ಕೋವಿಡ್‌ ನಿಯಮ ಕಡ್ಡಾಯ

ಅಭ್ಯರ್ಥಿ, ಏಜೆಂಟರ ಸಭೆಯಲಿ ಚುನಾವಣಾಧಿಕಾರಿ ನಂದಿನಿದೇವಿ ಮಾಹಿತಿ

Team Udayavani, Oct 28, 2020, 3:14 PM IST

ಕೋವಿಡ್‌ ನಿಯಮ ಕಡ್ಡಾಯ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಚುನಾವಣಾಧಿಕಾರಿ ಹಾಗೂ ಮಧುಗಿರಿ ಉಪವಿಭಾಗಾಧಿಕಾರಿ ಡಾ. ಕೆ.ನಂದಿನಿದೇವಿ ಹೇಳಿದರು.

ಶಿರಾ ಮಿನಿವಿಧಾನಸೌಧದಲ್ಲಿ ನಡೆದ ವಿಧಾನ ಸ‌ಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳು ಹಾಗೂ ಏಜೆಂಟರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

41 ತಂಡ ರಚನೆ: ಕೋವಿಡ್‌ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪಾಲಿಸದಿದ್ದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು. ಮತದಾರರಿಂದ ನಮೂನೆ - 12 ಡಿ ಫಾರಂ ಹಾಗೂ ಅಂಚೆ ಮತದಾನಕ್ಕಾಗಿ 41 ತಂಡಗಳನ್ನು ರಚಿಸಲಾಗಿದ್ದು, ತಂಡದೊಂದಿಗೆ ಸೆಕ್ಟರ್‌ ಅಧಿಕಾರಿಗಳು, ಪೋಲಿಂಗ್‌ ಅಧಿಕಾರಿಗಳು, ವಿಡಿಯೋಗ್ರಾಫ‌ರ್, ಬಿಎಲ್‌ಒ ಹಾಗೂ ಪೊಲೀಸ್‌ ಸಿಬ್ಬಂದಿ ಇರಲಿದ್ದಾರೆ ಎಂದರು.

ಪ್ರಚಾರಕ್ಕೆ ಅವಕಾಶವಿರುವುದಿಲ್ಲ: ಅಂಚೆ ಮತದಾನ ಪ್ರಕ್ರಿಯೆಯನ್ನು ನಡೆಸಲಾಗುವುದು. ಅಂಚೆ ಮತದಾನ ತಂಡದೊಂದಿಗೆ ಅಭ್ಯರ್ಥಿಗಳ ಏಜೆಂಟರುಗಳು ಹಾಜರಿದ್ದು, ವೀಕ್ಷಣೆ ಮಾಡಬಹುದು. ಆದರೆ ಅಂಚೆ ಮತದಾನದ ವೇಳೆ ಯಾವುದೇ ಪ್ರಚಾರಕ್ಕೆ ಅವಕಾಶವಿರುವುದಿಲ್ಲ ಎಂದರು.

ಮತದಾನದ ರಹಸ್ಯ ಕಾಪಾಡಲಾಗುವುದು: ದಿವ್ಯಾಂಗ ಮತ್ತು 80 ವರ್ಷ ವಯಸ್ಸಿನ ಮತದಾರರು ಮತಚಲಾಯಿಸುವಾಗ ಅಂಚೆ ಪತ್ರದಲ್ಲಿ ರಾಜಕೀಯ ಪಕ್ಷಗಳ ಚಿಹ್ನೆ ಮುಂದೆ ಗುರುತು ಮಾರ್ಕ್‌ ಹಾಕುವ ಮೂಲಕ ತಮ್ಮ ಮತದಾನವನ್ನು ಘೋಷಣೆ ಮಾಡಿಕೊಳ್ಳುತ್ತಾರೆ. ಅಂಚೆ ಮತದಾರರ ತಂಡವು ಅ. 25 ಹಾಗೂ 26ರಂದು ಭೇಟಿ ನೀಡಿದಾಗ ಮತದಾರರು ಇಲ್ಲದಿದ್ದರೆ ಎರಡನೇ ಬಾರಿ ಅ.30 ಮತ್ತು 31ರಂದು ತಂಡ ಮನೆಗೆ ಭೇಟಿ ನೀಡಲಿದೆ. ಅದೇ ಕೊನೆಯ ಬಾರಿಯಾಗಿರುತ್ತದೆ. ಅಂಚೆ ಮತದಾನದ ಸಮಯದಲ್ಲಿ ವ್ಯತ್ಯಾಸವಾದರೂ ಮತದಾನದ ರಹಸ್ಯವನ್ನು ಕಾಪಾಡಲಾಗುವುದು ಎಂದರು.

