ಬೇಡಿಕೆ ಈಡೇರಿಸಿದ್ರೆನೇ ಖಾಸಗಿ ಬಸ್‌ ರಸ್ತೆಗೆ

Team Udayavani, Jun 3, 2020, 6:27 AM IST

namagu package

ತುಮಕೂರು: ಕೋವಿಡ್‌ 19 ವೈರಸ್‌ನಿಂದ ಲಾಕ್‌ಡೌನ್‌ ಆಗಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್‌ ಮಾಲೀಕರು ತೀವ್ರ ಸಂಕಷ್ಟ ಎದುರಿಸು ತ್ತಿದ್ದು, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿ ಸಿದರೆ ಮಾತ್ರ ಖಾಸಗಿ ಬಸ್‌ಗಳು ರಸ್ತೆಗೆ ಇಳಿಯ  ಲಿವೆ ಎಂದು 14 ಜಿಲ್ಲೆಗಳ ಖಾಸಗಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷರು ಹೇಳಿದರು.

ನಗರಕ್ಕೆ ಸಮೀಪದ ಹಿರೇಹಳ್ಳಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಖಾಸಗಿ ಬಸ್‌ ಮಾಲೀಕರ ಸಂಘದ  ತುಮಕೂರು ಜಿಲ್ಲಾಧ್ಯಕ್ಷ ಬಿ.ಎಸ್‌.ಬಲಶಾಮಸಿಂಗ್‌, ನಮ್ಮ ಜಿಲ್ಲೆಯೂ ಸೇರಿದಂತೆ ಶಿವಮೊಗ್ಗ, ಚಿತ್ರದುರ್ಗ, ದಾವಣ ಗೆರೆ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ,  ಮೈಸೂರು, ಚಿಕ್ಕ ಮಗಳೂರು, ಚಾಮರಾಜನಗರ ಸೇರಿದಂತೆ 14 ಜಿಲ್ಲೆಗಳ ಖಾಸಗಿ ಬಸ್‌ ಮಾಲೀಕರ ಸಂಘದ ಜಿಲ್ಲಾಧ್ಯಕ್ಷರು ಸೇರಿ ಸಭೆ ನಡೆಸಲಾಗಿದೆ ಎಂದರು.

ರಿಯಾಯಿತಿ ನೀಡಲು ಮನವಿ: ಈ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬಂದು ನಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒಕ್ಕೊರಲ ಮನವಿ ಸಲ್ಲಿಸಲಾಗುವುದು. ಕೋವಿಡ್‌-19 ನಿಂದ ಮಾ.24ರಿಂದಲೇ ಸಾರಿಗೆ ಪ್ರಾಧಿಕಾರದ  ಆದೇಶದಂತೆ ಖಾಸಗಿ ಬಸ್‌ಗಳನ್ನು ನಿಲ್ಲಿಸಲಾಗಿದೆ. ಕೆಎಂವಿಟಿ ಆಕ್ಟ್ ಪ್ರಕಾರ ರಾಜ್ಯ ಸರ್ಕಾರವು ಬಸ್‌ಗಳ ತ್ರೆçಮಾಸಿಕ ತೆರಿಗೆಯನ್ನು ಮುಂಗಡವಾಗಿ ಪಡೆಯುತ್ತಿದ್ದು, ಇದನ್ನು ಮರುಪರಿಶೀಲಿಸಿ ತೆರಿಗೆ ಮುಕ್ತ ಹಾಗೂ ರಿಯಾಯಿತಿ  ನೀಡಲು ಅವಕಾಶವಿದೆ ಇದನ್ನು ಪರಿಶೀಲಿಸಿ ಪರಿಗಣಿಸಬೇಕೆಂದು ಒತ್ತಾಯಿಸಿದರು.

ತೆರಿಗೆ ಮನ್ನಾ ಮಾಡಿ: ಚಿತ್ರದುರ್ಗ ಖಾಸಗಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷ ಟಿ.ಎ. ಲಿಂಗಾರೆಡ್ಡಿ ಮಾತನಾಡಿ, 2020ರವರೆಗೆ ತೆರಿಗೆಯನ್ನು ಮನ್ನಾ ಮಾಡಿ ಮತ್ತೆ 2021ರ ಮಾರ್ಚ್‌ವರೆಗೆ ಶೇ.50ರಷ್ಟು ತೆರಿಗೆ ಪಾವತಿಗೆ ಅವಕಾಶ  ಕಲ್ಪಿಸಬೇಕು. ಈಗಾಗಲೇ ಖಾಸಗಿ ಬಸ್‌ಗಳನ್ನು ನಿರುಪಯುಕ್ತತೆಗಾಗಿ ಸರೆಂಡರ್‌ ಮಾಡಿದ್ದು, ಈ ಅವಧಿಯನ್ನು ಬಿಟ್ಟು ಮುಂದಿನ ಅವಧಿಗೆ ತೆರಿಗೆ ವಿನಾಯಿತಿ ಕೊಟ್ಟು ಮತ್ತು ಡಿಸೆಂಬರ್‌ ನಂತರ ಶೇ.50ರಷ್ಟು ವಿನಾಯ್ತಿ ನೀಡಬೇಕು  ಎಂದರು.

