ಗೋಮಾಳ ತೆರವಿಗೆ ಆಗ್ರಹಿಸಿ ಪ‹ತಿಭಟನೆ 3ಕ್ಕೆ
Team Udayavani, Jan 31, 2020, 4:29 PM IST
ಕೊರಟಗೆರೆ: ತಾಲೂಕಿನ ಸರ್ಕಾರಿ ಗೋಮಾಳ, ಗುಂಡು ತೋಪು, ರಾಜ ಕಾಲುವೆ ಹಾಗೂ ಕೆರೆ ಒತ್ತುವರಿ ತೆರವು ಗೊಳಿಸುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಫೆ.3ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಂಡಿರುವುದಾಗಿ ಸಂಘದ ಅಧ್ಯಕ್ಷ ಸಿದ್ಧರಾಜು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗೋಮಾಳ, ಗುಂಡು ತೋಪು ಕೆರೆ ಒತ್ತುವರಿ ಬಗ್ಗೆ ರೈತ ಸಂಘ ಮಾಹಿತಿ ನೀಡಿ, ತೆರವು ಗೊಳಿಸುವಂತೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೂ ತಾಲೂಕು ಅಧಿಕಾರಿಗಳು ಕ್ರಮಕೈಗೊಂಡಿಲ್ಲ. ಸರ್ಕಾರಿ ಭೂಮಿ ಖಾಸಗಿ ಬಲಿಷ್ಠ ವ್ಯಕ್ತಿಗಳ,ಪಾಲಾಗುತ್ತಿದ್ದರೂ ಅಧಿಕಾರಿಗಳು ಕಂಡು ಕಾಣದಂತೆ ಕುಳಿತಿದ್ದಾರೆ. ಎತ್ತಿನಹೊಳೆ ಯೋಜನೆ ಅವೈಜ್ಞಾನಿಕವಾಗಿದ್ದು, ರೈತರಿಗೆ ಅಲ್ಪಸ್ವಲ್ಪ ಹಣ ನೀಡಿ ಕಾಲುವೆ ಮಾಡುತ್ತಿದ್ದಾರೆ. ಬೆಸ್ಕಾಂ ಇಲಾಖೆ ಅಧಿಕಾರಿಗಳು ರೈತರಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಈ ಎಲ್ಲಾ ಕಾರಣ ಮುಂದಿಟ್ಟುಕೊಂಡು ಫೆ.3ರಂದು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಮುಖ್ಯ ರಸ್ತೆಯಲ್ಲಿ ಬೃಹತ್ ಶಾಂತಿಯುತ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.
ರೈತ ಮುಖಂಡರಾದ ಪುಟ್ಟರಾಜು, ರುದ್ರೇಶ್, ಲಕ್ಷ್ಮನಾಯ್ಕ, ವೆಂಕಟೇಶ್, ಈರಣ್ಣ, ಮಲ್ಲೇಶ, ಶಿವರಾಜು,ಶಿವಕುಮಾರ, ಪ್ರಸನ್ನಕುಮಾರ್, ನಂಜುಡಯ್ಯ, ಚೇತನ್ ಕುಮಾರ್, ರವಿಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