Udayavni Special

ಕಾಮಗಾರಿ ಕೈಗೊಳ್ಳಲು ಇಂಜಿನಿಯರ್‌ಗಳ ವಿಳಂಬ

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅಸಮಾಧಾನ

Team Udayavani, Jul 13, 2019, 5:13 PM IST

TK-TDY-3..

ತುಮಕೂರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಗೆ ಸಂಬಂಧಿಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಮಾತನಾಡಿದರು.

ತುಮಕೂರು: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಇಂಜಿನಿಯರ್‌ಗಳು ವಿಳಂಬ ಮಾಡಿ ರುವುದರಿಂದ ಪ್ರಗತಿ ಸಾಧನೆಯಲ್ಲಿ ಹಿನ್ನೆಡೆ ಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯೋಜನೆಗೆ ಸಂಬಂಧಿಸಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ವರ್ಕ್‌ಸಾಫ್ಟ್ ತಂತ್ರಾಂಶ: ಅಧಿಕಾರಿ, ಇಂಜಿನಿಯರ್‌ಗಳು ನಿಗದಿತ ಅವಧಿಯೊಳಗೆ ಕಾಮಗಾರಿ ಕೈಗೆತ್ತಿಕೊಂಡು ಪೂರ್ಣಗೊಳಿಸುತ್ತಿಲ್ಲ. ಕಾಮಗಾರಿಪೂರ್ಣಗೊಳಿಸದಿರುವುದರಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ಒಟ್ಟು 946 ಕೋಟಿ ರೂ. ಖರ್ಚಾಗದೆ ಬಾಕಿ ಉಳಿದಿದೆ. ಸದರಿ ಕಾಮಗಾರಿಗಳ ಪ್ರಗತಿ ಮೇಲೆ ಕಣ್ಣಿಡಲು ವರ್ಕ್‌ ಸಾಫ್ಟ್ ಎಂಬ ತಂತ್ರಾಂಶ ಹೊಸದಾಗಿ ಸೃಜಿಸ ಲಾಗಿದ್ದು, ಶಾಸಕರ ನಿಧಿ ಯಡಿ ಕೈಗೊಳ್ಳಲಾಗುವ ಕಾಮಗಾರಿಗಳ ಪ್ರಗತಿ ಅಪ್‌ಲೋಡ್‌ ಮಾಡಬೇಕು ಎಂದು ಸೂಚಿಸಿದರು.

2 ವರ್ಷದೊಳಗೆ ಪೂರ್ಣಗೊಳಿಸಿ: ಕಾಮಗಾರಿ ಅನುಷ್ಠಾನಾಧಿಕಾರಿಗಳು ಜಿಲ್ಲಾಧಿಕಾರಿಗೆ ಸಲ್ಲಿ ಸುವ ಮಾಹಿತಿಗೂ ಸಭೆಗೆ ತರುವ ಮಾಹಿತಿಗೂ ಒಂದಕ್ಕೊಂದು ತಾಳೆಯಾಗುತ್ತಿಲ್ಲ. ಸರ್ಕಾರದ ಮಾರ್ಗಸೂಚಿಯನ್ವಯ ಯಾವುದೇ ಕಾಮ ಗಾರಿ ಶಾಸಕರು ಪ್ರಸ್ತಾಪಿಸಿದರೆ ಗರಿಷ್ಠ 2 ವರ್ಷ ದೊಳಗೆ ಪೂರ್ಣಗೊಳಿಸಬೇಕು. 2 ವರ್ಷ ದೊಳಗೆ ಪೂರ್ಣಗೊಳಿಸದಿದ್ದಲ್ಲಿ ಅನುದಾನ ರದ್ದಾಗುತ್ತದೆ ಎಂದರು.

ಯಾವುದೇ ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿ ಯಲ್ಲಿ ಕಾಮಗಾರಿ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಿದಲ್ಲಿ 30 ದಿನಗಳೊಳಗೆ ಜಿಲ್ಲಾಧಿಕಾ ಆಡಳಿತಾತ್ಮಕ ಅನುಮೋದನೆ ನೀಡಬೇಕು. ಶಾಸಕರ ನಿಧಿಯಡಿ ಕೈಗೊಳ್ಳುವ 5 ಲಕ್ಷ ರೂ. ಅಂದಾಜು ವೆಚ್ಚದೊಳಗಿನ ಕಾಮಗಾರಿಗಳಿಗೆ ಟೆಂಡರ್‌ ಕರೆಯುವ ಅಗತ್ಯವಿರುವುದಿಲ್ಲ. ಕಾಮಗಾರಿಯ ಅಂದಾಜು ಮೊತ್ತ 5 ಲಕ್ಷ ರೂ. ಒಳಗಿದ್ದರೆ ಗರಿಷ್ಠ 60 ದಿನಗಳೊಳಗಾಗಿ ಪೂರ್ಣ ಗೊಳಿಸಬೇಕೆಂಬ ನಿಯಮವಿದೆ ಎಂದರು.