ನಮಗೂ ಪ್ಯಾಕೇಜ್‌ ಘೋಷಿಸಿ: ಕೋಲಾರ ಜಿಲ್ಲಾಧ್ಯಕ್ಷ ಶುಭಾಷ್‌ ರೆಡ್ಡಿ ಮಾತನಾಡಿ, ನಮ್ಮಿಂದ ತ್ರೆçಮಾಸಿಕ ತೆರಿಗೆಯನ್ನು ಮುಂಗಡವಾಗಿ ಪಡೆಯುತ್ತಿದ್ದು, ಇದನ್ನು 15 ದಿನಗಳ ಬದಲಾಗಿ ಒಂದು ತಿಂಗಳ  ಮುಂಗಡವಾಗಿ ಪಡೆಯಬೇಕು.  ಈಗಾಗಲೇ ವಿವಿಧ ಟ್ಯಾಕ್ಸಿ, ಆಟೋ ಚಾಲಕರಿಗೆ ಪ್ಯಾಕೇಜ್‌ ಘೋಷಣೆ ಮಾಡಿದಂತೆ ಖಾಸಗಿ ಬಸ್‌ಗಳ ಚಾಲಕರಿಗೂ ನೀಡಬೇಕೆಂದು ಆಗ್ರಹಿಸಿದರು.

ಸ್ಪಷ್ಟ ನಿಲುವು ಪ್ರಕಟಿಸಿ: ಲಾಕ್‌ಡೌನ್‌ ಸಡಿಲಿಕೆ ನಂತರ ಖಾಸಗಿ ಬಸ್‌ ಓಡಿಸಲು ಸೂಚನೆ ಬಂದಲ್ಲಿ, ಪ್ರಯಾಣಿಕರ ಸಾಗಾಟದ ಸಂಖ್ಯೆಯು ಪ್ರತಿ ಬಸ್‌ಗೆ 48 ಜನ ಇದ್ದು, ಶೇ.33ಕ್ಕೆ ಇಳಿಸಬಹುದು. ಜೊತೆಗೆ ಅಂತರ್‌ ಜಿಲ್ಲಾ ಓಡಾಟಕ್ಕೆ  ನಿರ್ಬಂಧ ಬರಬಹುದು. ಬಸ್‌ಗಳಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ, ಸ್ಯಾನಿಟೈಸರ್‌ ಬಳಸುವುದು ಕಡ್ಡಾಯ, ಸ್ಕ್ರೀನಿಂಗ್‌ ತಪಾಸಣೆ ಕಡ್ಡಾಯ ಎಂದು ಸರ್ಕಾರ ಏನಾದರೂ ಆದೇಶಿಸಿದರೆ ನಾವು ಅವೆಲ್ಲವನ್ನು  ನಿಭಾಯಿಸಲು ಕಷ್ಟಸಾಧ್ಯವಾಗಲಿದೆ.

ಇವೆಲ್ಲಾ ಒಂದು ರೀತಿಯ ಗೊಂದಲ ಉಂಟಾದಂತೆ ಆಗುತ್ತದೆ. ಆದ್ದರಿಂದ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಬೇಕೆಂದು ಒತ್ತಾಯಿಸಿದರು. ವಿವಿಧ ಜಿಲ್ಲೆಗಳ ಖಾಸಗಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷರು ಇದ್ದರು.

ಟಾಪ್ ನ್ಯೂಸ್

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಚಿವ ಅನ್ನೋದೆ ನಿಮಗೆ ಇನ್ನೂ ಗೊತ್ತಿಲ್ಲ ಅನಿಸುತ್ತಿದೆ: ಜಿ. ಪರಮೇಶ್ವರ್‌

ನಾನು ಸಚಿವ ಅನ್ನೋದೆ ನಿಮಗೆ ಇನ್ನೂ ಗೊತ್ತಿಲ್ಲ ಅನಿಸುತ್ತಿದೆ: ಜಿ. ಪರಮೇಶ್ವರ್‌

1-sadasd

Tumakuru ಕ್ಷೇತ್ರ ಅಭಿವೃದ್ಧಿ ಪಡಿಸುವುದೇ ನನ್ನ ಗುರಿ: ಕೇಂದ್ರ ಸಚಿವ ವಿ.ಸೋಮಣ್ಣ

5-

ಕೇಂದ್ರ ಮಂತ್ರಿಯಾಗಿ ಕ್ಷೇತ್ರಕ್ಕೆ ಬಂದ ಮೊದಲ ದಿನವೇ ಸೋಮಣ್ಣ ಡಿಸಿ, ಅಧಿಕಾರಿಗಳಿಗೆ ತರಾಟೆ

1-aaa

Kunigal; ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಕೊಲೆ: ಐವರ ಬಂಧನ

2-tumkur

Tumkur: ಕಲುಷಿತ ನೀರು ಕುಡಿದು ಮತ್ತಿಬ್ಬರು ಸಾವು; ಮೃತರ ಸಂಖ್ಯೆ ಮೂರಕ್ಕೆ ಏರಿಕೆ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.