ಅಭ್ಯರ್ಥಿಗಳಿಗೆ ಮಾಹಿತಿ: 28 ಲಕ್ಷದಿಂದ 30 ಲಕ್ಷದ 80 ಸಾವಿರದವರೆಗೆ ಚುನಾವಣಾ ವೆಚ್ಚ ಅಧಿಕವಾಗಿರುವ ಬಗ್ಗೆ ಸಭೆಗೆ ತಿಳಿಸಿದರು. ಅಲ್ಲದೆ ನಗದು ವಹಿವಾಟನ್ನು 20 ಸಾವಿರ ರೂ. ಗಳಿಂದ 10 ಸಾವಿರ ರೂ.ಗಳಿಗೆ ಇಳಿಕೆ ಮಾಡಿರುವ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಶಿರಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕಿ ಬಿ.ಮಹೇಶ್ವರಿ, ಚುನಾವಣಾ ವೆಚ್ಚ ವೀಕ್ಷಕ ಮೃತ್ಯುಂಜಯ ಸೇನಿ, ತಹಶೀಲ್ದಾರ್‌ ಮಮತ ಇದ್ದರು.

ಉಪ ಚುನಾವಣೆ ಎಡಗೈನ ಮಧ್ಯದ ಬೆರಳಿಗೆ ಶಾಹಿ : ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನ.3ರಂದು ನಡೆಯಲಿದ್ದು ಚುನಾವಣಾ ಮತದಾನದಂದು ಮತದಾರರಿಗೆ ಎಡಗೈನ ಮಧ್ಯದ ಬೆರಳಿಗೆ ಶಾಹಿ ಹಾಕಲು ಚುನಾವಣಾ ಆಯೋಗ ತಿಳಿಸಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ತಿಳಿಸಿದ್ದಾರೆ

ಶಿರಾ ಉಪ ಚುನಾವಣೆಯಲ್ಲಿ ಕೋವಿಡ್‌ ನಿಯಮ ಕಡ್ಡಾಯವಾಗಿರುತ್ತದೆ.ಕೋವಿಡ್ ಸೋಂಕು ಹೆಚ್ಚು ಹರಡುತ್ತಿರುವುದರಿಂದ ಪ್ರತಿಯೊಬ್ಬರೂ ಕೋವಿಡ್ ನಿಯಮ ಪಾಲಿಸಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸಿರ  ಬೇಕು, ಕೋವಿಡ್ ನಿಯಮ ಪಾಲಿಸದೇ ಹೋದರೆ ಅಂತಹ ರಾಜಕೀಯ ಪಕ್ಷಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಡಾ.ಕೆ.ನಂದಿನಿದೇವಿ, ಚುನಾವಣಾಧಿಕಾರಿ

ಟಾಪ್ ನ್ಯೂಸ್

ಸಂಸತ್‌ ಟಿವಿಯಿಂದ ಹೊರಬಂದ ಶಶಿ ತರೂರ್‌

ಸಂಸತ್‌ ಟಿವಿಯಿಂದ ಹೊರಬಂದ ಶಶಿ ತರೂರ್‌

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಕುರಿತ ಅರ್ಜಿಗಳು : ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಕುರಿತ ಅರ್ಜಿಗಳು :ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಜಗತ್ತಿನಲ್ಲೇ ಅತಿ ಹೆಚ್ಚು ಮಹಿಳಾ ಪೈಲಟ್‌ಗಳು ಭಾರತದಲ್ಲಿ!

