
ಕೊರಟಗೆರೆಯಲ್ಲಿ ಸಿಎಂ ಬೊಮ್ಮಾಯಿ, ಬಿಎಸ್ ವೈ ನೇತೃತ್ವದಲ್ಲಿ ಬೃಹತ್ ಸಮಾವೇಶ
ಜನಸಂಕಲ್ಪ ಯಾತ್ರೆ ; ಬಿಜೆಪಿಯಲ್ಲಿ 6 ಮಂದಿ ಪ್ರಬಲ ಆಕಾಂಕ್ಷಿಗಳು
Team Udayavani, Dec 2, 2022, 7:22 PM IST

ಕೊರಟಗೆರೆ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ನೇತೃತ್ವದಲ್ಲಿ ಕೊರಟಗೆರೆ ಪಟ್ಟಣದಲ್ಲಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವು ನಡೆಯಲಿದೆ ಎಂದು ಮಧುಗಿರಿ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ತಿಳಿಸಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ ನಮ್ಮ ಸರಕಾರದ ಸಾಧನೆಗಳು, ಜನಪರ ಕೆಲಸಗಳ ಸಾರ್ಥಕ ಸೇವೆ ಮತ್ತು ಸಬಲೀಕರಣಕ್ಕಾಗಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವನ್ನು ಪಟ್ಟಣದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 7 ರ ಬುಧವಾರ 2 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ, ಜಿಲ್ಲಾ ಮಂತ್ರಿಗಳಾದ ಬಿ.ಸಿ ನಾಗೇಶ್, ಜೆ.ಸಿ.ಮಾಧುಸ್ವಾಮಿ, ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು, ವಿಧಾನ ಪರಿಷತ್ ಸದಸ್ಯರುಗಳಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ ಸೇರಿದಂತೆ ಜಿಲ್ಲೆಯ ನಾಯಕರು, ಮುಖಂಡರು, ತಾಲೂಕಿನ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಈ ಜನಸಂಕಲ್ಪ ಯಾತ್ರೆಗೆ ಸುಮಾರು 25 ಸಾವಿರ ಜನ ಸೇರುವ ನಿರೀಕ್ಷೆಯಿದೆ. ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 2023 ರ ಚುನಾವಣೆಯಲ್ಲಿ ಜಯಗಳಿಸಲಿದ್ದು ನಮ್ಮ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸವನ್ನು ಮಾಡಲಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ 6 ಮಂದಿ ಪ್ರಬಲ ಆಕಾಂಕ್ಷಿಗಳಿದ್ದಾರೆ, ನಾವೆಲ್ಲರೂ ಒಟ್ಟಾಗಿ ಕುಳಿತು 6 ಆಕಾಂಕ್ಷಿಗಳಲ್ಲಿ ಒಗ್ಗಟ್ಟು ಮೂಡಿಸಿ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಿ ಗೆಲ್ಲಿಸಲಾಗುವುದು. ಇದರಲ್ಲಿ ಯಾವುದೇ ಗೊಂದಲವಿಲ್ಲ, ಈ ಯಾತ್ರೆಗೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಜನರು, ಪಕ್ಷದ ಕಾರ್ಯಕರ್ತರು, ಮಹಿಳೆಯರು ಹೆಚ್ಚಿನ ಜನಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.
ಸುದ್ದಿಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಪವನ್‌ಕುಮಾರ್, ಜಿಲ್ಲಾ ಉಪಾದ್ಯಕ್ಷೆ ಸುಶೀಲಮ್ಮ, ಯುವ ಅಧ್ಯಕ್ಷ ಗುರುಪ್ರಸಾದ್, ಜಿಲ್ಲಾ ಪದಾಧಿಕಾರಿಗಳಾದ ಪ್ರವೀಣ್, ಜಯಣ್ಣ, ಕಂಬದ ರಂಗಣ್ಣ, ಮಾರುತಿ ಗಂಗಹನುಮಯ್ಯ, ವಿಶ್ವನಾಥ್, ಶ್ರೀನಿವಾಸ್, ಮಮತ, ವಿಧಾನ ಸಭಾ ಆಕಾಂಕ್ಷಿಗಳಾದ ಗಂಗಹನುಮಯ್ಯ, ವೈ.ಹೆಚ್.ಹುಚ್ಚಯ್ಯ, ಮುನಿಯಪ್ಪ, ಡಾ. ಲಕ್ಷ್ಮೀಕಾಂತ್, ಅನಿಲ್‌ಕುಮಾರ್, ಪ.ಪಂ. ಸದಸ್ಯ ಪ್ರದೀಪ್ ಕುಮಾರ್, ರಂಗನಾಥ್, ಪ್ರೇಮ್ ಕುಮಾರ್, ಆಶ್ರಯ ಸದಸ್ಯ ನಂಜುಂಡ ಶೆಟ್ಟಿ, ಬಗರ್ ಹುಕುಂ ಸದಸ್ಯರಾದ ಹೇಮಲತಾ, ದೇವರಾಜು, ಸೇರಿದಂತೆ ತಾಲೂಕು ಮುಖಂಡರುಗಳು ಹಾಜರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

Union Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ

Union Budget 2023: ಈ ಬಾರಿ ಬಜೆಟ್ ನಲ್ಲಿ ಯಾವುದು ದುಬಾರಿ, ಯಾವುದು ಅಗ್ಗ?