ಟೆಸ್ಟ್‌ಗಾಗಿ ಆಸ್ಪತ್ರೆ ಮುಂದೆ ಸಾಲು..ಸಾಲು…

ಕೋವಿಡ್‌ ಎರಡನೇ ಅಲೆಗೆ ಬೆಚ್ಚುತ್ತಿರುವ ನಾಗರಿಕರು

Team Udayavani, Apr 27, 2021, 4:25 PM IST

ಟೆಸ್ಟ್‌ಗಾಗಿ ಆಸ್ಪತ್ರೆ ಮುಂದೆ ಸಾಲು..ಸಾಲು…

ತುಮಕೂರು: ತುಮಕೂರಿನಲ್ಲಿ ನಿರೀಕ್ಷೆಗೂ ಮೀರಿ ಕೋವಿಡ್ ಸೋಂಕಿತರು ದಿನೇ ದಿನೆ ಹೆಚ್ಚಳ ಆಗುತ್ತಲೇ ಇದ್ದಾರೆ. ಮನೆಯಲ್ಲಿ ಇದ್ದವರಿಗೂ ಸೋಂಕು ವ್ಯಾಪಿಸತೊಡಗಿದೆ. ಸೋಂಕು ಯಾವರೂಪದಲ್ಲಿ ಬರುತ್ತದೆ ಎಂದು ಯಾರಿಗೂ ತಿಳಿಯದ ಸ್ಥಿತಿ ಇದ್ದು, ನಗರದಲ್ಲಿ ಕೊವೀಡ್‌ ಸೊಂಕು ಪರೀಕ್ಷಿಸಿಕೊಳ್ಳಲು ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ನಗರದಲ್ಲಿ ಕೋವಿಡ್ ಸೋಂಕಿನ ಪರೀಕ್ಷೆಯನ್ನೂ ಎಲ್ಲ ಕಡೆ ತೀವ್ರವಾಗಿ ಮಾಡುತ್ತಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಹೆಚ್ಚು ಜನ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ನಾಗಾಲೋಟದಲ್ಲಿ ಓಡುತ್ತಿರುವ ಕೋವಿಡ್ ಮಹಾಮಾರಿ ತುಮಕೂರುತಾಲೂಕಿನಲ್ಲಿಯೇ ಹೆಚ್ಚು ಸೋಂಕಿತರು ಇರುವುದುಕಂಡು ಬಂದಿದೆ. ಅದರಲ್ಲಿಯೂ ತುಮಕೂರುನಗರದಲ್ಲಿಯೇ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳ ಕಂಡು ಬಂದಿದೆ.

ನಗರದಲ್ಲಿ ಸೋಮವಾರ ಒಂದೇ ದಿನ ಜಿಲ್ಲೆಯಲ್ಲಿ ಕಂಡುಬಂದಿದ್ದ 1,235 ಒಟ್ಟು ಸೋಂಕಿತರಲ್ಲಿ 508 ಸೋಂಕಿತರು ನಗರದಲ್ಲಿಯೇ ಕಂಡು ಬಂದಿದ್ದು, ಇಲ್ಲಿಯವರೆಗೆ ತುಮಕೂರು ತಾಲೂಕಿನಲ್ಲಿ 15,640ಸೋಂಕಿತರು ಇದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 39,709 ಒಟ್ಟು ಸೋಂಕಿತರು ಇದ್ದಾರೆ. ಜಿಲ್ಲೆಯಲ್ಲಿ29,438 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಅದರಲ್ಲಿ ತುಮಕೂರುತಾಲೂಕಿನಲ್ಲಿ 10,646 ಜನ ಸೋಂಕಿತರು ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 9,767 ಒಟ್ಟುಸಕ್ರಿಯ ಪ್ರಕರಣಗಳಿದ್ದು, ತಾಲೂಕಿನಲ್ಲಿಯೇ 4,745ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 504 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ.

ಕೋವಿಡ್ ಟೆಸ್ಟ್‌ಗೆ ಮುಗಿಬಿದ್ದ ಜನ: ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಆರೋಗ್ಯ ಇಲಾಖೆ ಮೇಲಿಂದ ಮೇಲೆ ಹೇಳುತ್ತಿದ್ದರೂ‌ , ಅದಕ್ಕೆ ಯಾವುದೇ ರೀತಿಯಲ್ಲಿ ತಲೆ ಕೆಡಿಸಿಕೊಳ್ಳದ ನಗರದ ಜನ ಈಗ ಸೋಂಕು ಹೆಚ್ಚಾಗುತ್ತಲೇ ಪರೀಕ್ಷೆ ಮಾಡಿಸಿಕೊಳ್ಳಲು ಹೆಚ್ಚು ಜನ ಬರುತ್ತಿದ್ದಾರೆ. ಜ್ವರ, ತಲೆನೋವು, ಕೆಮ್ಮು, ಶೀತ ಇತರೆ ಯಾವುದೇ ರೋಗ ಲಕ್ಷಣ ಇಲ್ಲದಿದ್ದರೂ