ಜಗತ್ತಿನಲ್ಲೇ ಅತಿ ಹೆಚ್ಚು ಮಹಿಳಾ ಪೈಲಟ್‌ಗಳು ಭಾರತದಲ್ಲಿ!

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

1-ffdsfd

ಕದ್ರಿ ಗೋಪಾಲನಾಥ್ ಪುಣ್ಯಸ್ಮರಣೆ ; ಪತ್ನಿ ಆರೋಗ್ಯ ಏರುಪೇರು; ಡಿಸಿಯಿಂದಲೇ ಚಿಕಿತ್ಸೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಸರ್ಕಾರದಿಂದ ಅನುದಾನ ತಂದು ಗ್ರಾಪಂ ಅಭಿವೃದಿಗೆ ಆದ್ಯತೆ

ಅಪ್ಪು ಪುಣ್ಯಸ್ಮರಣೆ: 250 ಮಂದಿ ನೇತ್ರದಾನಕೆ ನೋಂದಣಿ 

ಅಪ್ಪು ಪುಣ್ಯಸ್ಮರಣೆ: 250 ಮಂದಿ ನೇತ್ರದಾನಕೆ ನೋಂದಣಿ 

ನನ್ನನ್ನು ಸೋಲಿಸಿದವರಿಗೆ ಗರ್ವ ಭಂಗ ಮಾಡಿ : ಚುನಾವಣಾ ಪ್ರಚಾರದಲ್ಲಿ ದೇವೇಗೌಡ ಕರೆ

ನನ್ನನ್ನು ಸೋಲಿಸಿದವರ ಗರ್ವ ಭಂಗ ಮಾಡಿ : ಚುನಾವಣಾ ಪ್ರಚಾರದಲ್ಲಿ ದೇವೇಗೌಡ ಕರೆ

ಬಿಜೆಪಿ, ಜೆಡಿಎಸ್ ವಿರುದ್ದ ಸಿದ್ದು ಹಿಗ್ಗಾಮುಗ್ಗಾ ವಾಗ್ದಾಳಿ

ಎಡಿಯೂರಿನಲ್ಲಿ ಸಿದ್ದು ಚುನಾವಣಾ ಪ್ರಚಾರ ಸಭೆ : ಬಿಜೆಪಿ, ಜೆಡಿಎಸ್ ವಿರುದ್ದ ವಾಗ್ದಾಳಿ

ಅಂಗಡಿ ಬಳಿ ಟೀ ಕುಡಿಯುತ್ತಿದ್ದವರ ಮೇಲೆ ಹರಿದ ಟ್ರ್ಯಾಕ್ಟರ್: ನಾಲ್ವರಿಗೆ ಗಂಭೀರ ಗಾಯ

ಅಂಗಡಿ ಬಳಿ ಟೀ ಕುಡಿಯುತ್ತಿದ್ದವರ ಮೇಲೆ ಹರಿದ ಟ್ರ್ಯಾಕ್ಟರ್: ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಸಂಸತ್‌ ಟಿವಿಯಿಂದ ಹೊರಬಂದ ಶಶಿ ತರೂರ್‌

ಸಂಸತ್‌ ಟಿವಿಯಿಂದ ಹೊರಬಂದ ಶಶಿ ತರೂರ್‌

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಕುರಿತ ಅರ್ಜಿಗಳು : ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಕುರಿತ ಅರ್ಜಿಗಳು :ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಜಗತ್ತಿನಲ್ಲೇ ಅತಿ ಹೆಚ್ಚು ಮಹಿಳಾ ಪೈಲಟ್‌ಗಳು ಭಾರತದಲ್ಲಿ!

ಜಗತ್ತಿನಲ್ಲೇ ಅತಿ ಹೆಚ್ಚು ಮಹಿಳಾ ಪೈಲಟ್‌ಗಳು ಭಾರತದಲ್ಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.