1600 ಕಾಮಗಾರಿ ಬಾಕಿ: ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಮಾತನಾಡಿ, ಜಿಲ್ಲೆಯಲ್ಲಿ 2009-10 ರಿಂದ 2018-19ರ ಅಂತ್ಯದವರೆಗೆ ಒಟ್ಟು 1600 ಕಾಮಗಾರಿ ಬಾಕಿಯಿದ್ದು, 1 ವಾರದೊಳಗೆ ಸದರಿ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಿಕೆ ಹಾಗೂ ಆಡಳಿತಾತ್ಮಕ ಅನುಮೋದನೆಗೆ ಕ್ರಮವಹಿಸಲಾಗುವುದು. ಎಲ್ಲಾ ಅನುಷ್ಠಾನಾಧಿಕಾರಿಗಳಿಗೆ ವರ್ಕ್‌ಸಾಫ್ಟ್ ತಂತ್ರಾಂಶಕ್ಕೆ ಮಾಹಿತಿ ಅಪ್‌ಲೋಡ್‌ ಮಾಡಲು ಈಗಾಗಲೇ ಪಾಸ್‌ವರ್ಡ್‌ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಕಾಮಗಾರಿಗಳಿಗೆ ಅನುಮೋದನೆ: ಜಿಲ್ಲಾಧಿ ಕಾರಿ ಡಾ.ಕೆ..ರಾಕೇಶ್‌ಕುಮಾರ್‌ ಮಾತನಾಡಿ, ಕೆಲ್ಯಾಡ್ಸ್‌ ಸಾಮಾನ್ಯ ಕೋಟಾದಡಿ 446 ಕಾಮ ಗಾರಿಗಳಿಗೆ ಕ್ರಿಯಾ ಯೋಜನೆ ತಯಾರಿಸ ಲಾಗಿದ್ದು, 347 ಕಾಮಗಾರಿಗಳಿಗೆ ಅನು ಮೋದನೆ ನೀಡಲಾಗಿದೆ. 2009ರಿಂದ 2019 ರವರೆಗೆ ಬಾಕಿಯಿರುವ 550 ಕಾಮಗಾರಿ ಕೈಗೊಳ್ಳಲು 1723.22ಲಕ್ಷ ರೂ. ಅಂದಾಜುಪಟ್ಟಿ ತಯಾರಿಸಲಾಗಿದ್ದು, ಈಗಾಗಲೇ 327.06ಲಕ್ಷ ರೂ. ಕಾಮಗಾರಿ ಕೈಗೊಳ್ಳುವ ಅನುಷ್ಟಾನ ಏಜೆನ್ಸಿ ಗಳಿಗೆ ಪಾವತಿಸಲಾಗಿದೆ. ಉಳಿದಂತೆ 1396.18 ಲಕ್ಷ ರೂ.ಗಳ ಪಾವತಿ ಮಾಡ ಬೇಕಾಗಿದೆ. ಅಲ್ಲದೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿರುವ ಒಟ್ಟು 448 ಕಾಮಗಾರಿಗಳಿಗೆ 1078.57 ಲಕ್ಷ ರೂ.ಗಳ ಅಂದಾಜು ಪಟ್ಟಿ ತಯಾರಿಸಿದ್ದು, ಈವರೆಗೆ 6ಲಕ್ಷ ರೂ.ಗಳನ್ನು ಪಾವತಿಸಲಾಗಿದೆ. ಉಳಿದಂತೆ 1072.57ಲಕ್ಷ ರೂ. ಪಾವತಿ ಮಾಡಬೇಕಾಗಿದೆ ಎಂದು ತಿಳಿಸಿದರು.

