ಫೈಲ್ ವಿಚಾರವಾಗಿ ವಾಗ್ವಾದ : ವಿಎ ಮೇಲೆ ಆರ್‌ಐ ಹಲ್ಲೆ; ಗ್ರಾಮಲೆಕ್ಕಿಗರ ಪ್ರತಿಭಟನೆ  

Team Udayavani, Nov 19, 2022, 8:39 PM IST

1-asdasdas

ಕುಣಿಗಲ್ : ನ್ಯಾಯಾಲಯದ ದಾಖಲೆ ಫೈಲ್ ಸಂಬಂಧ ಇಬ್ಬರು ಅಧಿಕಾರಿಗಳ  ನಡುವೆ ವಾಗ್ವಾದ ನಡೆದು, ಕುಪಿತಗೊಂಡ  ರಾಜಸ್ವ ನಿರೀಕ್ಷಕ ಗ್ರಾಮ ಲೆಕ್ಕಿಗನ ಮೇಲೆ ಹಲ್ಲೆ ನಡೆಸಿದ್ದು ಇದನ್ನು ಖಂಡಿಸಿ ಗ್ರಾಮಲೆಕ್ಕಿಗರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.

ಎಡಿಯೂರು ರಾಜಸ್ವ ನಿರೀಕ್ಷಕ ಚಂದ್ರಯ್ಯ, ಗ್ರಾಮಲೆಕ್ಕಿಗ ಆರ್.ಯಶವಂತ್ ಮೇಲೆ ಹಲ್ಲೆ ನಡೆಸಿದ್ದಾರೆ, ತಹಶೀಲ್ದಾರ್ ಅವರು  ಸೂಕ್ತ ಕ್ರಮಕೈಗೊಂಡು ನ್ಯಾಯ ದೊರಕಿಸಿಕೊಡುವಂತೆ ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘ, ತಾಲೂಕು ಘಟಕ ಪದಾಧಿಕಾರಿಗಳು ಇಲ್ಲಿನ ತಾಲೂಕು ಕಚೇರಿಯ ಮೆಟ್ಟಿಲ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಬಂದ ಶಿರಸ್ತೇದಾರರ ಮನವರಿಕೆಯಿಂದ ತಕ್ಷಣ ಪ್ರತಿಭಟನೆಯನ್ನು ವಾಪಸ್ ಪಡೆಯುವ ಮೂಲಕ ಹೈಡ್ರಾಮ ನಡೆಯಿತು.

ತಾಲೂಕು ಕಚೇರಿಯಿಂದ ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯ ಹಾಗೂ ಆಸ್ತಿಗೆ ಸಂಬಂಧಿಸಿದಂತೆ ದಾಖಲೆ ಮಾಡಿಕೊಡಬೇಕಾಗಿರುವ ಅಧಿಕಾರಿಗಳೇ ಫೈಲ್ ವಿಚಾರವಾಗಿ ಇಬ್ಬರು ಅಧಿಕಾರಿಗಳು ಬೈದಾಡಿಕೊಂಡು, ರಾಜಸ್ವ ನಿರೀಕ್ಷಕ ತಮ್ಮ ಕೈ ಕೆಳಗಿನ ಅಧಿಕಾರಿ ಗ್ರಾಮ ಲೆಕ್ಕಿಗನ ಮೇಲೆ ಹಲ್ಲೆ ನಡೆಸಿರುವುದು, ನಾಗರಿಕರ ಚರ್ಚೆಗೆ ಗ್ರಾಸವಾಗಿದೆ.

ತಹಶೀಲ್ದಾರ್‌ಗೆ ದೂರು
ತಾಲೂಕು ಕಚೇರಿಯಲ್ಲಿ ಕರ್ತವ್ಯನಿರತ ಗ್ರಾಮಲೆಕ್ಕಿಗ ಆರ್, ಯಶವಂತ್ ಅವರ ಮೇಲೆ ಎಡಿಯೂರು ಹೋಬಳಿ ರಾಜಸ್ವ ನಿರೀಕ್ಷಕ ಚಂದ್ರಯ್ಯ ಗ್ರಾಮ ಲೆಕ್ಕಿಗನನ್ನು ಅವಾಚ್ಯವಾದ ಶಬ್ದಗಳಿಂದ ನಿಂಧಿಸಿ ದೈಹಿಕವಾಗಿ ಹಲ್ಲೆ ಮಾಡಿರುತ್ತಾರೆ, ತಮ್ಮ ಅಧೀನ ನೌಕರರ ಮೇಲೆ ಹಲ್ಲೆ ಮಾಡಿರುವ ಘಟನೆಯಿಂದ ಹಲ್ಲೆಗೆ ಒಳಗಾದ ನೌಕರರನ ಮತ್ತು ತಾಲೂಕಿನ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿದ್ದು ಸಾಮಾಜಿಕ ನ್ಯಾಯಕ್ಕಾಗಿ ಈ ಅಮಾನವೀಯ ಘಟನೆ ವಿರುದ್ದ ಈ ಕೂಡಲೇ ಹಲ್ಲೆ ಮಾಡಿರುವ ಚಂದ್ರಯ್ಯ ಅವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಂಡು ನೊಂದ ಗ್ರಾಮ ಲೆಕ್ಕಾಧಿಕಾರಿಗೆ ನ್ಯಾಯ ಒದಗಿಸಿ ಕೊಡುವ ಜತೆಗೆ ಮುಂದಿನ ದಿನಗಳಲ್ಲಿ ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮಕೈಗೊಂಡು ಗ್ರಾಮಲೆಕ್ಕಾಧಿಕಾರಿಗಳು ಮುಕ್ತವಾಗಿ ಕರ್ತವ್ಯ ನಿರ್ವಹಿಸಲು ಅನುಮಾಡಿಕೊಡಬೇಕೆಂದು ತಹಶೀಲ್ದಾರ್‌ಗೆ ಅವರಿಗೆ ನೀಡಿರುವ ದೂರಿನಲ್ಲಿ ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘ, ತಾಲೂಕು ಘಟಕದ ಅಧ್ಯಕ್ಷ ವಿಜಯಕುಮಾರ್ ಮನವಿ ಮಾಡಿದ್ದಾರೆ.

ಕಾರಣ ಕೇಳಿ ನೋಟಿಸ್
ಘಟನೆ ಸಂಬಂಧಿಸಿದಂತೆ ಉದಯವಾಣಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿ ತಹಶೀಲ್ದಾರ್ ಮಹಬಲೇಶ್ವರ ಯಾವ ವಿಚಾರವಾಗಿ ಗಲಾಟೆ ನಡೆದಿದೆ ಎಂಬುದು ವಿಚಾರ ತಿಳಿದಿಲ್ಲ, ಆದರೆ ಇಬ್ಬರು ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿರುವೆ, ಇಬ್ಬರಿಂದ ಉತ್ತರ ಬಂದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.