ಬೇಡಿಕೆ ಈಡೇರಿಕೆಗೆ ದಲಿತ ಹಕ್ಕುಗಳ ಸಮಿತಿ ಪ್ರತಿಭಟನೆ

ವಿಶೇಷ ಸಭೆ ಕರೆದು ಸಮಸ್ಯೆಗಳಿಗೆ ಪರಿಹಾರ ನೀಡಲು ಆಗ್ರಹ

Team Udayavani, Jul 26, 2019, 4:23 PM IST

tk-tdy-03

ತುಮಕೂರು ಡೀಸಿ ಕಚೇರಿ ಮುಂದೆ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ದಲಿತ ಮೇಲಿನ ಹಲ್ಲೆ, ದೌರ್ಜನ್ಯ ಖಂಡಿಸಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ತುಮಕೂರು: ಪರಿಶಿಷ್ಟ ಜಾತಿ ಹಾಗೂ ಪಂಗಡ ನಿಗಮಗಳ ವತಿಯಿಂದ ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕೆ ಸಹಾಯಧನ ಮತ್ತಿತರ ಸೌಲಭ್ಯ ಗಳನ್ನು ಅರ್ಹತೆಗನುಗುಣವಾಗಿ ನೀಡುವಂತೆ ಒತ್ತಾಯಿಸಿ ಹಾಗೂ ದಲಿತ ಮೇಲಿನ ಹಲ್ಲೆ, ದೌರ್ಜನ್ಯ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಶಿಕ್ಷೆ ನೀಡಿ: ದಲಿತ ಹಕ್ಕುಗಳ ಸಮಿತಿ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ, ಜಿಲ್ಲೆಯ ಮಲ್ಲೇಕಾವು ಗ್ರಾಮದಲ್ಲಿ ದಲಿತರು ದೇವಾಲಯಕ್ಕೆ ಪ್ರವೇಶ ಮಾಡಿದರೆಂದು ಜಗದೀಶ್‌ ಎಂಬವರ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ಆದರೂ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸ ಬೇಕು ಎಂದು ಆಗ್ರಹಿಸಿದರು.

ಸೌಲಭ್ಯ ವಿತರಿಸಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಲಿತರ ಮೇಲೆ ಹಲ್ಲೆ, ಅಸ್ಪೃಶ್ಯತಾ ಆಚರಣೆ ಜಾರಿಯಲ್ಲಿದ್ದು ಸರ್ಕಾರ ಇದನ್ನು ತಡೆಗಟ್ಟುವಲ್ಲಿ ಸಂಪೂರ್ಣ ವಿಫ‌ಲವಾಗಿದೆ. ಹೀಗಾಗಿ ಸರ್ಕಾರ ದಲಿತರ ವಿಶೇಷ ಸಭೆ ಕರೆದು ಮುಂದೆ ಬರುವ ಅಧಿವೇಶನದಲ್ಲಿ ಚರ್ಚೆ ಮಾಡಿ ದೌರ್ಜನ್ಯ ನಡೆಯದಂತೆ ಕ್ರಮ ಕೈಗೊಳ್ಳಬೇಕು. ಅರ್ಜಿ ಸಲ್ಲಿಸಿದ ಎಲ್ಲಾ ಬಡವರಿಗೂ ಗಂಗಾ ಕಲ್ಯಾಣ ಯೋಜನೆ, ಭೂಒಡೆತನ ಸ್ವಾಧೀನ, ಸ್ವಯಂ ಉದ್ಯೋಗ ಈ ರೀತಿ ಯೋಜನೆಗಳು ದಲಿತರ ಅಭಿವೃದ್ಧಿಗಾಗಿ ಇದ್ದು ಅರ್ಹ ಫ‌ಲಾನುಭವಿಗಳಿಗೆ ನಿಗಮ ಮಂಡಳಿಗಳ ಮೂಲಕ ಸಮರ್ಪ ಸೌಲಭ್ಯ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಹೋರಾಟ ಅವಶ್ಯ: ಎಸ್‌ಎಫ್ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ, ಹೋರಾಟದ ಮೂಲಕ ದೌರ್ಜನ್ಯ ಹಿಮ್ಮೆಟ್ಟಿಸಬೇಕು, ನಿಗಮ ಮಂಡಳಿಗಳ ಮೂಲಕ ದಲಿತರ ಅಭಿವೃದ್ಧಿಗಾಗಿ ಇರುವ ಸೌಲಭ್ಯಗಳನ್ನು ಹೋರಾಟದ ಮೂಲಕ ಪಡೆಯಬೇಕು ಎಂದರು.

ಕೋಮುವಾದ ವಿರೋಧಿಸಿ: ಡಿವೈಎಫ್ಐ ಜಿಲ್ಲಾ ಧ್ಯಕ್ಷ ಎಸ್‌.ರಾಘವೇಂದ್ರ ಮಾತನಾಡಿ, ದೇಶದ ಅಭಿವೃದ್ಧಿಗಿಂತ ಮುಖ್ಯವಾಗಿ ಧಾರ್ಮಿಕತೆ ಹೆಸರಿ ನಲ್ಲಿ ಕೋಮುವಾದವನ್ನು ಪ್ರಬಲವಾಗಿ ಬೆಳೆಸಲಾ ಗುತ್ತಿದೆ. ಹೆಚ್ಚು ಸಂಘಟನಾತ್ಮಕವಾಗಿ ಹೋರಾಟ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರಾಂತ ರೈತ ಸಂಘದ ಸಹ ಸಂಚಾಲಕ ಬಿ.ಉಮೇಶ್‌, ರೈತರು-ದಲಿತರ ಸಮಸ್ಯೆಗಳು ಒಂದೇ ರೀತಿಯವಾದರೂ ದಲಿತರ ಸಮಸ್ಯೆಗಳು ಜಾತಿ ಆಧಾರದ ಮೇಲೆ ಪರಿಗಣಿಸುವುದು ತಪ್ಪು ಎಂದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್‌.ಕೆ.ಸುಬ್ರಹ್ಮಣ್ಯ, ನಮ್ಮ ಸಮಸ್ಯೆ ಪರಿಹರಿಸಲು ಹೋರಾಟವೊಂದೇ ಮಾರ್ಗ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಸಂಚಾಲಕರಾದ ರಾಜಣ್ಣ, ಜಗದೀಶ್‌, ರಾಜು ವೆಂಕಟಪ್ಪ, ನಾಗಣ್ಣ, ಸುರೇಶ, ಎಸ್‌.ಡಿ.ಪಾರ್ವತಮ್ಮ, ಮಮತಾ, ಮದಲೇಟಪ್ಪ, ನರಸಿಂಹಮೂರ್ತಿ ಮತ್ತಿತರರು ಅಪರ ಜಿಲ್ಲಾಧಿ ಕಾರಿ ಸಹಾಯಕರಿಗೆ ಮನವಿ ಪತ್ರ ಸಲ್ಲಿಸಿ ದಲಿತರ ಕುಂದುಕೊರತೆ ವಿಶೇಷ ಸಭೆ ಕರೆಯುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.