ಹಣ್ಣುಗಳ ರಾಜನನ್ನೂ ಕಾಡುತ್ತಿರುವ ಕೋವಿಡ್‌ 19


Team Udayavani, May 16, 2020, 6:18 AM IST

hannugala-raja

ತುಮಕೂರು: ಹಣ್ಣುಗಳ ರಾಜ ಮಾವಿನ ಹಣ್ಣಿನ ಕಾರುಬಾರು ಜಿಲ್ಲೆಯಲ್ಲಿ ಆರಂಭಗೊಳ್ಳುತ್ತಿದೆ, ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಹಣ್ಣುಗಳ ರಾಜನ ವ್ಯಾಪಾರಕ್ಕೆ ಮಂಕು ಕವಿದಿದೆ. ತೆಂಗು, ಹಲಸಿನ ಹಣ್ಣುಗಳಂತೆ  ರಾಜ್ಯದಲ್ಲಿ ಹೆಚ್ಚು ಮಾವು ಬೆಳೆಯುವ ಕಲ್ಪತರು ನಾಡಿನಲ್ಲಿ ಈ ಬಾರಿ ನಿರೀಕ್ಷಿತ ಫ‌ಸಲೂ ಇಲ್ಲ,

ಮಾವು ಬೆಳೆಗಾರ ರೈತನಿಗೆ ಸಂತಸ ವಾಗುವಂತಹ ಬೆಲೆಯೂ ಇಲ್ಲ, ಅಕಾಲಿಕ ಮಳೆ ಹಾಗೂ ಆಲಿಕಲ್ಲಿನಿಂದಾಗಿ ಹವಾಮಾನ ವೈಫರಿತ್ಯದಿಂದಾಗಿ ಇಳುವರಿ ಕಡಿಮೆಯಾಗಿದೆ. ಇದರ ಜೊತೆಗೆ ಮಾರುಕಟ್ಟೆಗೆ ಬಂದಿರುವ ಮಾವಿಗೆ ಕೊರೊನಾ ವೈರಸ್‌ ಭೀತಿ ಇರುವ ಕಾರಣ ಜನ ಮಾವು ಕೊಂಡು ಕೊಳ್ಳಲು ಮುಂದಾಗುತ್ತಿಲ್ಲ. ಬೇಸಿಗೆಯಲ್ಲಿ ಭಾರೀ ವ್ಯಾಪಾರವಾಗುತ್ತಿದ್ದ ಹಣ್ಣುಗಳಿಗೂ ಕೊರೊನಾ ಲಾಕ್‌ಡೌನ್‌ ನಿಂದ ಬೇಡಿಕೆ ಕಡಿಮೆಯಾಗಿದೆ.

ಈಗ ಮಾರುಕಟ್ಟೆಗೆ ಕಾಲಿಟ್ಟಿರುವ ಮಾವಿಗೆ ನಿರೀಕ್ಷಿತ ಬೇಡಿಕೆ ಇಲ್ಲ  ದಾಗಿದೆ. ನಗರದ ಬಹುತೇಕ ಅಂಗಡಿಗಳಲ್ಲಿ ಮಾವಿನ ಹಣ್ಣುಗಳು ಇನ್ನೂ ಅಷ್ಟಾಗಿ ಕಂಡು ಬರದಿದ್ದರೂ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮಾವಿನ ಮಾರಾಟದ ಭರಾಟೆ ಅಷ್ಟು ಜೋರಾಗಿ ನಡೆಯುತ್ತಿಲ್ಲ. ನಗರದ ಕೆಲವೇ ಅಂಗಡಿಗಳಲ್ಲಿ, ತಳ್ಳುವ ಗಾಡಿಗಳಲ್ಲಿ ಹಾಗೂ ತಲೆಯ ಮೇಲೆ ಬುಟ್ಟಿ ಹೊತ್ತು ಮಾರಾಟ  ಮಾಡುವುದು ಮಾತ್ರ ಕಂಡುಬರುತ್ತಿದೆ.

ಅದರಲ್ಲೂ ಬಾಯಿಗೆ ರುಚಿ ನೀಡುವ ರಸಪುರಿ, ಮಲಗೋಬ, ಬಾದಾಮಿ, ತೋತಾಪುರಿ ಸೇರಿ ಹಲ ವು ಬಗೆಯ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಕಾಲಿಡುತ್ತಿವೆ. ನಗರದ ಪ್ರಮುಖ ರಸ್ತೆಗಳಲ್ಲಿ  ಮಾವಿನ ಹಣ್ಣು ಮಾರಾಟ ನಡೆಯುತ್ತಿದೆ. ಒಂದು ಕೆಜಿ ಮಾವಿಗೆ ಹಣ್ಣಿನ ಆಧಾರದ ಮೇಲೆ ಬೆಲೆ ನಿಗದಿಯಾಗಿದ್ದು, 50 ರೂ. ನಿಂದ 80 ರೂ. ಗಳವರೆಗೂ ಮಾವಿನ ಹಣ್ಣು ಮಾರು ಕಟ್ಟೆಯಲ್ಲಿ ದೊರೆಯುತ್ತಿವೆ.

ಜಿಲ್ಲೆಯ ಬೇರೆ ಬೇರೆ ಭಾಗಗಳಿಂದ ಬರಬೇಕಾಗಿರುವ ಮಾವಿನಹಣ್ಣು ಇನ್ನೂ ಬಂದಿಲ್ಲ. ಹವಾಮಾನ ವೈಪರೀತ್ಯದಿಂದ ಫ‌ಸಲು ಕಡಿಮೆ ಆಗಿದೆ ಕೊರೊನಾ ಹಿನ್ನೆಲೆಯಲ್ಲಿ ಮಾರಾಟವೂ ಕುಸಿದಿದೆ.
-ರಾಮಯ್ಯ, ಮಾವಿನಹಣ್ಣು ಮಾರಾಟಗಾರ

ಜಿಲ್ಲೆಯಲ್ಲಿ 22 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆಯ ಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಹವಾಮಾನ ವೈಪರೀತ್ಯದಿಂದ ಈ ಬಾರಿ ಫ‌ಸಲು ಕಡಿಮೆಯಿದೆ. ತುಮಕೂರು, ಗುಬ್ಬಿ, ಚೇಳೂರು ಎಪಿಎಂಸಿ ಮಾರುಕಟ್ಟೆ ಯಲ್ಲಿ ಮಾವು  ಮಾರಾಟ ನಡೆಯುತ್ತಿದೆ, ಚೇಳೂರು ಮಾರುಕಟ್ಟೆ ದೊಡ್ಡ ಮಾವು ಮಾರುಕಟ್ಟೆ. ಅಲ್ಲಿ ಎಲ್ಲಾ ಮಾವು ಮಾರಾಟಕ್ಕಿದ್ದು ಕೊರೊನಾ ಹಿನ್ನೆಲೆ ಮಾರಾಟ ಕಡಿಮೆಯಾಗಿದೆ.
-ಡಾ.ರಘು, ಉಪನಿರ್ದೇಶಕರು ತೋಟಗಾರಿಕೆ ಇಲಾಖೆ

* ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.