವಾಲ್ಮೀಕಿ ಸಮುದಾಯದಿಂದ ರಾಜ್ಯ
ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಸೀ.ಬಿ.ನರಸಿಂಹಯ್ಯ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ನನಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಕೆಲವರು ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಬಂದ ಅರ್ಜಿಗಳನ್ನು ಪಕ್ಷದ ಹೈಕಮಾಂಡ್‌ಗೆ ಕಳುಹಿಸಲಾಗುವುದು. ಜಿಲ್ಲೆಯ ಮುಖಂಡರು ಮತ್ತು ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ಸ್ವಾಗತವಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎಸ್‌.ಷಪಿ ಅಹಮದ್‌, ಮಾಜಿ ಶಾಸಕ ಡಾ. ಎಸ್‌. ರಫೀಕ್‌ ಅಹಮದ್‌, ಕೆಪಿಸಿಸಿ ವಕ್ತಾರ ಮುರಳೀಧರ್‌ ಹಾಲಪ್ಪ, ಕೆಂಚಮಾರಯ್ಯ, ಹೊನ್ನಗಿರಿಗೌಡ, ಯಲಚವಾಡಿ ನಾಗರಾಜು, ಚಂದ್ರಶೇಖರಗೌಡ, ಮರಿಚನ್ನಮ್ಮ, ಸುಜಾತಾ, ಪುಟ್ಟರಾಜು, ರೇವಣ್ಣ
ಸಿದ್ದಯ್ಯ ಮತ್ತಿತರರು ಇದ್ದರು.

ಬಿಜೆಪಿ ಸರ್ಕಾರಕ್ಕೆ ಜೀವವೇ ಇಲ್ಲ
ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರ್ಕಾರಕ್ಕೆ ಜೀವವೇ ಇಲ್ಲ. ಇದೊಂದು ನಿಜೀರ್ವ ಸರ್ಕಾರ. ಮಹಿಳೆಯರು, ಮಕ್ಕಳ ಮೇಲಿನ ಅತ್ಯಾಚಾರ ಏರು ಮುಖವಾಗಿದೆ. ಅಲ್ಲದೆ,ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದನ್ನುತಹಬದಿಗೆ ತರಬೇಕಾದ ಗೃಹ ಸಚಿವರು ಉಡಾಫೆ ಉತ್ತರ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಈ ಎಲ್ಲ ಅಂಶಗಳನ್ನು ಜನರ ಮುಂದಿಡುವಕೆಲಸವನ್ನುಕಾಂಗ್ರೆಸ್‌ಕಾರ್ಯಕರ್ತರು ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ತಿಳಿಸಿದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.