ಸೋಂಕು ಕಂಡು ಬರುತ್ತಿರುವುದರಿಂದ ಆತಂಕಗೊಂಡಿರುವ ಜನ ಇರಲಿ ನಮ್ಮದೂ ಪರೀಕ್ಷೆ ಮಾಡಿಸಿಕೊಳ್ಳೋಣ ಎಂದು ಬರುತ್ತಿರುವವರೇ ಹೆಚ್ಚಾಗಿದ್ದು, ಇದರಿಂದರೋಗಲಕ್ಷಣ ಇರುವವರೂ ಕೊರೊನಾ ಪರೀಕ್ಷೆಗಾಗಿಗಂಟಾನುಗಂಟ್ಟಲೆ ಕೋವಿಡ್ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಮುಂದೆ ಸಾಲಿನಲ್ಲಿ ನಿಲ್ಲಬೇಕಾಗಿದೆ.

3 ದಿನವಾದರೂ ವರದಿ ಬಂದಿಲ್ಲ  :

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಕೋವಿಡ್ ಸೋಂಕುಲಕ್ಷಣ ಇರುವವರು ಹಾಗೂ ಸಾಮಾನ್ಯ ಜನ ಒಂದೇ ಕಡೆ ನಿಲ್ಲಬೇಕು. ಇಲ್ಲಿ ಸಿಬ್ಬಂದಿ ಕಡಿಮೆ ಇದ್ದು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವವರು ಹೆಚ್ಚಾಗಿದ್ದಾರೆ. ಇಲ್ಲಿ ಪರೀಕ್ಷೆಗೆ ಬರುವವರ ಮೂಗು ಮತ್ತು ಗಂಟಲಿನ ದ್ರವ ಸಂಗ್ರಹಣೆ ಮಾಡುವುದು ತಡವಾಗುತ್ತಿದೆ.ನಗರದ ವಿವಿಧಕಡೆಗಳಲ್ಲಿ ಕೋವಿಡ್ ಪರೀಕ್ಷೆಗೆ ನೀಡಿದರೆ ಅದರಮಾಹಿತಿಯೇ ಬರುತ್ತಿಲ್ಲ ಎಂದು ಸಾರ್ವಜನಿಕರುದೂರುತ್ತಿದ್ದು, ಇಲ್ಲಿಯ ಶಾಂತಿನಗರ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ನೀಡಿ ಮೂರುದಿನವಾದರೂ ವರದಿ ಬಂದಿಲ್ಲ. ಜಿಲ್ಲಾಡಳಿತ ಮಾದರಿ ನೀಡಿ ಒಂದು ದಿನಕ್ಕೇ ವರದಿ ಬರುತ್ತಿದೆ ಎಂದು ಹೇಳುತ್ತಿದೆ. ಆದರೆ, ನಾಲ್ಕು ದಿನವಾದರೂ ಮಾಹಿತಿ ಬರದೇ ಇರುವುದರಿಂದ ಕೋವಿಡ್ ಸೋಂಕು ಮಾದರಿಯ ಲಕ್ಷಣ ಇರುವವರನ್ನು ಆಸ್ಪತ್ರೆಗೆ ಸೇರಿಸಿಕೊಳ್ಳುತ್ತಿಲ್ಲ ಎಂದು ನಾಗರಿಕರು ದೂರುತ್ತಿದ್ದಾರೆ.

ನನಗೆ ಜ್ವರ, ತಲೆ ನೋವು ಬೇರೆ ಆಸ್ಪತ್ರೆಗೆ ತೋರಿಸಲು ಸಾಧ್ಯವಾಗುತ್ತಿಲ್ಲ. ಕೋವಿಡ್ ವರದಿತೋರಿಸಿ ಎಂದು ಹೇಳುತ್ತಾರೆ. ನಾನು ಮೂರು ದಿನದ ಹಿಂದೆ ಶಾಂತಿನಗರದಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದು, ಇನ್ನು ವರದಿ ಬಂದಿಲ್ಲ. ಏನು ಮಾಡಬೇಕು ಎಂದು ಗೊತ್ತಾಗುತ್ತಿಲ್ಲ. ಈಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕು. ಜಿ.ಆರ್‌.ರಾಜಣ್ಣ, ನಾಗರಿಕ

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.