ಜಿಲ್ಲೆಗೆ 2008ರಿಂದ 2019ರ ಆರ್ಥಿಕ ವರ್ಷದ ಅಂತ್ಯದವರೆಗೆ ಒಟ್ಟು 7788 ಕಾಮ ಗಾರಿಗಳಿಗೆ ಮಂಜೂರಾತಿ ದೊರೆತಿದೆ. ಇದರಲ್ಲಿ 6145 ಕಾಮಗಾರಿ ಪೂರ್ಣಗೊಳಿಸಲಾಗಿದೆ ಹಾಗೂ 1105 ಕಾಮಗಾರಿಗಳು ಪ್ರಗತಿ ಹಂತ ದಲ್ಲಿದ್ದು, 538 ಕಾಮಗಾರಿ ಕೈಗೆತ್ತಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಶಿಸ್ತು ಕ್ರಮ ಎಚ್ಚರಿಕೆ: ಕಾಮಗಾರಿ ಪ್ರಗತಿ ಸಾಧಿಸದೆ ಉದಾಸೀನ ಮಾಡುವ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ನಿರ್ದಿಷ್ಟ ಪ್ರಗತಿ ಸಾಧಿಸಲು ಸಕಾಲ ಮಾದರಿ ಅನುಸರಿಸಬೇಕು. ಇಂಜಿನಿಯರ್‌ಗಳು ಕೇಂದ್ರ ಸ್ಥಾನದಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸ ಬೇಕು. ಹೊಣೆಗಾರಿಕೆ ಅರ್ಥ ಮಾಡಿಕೊಳ್ಳಬೇಕು. ವರ್ಕ್‌ಸಾಫ್ಟ್ ಅಂಕಿ-ಅಂಶಗಳನ್ನು ಸಕಾಲ ಪದ್ಧತಿಗೆ ಅಳವಡಿಸಿದಾಗಲೇ ಪ್ರಗತಿ ಕುಂಠಿತ ವಾಗಿರುವ ಬಗ್ಗೆ ಮಾಹಿತಿ ದೊರೆಯುತ್ತದೆ. ಇದರಿಂದ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಡಾ.ಶಾಲಿನಿ ರಜನೀಶ್‌ ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಇರುವ 106 ಗ್ರಾಮಗಳಲ್ಲಿ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಕೊಳವೆಬಾವಿಗಳ ಮರುಪೂರಣ ಕೆಲಸ ಕೈಗೊಳ್ಳಲಾಗಿದೆಯೇ ಎಂದು ಸಭೆಗೆ ಮಾಹಿತಿ ಕೇಳಿದಾಗ ಜಿಲ್ಲಾಧಿಕಾರಿ ಮಾತನಾಡಿ, ಮಧುಗಿರಿಯಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆಗೆ ಕ್ರಮ ಕೈಗೊಂಡು ಯಶಸ್ವಿಯಾಗಿ ದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೂ ಈ ಪದ್ಧತಿ ಅಳವಡಿಕೆಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಾಸಕರ ನಿಧಿಯಡಿ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಮಣ್ಣು ಪರೀಕ್ಷೆ, ನೀರಿನ ಗುಣ ಮಟ್ಟ ಪರೀಕ್ಷೆ ಕೈಗೊಳ್ಳಲು ಎಲ್ಲಾ ಇಲಾಖೆಗಳ ಕಾರ್ಯಪಾಲಕ ಇಂಜಿನಿಯರ್‌ಗಳ ಕಚೇರಿ ಯಲ್ಲಿ ಪ್ರಯೋಗಾಲಯ ಸ್ಥಾಪಿಸ ಬೇಕೆಂದು ನಿರ್ದೇಶನ ನೀಡಿದರು. ಜಿಪಂ ಸಿಇಒ ಶುಭಾಕಲ್ಯಾಣ್‌, ಯೋಜನಾ ಅನುಷ್ಠಾನಾಧಿ ಕಾರಿಗಳು, ಮತ್ತಿತರರು ಇದ್ದರು.

ಟಾಪ್ ನ್ಯೂಸ್

jjjjjjjjjjjjjjk

ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಬರ್ತ್ ಡೇ ಆಚರಿಸಿಕೊಂಡ ಸನ್ನಿ

ದೇಶಾದ್ಯಂತ ಈದ್ ಉಲ್ ಫಿತರ್ ಆಚರಣೆ; ಮೇ 13ರಂದು ಮುಂಬಯಿ ಷೇರುಪೇಟೆ ಬಂದ್

ದೇಶಾದ್ಯಂತ ಈದ್ ಉಲ್ ಫಿತರ್ ಆಚರಣೆ; ಮೇ 13ರಂದು ಮುಂಬಯಿ ಷೇರುಪೇಟೆ ಬಂದ್

ರಾಜ್ಯದ ಸಾಲದ ವಿಚಾರದಲ್ಲಿ ಬಿಜೆಪಿಯಿಂದ ಸುಳ್ಳು ಮಾಹಿತಿ: ಸಿದ್ದರಾಮಯ್ಯ

ರಾಜ್ಯದ ಸಾಲದ ವಿಚಾರದಲ್ಲಿ ಬಿಜೆಪಿಯಿಂದ ಸುಳ್ಳು ಮಾಹಿತಿ: ಸಿದ್ದರಾಮಯ್ಯ

ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ 19 ಚಿಕಿತ್ಸೆ: ಹಿಮಾಚಲ್ ಸರ್ಕಾರ ಘೋಷಣೆ

ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ 19 ಚಿಕಿತ್ಸೆ: ಹಿಮಾಚಲ್ ಸರ್ಕಾರ ಘೋಷಣೆ

ttttttttttttttttttttt

ರಂಜಾನ್ ಹಬ್ಬ : ಸಾಮೂಹಿಕ ಪ್ರಾರ್ಥನೆ ಮಾಡದಂತೆ ಪೊಲೀಸರ ಸೂಚನೆ

ಕುವೆಂಪು ವಿವಿ ಕುಲಪತಿ- ಆಡಳಿತ ಕುಲಸಚಿವರ ನಡುವೆ ಭಿನ್ನಮತ: ಠಾಣೆಯಲ್ಲಿ ದೂರು-ಪ್ರತಿದೂರು

ಕುವೆಂಪು ವಿವಿ ಕುಲಪತಿ- ಆಡಳಿತ ಕುಲಸಚಿವರ ನಡುವೆ ಭಿನ್ನಮತ: ಠಾಣೆಯಲ್ಲಿ ದೂರು-ಪ್ರತಿದೂರು

cv

ಮಹಾರಾಷ್ಟ್ರ ಮತ್ತೆ ಸ್ತಬ್ಧ : ಮೇ 30 ರವರೆಗೆ ಲಾಕ್ ಡೌನ್ ವಿಸ್ತರಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid effect

ಕೊರೊನಾ ನಿಯಮ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತನ್ನಿ

free food

ನಗರದಲ್ಲಿ ಹಸಿದವರಿಗೆ ಉಚಿತ ಊಟ

covid effect

ಹಳ್ಳಿಗರಲ್ಲಿ ಆತಂಕ ಸೃಷ್ಟಿ ಸಿದ ಕೊರೊನಾ!

ಅನಾಥ ಶವದ ಅಂತ್ಯಕ್ರಿಯೆ ಮಾಡುವ  ಮೂಲಕ ಮಾನವೀಯತೆ ಮೆರೆದ ತಹಶೀಲ್ದಾರ್

ಅನಾಥ ಶವದ ಅಂತ್ಯಕ್ರಿಯೆ ಮಾಡುವ  ಮೂಲಕ ಮಾನವೀಯತೆ ಮೆರೆದ ತಹಶೀಲ್ದಾರ್

ನಗರದಲ್ಲಿ ಸೋಂಕಿತರ ಸಂಖ್ಯೆ ಇಳಿಮುಖ!

ನಗರದಲ್ಲಿ ಸೋಂಕಿತರ ಸಂಖ್ಯೆ ಇಳಿಮುಖ!

MUST WATCH

udayavani youtube

ಕರಾವಳಿಯಲ್ಲಿ ಚಂಡಮಾರುತ ವಾರ್ನಿಂಗ್!

udayavani youtube

ಕ್ಯಾಬ್‌ ಮೂಲಕ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ!

udayavani youtube

ಡ್ಯಾನ್ಸ್ ಮೂಲಕ ಕೋವಿಡ್ ಜಾಗೃತಿ ಮೂಡಿಸಿದ ಪೊಲೀಸರು

udayavani youtube

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಗೌತಮ್ ಜಾಮೀನು ಅರ್ಜಿ ವಜಾ

udayavani youtube

ಶೀರೂರು ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕದ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನ

ಹೊಸ ಸೇರ್ಪಡೆ

basava jayanti

ಜಾಗತಿಕ ಲಿಂಗಾಯತ ಮಹಾಸಭಾ ಸಾಗರೋತ್ತರ ಘಟಕದಿಂದ ಬಸವ ಜಯಂತಿ ಕಾರ್ಯಕ್ರಮ

kkkkkkkkkkkkk

ಹಳೆಯಂಗಡಿ : ಮನೆಯಲ್ಲಿಯೇ ರಂಜಾನ್ ಪ್ರಾರ್ಥನೆ

prayer at home

ಹಳೆಯಂಗಡಿ : ಮನೆಯಲ್ಲಿಯೇ ರಂಜಾನ್ ಪ್ರಾರ್ಥನೆ

jjjjjjjjjjjjjjk

ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಬರ್ತ್ ಡೇ ಆಚರಿಸಿಕೊಂಡ ಸನ್ನಿ

ದೇಶಾದ್ಯಂತ ಈದ್ ಉಲ್ ಫಿತರ್ ಆಚರಣೆ; ಮೇ 13ರಂದು ಮುಂಬಯಿ ಷೇರುಪೇಟೆ ಬಂದ್

ದೇಶಾದ್ಯಂತ ಈದ್ ಉಲ್ ಫಿತರ್ ಆಚರಣೆ; ಮೇ 13ರಂದು ಮುಂಬಯಿ ಷೇರುಪೇಟೆ ಬಂದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.