ಕೋವಿಡ್‌ ಕೇರ್‌ ಪ್ರಾರಂಭಿಸಿ


Team Udayavani, Apr 24, 2021, 6:01 PM IST

ಕೋವಿಡ್‌ ಕೇರ್‌ ಪ್ರಾರಂಭಿಸಿ

ತುಮಕೂರು: ಕೋವಿಡ್‌ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ವಾರಾಂತ್ಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿಜಾರಿಗೊಳಿಸಬೇಕು ಹಾಗೂ ಜಿಲ್ಲೆಯಲ್ಲಿ ಶುಕ್ರವಾರವೇ ಕೋವಿಡ್‌ ಕೇರ್‌ ಸೆಂಟರ್‌ ಕಾರ್ಯಾರಂಭ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಸ್ವಾನ್‌ ಮೂಲಕ ತಹಶೀಲ್ದಾರರು ಸೇರಿದಂತೆ ವಿವಿಧಇಲಾಖೆಗಳ ತಾಲೂಕಿನ ಅಧಿಕಾರಿಗಳೊಂದಿಗೆವಿಡಿಯೋ ಕಾನ್ಫರೆನ್ಸ್‌ ಮೂಲಕ ಶುಕ್ರವಾರ ಸಭೆ ನಡೆಸಿ ಸೂಚನೆ ನೀಡಿದರು.

ಕಟ್ಟುನಿಟ್ಟಾಗಿ ಜಾರಿಗೊಳಿಸಿ: ವಾರಾಂತ್ಯದ ಕರ್ಫ್ಯೂ ಅವಧಿಯಲ್ಲಿ ಯಾವ್ಯಾವ ಚಟುವಟಿಕೆಗಳಿಗೆನಡೆಸಲು ಅವಕಾಶ ನೀಡಲಾಗಿದೆಯೋ ಅವುಗಳಿಗೆ ಅವಕಾಶ ಮಾಡಿಕೊಡಿ. ವಾರಾಂತ್ಯದ ಕರ್ಫ್ಯೂ ಮಾರ್ಗಸೂಚಿಗಳನ್ನು ಪೊಲೀಸ್‌ ಇಲಾಖೆಯಸಮನ್ವಯದೊಂದಿಗೆ ಕಟ್ಟುನಿಟ್ಟಾಗಿ ಜಾರಿಗೆತರಬೇಕು. ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಪ್ರತಿನಿತ್ಯ ಕ್ಲೀನಿಂಗ್‌ ಮಾಡಬೇಕು ಎಂದರು.

ವ್ಯವಸ್ಥೆ ಕಲ್ಪಿಸಿ: ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಆರಂಭಿಸುವ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಸೋಂಕಿತರನ್ನು ದಾಖಲು ಮಾಡಲು ಪ್ರಾರಂಭಿಸಬೇಕು. ಮಾರ್ಗಸೂಚಿ ಅನ್ವಯಸೋಂಕಿತರಿಗೆ ಉತ್ತಮ ಗುಣಮಟ್ಟದ ತಿಂಡಿ,ಊಟ ಹಾಗೂ ನೀರಿನ ವ್ಯವಸ್ಥೆ ಮಾಡಬೇಕು.ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಪಿಪಿಇ ಕಿಟ್‌, ಎನ್‌ -95 ಮಾಸ್ಕ್, ತ್ರಿಬಲ್‌ ಲೇಯರ್‌ ಮಾಸ್ಕ್,ಸ್ಯಾನಿಟೈಸರ್‌ ಮತ್ತಿತರ ವ್ಯವಸ್ಥೆ ಕಲ್ಪಿಸಬೇಕು. ಅಲ್ಲಿಕರ್ತವ್ಯ ನಿರತ ವೈದ್ಯರು , ನರ್ಸಿಂಗ್‌ ಸಿಬ್ಬಂದಿ ದಿನದ 24 ಗಂಟೆ ಪಾಳಿಯಲ್ಲಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕಳೆದ ಬಾರಿ ಕೋವಿಡ್‌ ಕೇರ್‌ ಸೆಂಟರ್‌ ನಿರ್ವಹಣೆ ಮಾಡಿದಂತೆಯೇ ಈ ಬಾರಿಯೂ ನಿರ್ವಹಣೆ ಮಾಡಲು ವ್ಯವಸ್ಥೆ ಮಾಡಬೇಕು. ಅಗತ್ಯವಿರುವ ಆಕ್ಸಿಜನ್‌ ಅನ್ನು ಜಂಬೂ ಸಿಲಿಂಡರ್‌ಗಳಲ್ಲಿ ತುಂಬಿಸಿಕೊಳ್ಳಿ. ಯಾವುದೇ ಕಾರಣಕ್ಕೂ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಯವಾಗದಂತೆನಿಗಾ ವಹಿಸಬೇಕು. ರೆಮಿಡಿಸ್ವಿಯರ್‌ ಅಕ್ರಮವಾಗಿ ಮಾರಾಟವಾಗದಂತೆ ನಿಗಾ ಇಡಬೇಕು. ಸೋಂಕಿತರ ಕನಿಷ್ಠ 20 ಮಂದಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಬೇಕು ಎಂದು ಸೂಚಿಸಿದರು.

ಸರ್ಕಾರದ ಎಸ್‌ಒಪಿ ಯಂತೆ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್‌ಗಳಿಗೆ ನಿರ್ದೇಶಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಅಪರಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಎಸಿ ಅಜಯ್‌ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.