ಅಧಿಕಾರಿಗಳು ಬರ ಸ್ಥಿತಿ ಅರಿತು ಕೆಲಸ ಮಾಡಿ


Team Udayavani, May 11, 2019, 12:25 PM IST

t-3

ತುಮಕೂರು: ಅಧಿಕಾರಿಗಳು ಬರಗಾಲದ ಈ ಪರಿಸ್ಥಿತಿಯನ್ನು ಅರಿತು ಕೆಲಸ ಮಾಡಬೇಕು. ಸುಳ್ಳು ಅಂಕಿ-ಅಂಶಗಳನ್ನು ನೀಡಿದರೆ ಸಹಿಸುವುದಿಲ್ಲ. ಜಿಲ್ಲೆ ಯಲ್ಲಿರುವ ಜಾನುವಾರುಗಳ ಅಂಕಿ-ಅಂಶಗಳನ್ನು ನೀಡುವಲ್ಲಿ ಲೋಪ ಮಾಡಿರುವ ಪಶುಸಂಗೋ ಪನೆಯ ಉಪ ನಿರ್ದೇಶಕರಿಗೆ ನೋಟಿಸ್‌ ನೀಡಿ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಪ್ರಗತಿ ಪರಿಶೀಲನೆ ವೇಳೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಎಲ್. ಪ್ರಕಾಶ್‌ ಜಿಲ್ಲೆಯಲ್ಲಿ 7,08,185 ಜಾನುವಾರುಗಳು ಇವೆ ಎಂದು ಮಾಹಿತಿ ನೀಡುತ್ತಾಲೇ, ಸಿಡಿಮಿಡಿಗೊಂಡ ಡಿಸಿಎಂ ಡಾ.ಪರಮೇಶ್ವರ್‌, ಕಳೆದ ಸಭೆಯಲ್ಲಿ 7,28,185 ಜಾನುವಾರುಗಳು ಇವೆ ಎಂದು ಅಂಕಿ-ಅಂಶ ಕೊಟ್ಟಿದ್ದೀರಿ. ಈಗ ಈ ರೀತಿ ಅಂಕಿ-ಅಂಶಗಳನ್ನು ನೀಡಿದ್ದೀರಿ ಉಳಿದ 14,000 ಜಾನುವಾರುಗಳು ಎಲ್ಲಿ ಹೋಗಿವೆ ತಿಳಿಸಿ ಎಂದು ಪ್ರಶ್ನಿಸಿದರು.

ಅದಕ್ಕೆ ಉತ್ತರಿಸಿದ ಅಧಿಕಾರಿ, ಪ್ರಿಟಿಂಗ್‌ ಸಮಸ್ಯೆ ಯಿಂದ ಅ ರೀತಿಯಾಗಿದೆ. ಜಿಲ್ಲೆಯಲ್ಲಿ 7,08185 ಜಾನುವಾರುಗಳು ಮಾತ್ರ ಇವೆ ಎಂದು ಉತ್ತರಿ ಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಸಭೆಗೆ ಬರುವಾಗ ಅಂಕಿ-ಅಂಶಗಳನ್ನು ಸರಿಯಾಗಿ ತನ್ನಿ. ನಾನು ಕಳೆದ ಸಭೆಯಲ್ಲಿ ಆದ ಅಂಕಿ-ಅಂಶಗಳನ್ನು ಇಟ್ಟಿರುತ್ತೇನೆ. ಅಂಕಿ-ಅಂಶಗಳು ವ್ಯತ್ಯಾಸವಾಗಬಾರದು ಎಂದು ಹೇಳುತ್ತಾ ಸಭೆಯಲ್ಲಿ ಸರಿಯಾಗಿ ಮಾಹಿತಿ ನೀಡದ ಇವರಿಗೆ ನೋಟಿಸ್‌ ನೀಡಿ ಎಂದು ಸೂಚಿಸಿದರು.

ಪ್ರತಿನಿತ್ಯ ನೀರು ಪೂರೈಕೆ ಮಾಡಿ: ಜಿಲ್ಲೆ ತೀವ್ರ ಬರದಿಂದ ತತ್ತರಿಸಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನರೇಗಾ ಯೋಜನೆಯಡಿ ದುಡಿಯಲು ಕೆಲಸ ಒದಗಿಸಲು ತುರ್ತು ಕ್ರಮ ಕೈಕೊಳ್ಳಬೇಕು. ಜಿಲ್ಲೆಯಲ್ಲಿ ಡೀಸಿ ಹಾಗೂ ಜಿಪಂ ಸಿಇಒ ಸಮಪರ್ಕವಾಗಿ ಬರನಿರ್ವಹಣೆ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಇರುವ ಕಡೆ, ಹೊಸದಾಗಿ ಬೋರ್‌ವೆಲ್ ಕೊರೆಯಲಾಗಿದೆ. ವಿದ್ಯುತ್‌ ಸಂಪರ್ಕ ಕಲ್ಪಿಸಿ, ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯ 74 ಗ್ರಾಪಂಗಳ 122 ಗ್ರಾಮಗಳಿಗೆ 455 ಟ್ರಿಪ್‌ಗ್ಳಲ್ಲಿ ಕುಡಿಯುವ ನೀರನ್ನು ಟ್ಯಾಂಕರ್‌ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 182 ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿದ್ದು, ಪ್ರತಿ ಕೊಳವೆಬಾವಿಗೆ ಮಾಸಿಕ 16 ಸಾವಿರ ರೂ.ಗಳಿಂದ 18 ಸಾವಿರ ರೂ.ಗಳವರೆಗೆ ಬಾಡಿಗೆ ಹಣ ಪಾವತಿಸಿ ನೀರು ಪಡೆಯಲಾಗುತ್ತಿದೆ. ಒಟ್ಟಾರೆ ಜಿಲ್ಲೆಯಲ್ಲಿ ಪ್ರತಿ ವ್ಯಕ್ತಿಗೆ 40 ಲೀಟರ್‌ನಂತೆ ಪ್ರತಿನಿತ್ಯ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದರು.

ಕುಡಿಯುವ ನೀರಿಗೆ ಆದ್ಯತೆ ನೀಡಿ: ಜಿಲ್ಲೆಯಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಆರ್‌ಓ ಪ್ಲಾಂಟ್‌ಗಳ ಕಾರ್ಯನಿರ್ವಹಣೆಯ ಬಗ್ಗೆ ಪ್ರತಿನಿತ್ಯ ಎಂಜಿನಿಯರ್‌ಗಳು ಪರಿಶೀಲನೆ ನಡೆಸ ಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಿಲ್ಲೆ ಯಲ್ಲಿರುವ ಎಲ್ಲಾ ಆರ್‌ಒ ಪ್ಲಾಂಟ್‌ಗಳನ್ನು ಸುಸ್ಥಿತಿ ಯಲ್ಲಿಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ಮಾಡಿದರು.

ಜಿಲ್ಲೆಯಲ್ಲಿ 21 ಮೇವು ಬ್ಯಾಂಕ್‌ ಸ್ಥಾಪನೆ: ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ಪ್ರಕಾಶ್‌ ಮಾಹಿತಿ ನೀಡಿ, ಜಿಲ್ಲೆಯಲ್ಲಿ 7,08,175 ದನ ಮತ್ತು ಎಮ್ಮೆಗಳಿದ್ದು, ರೈತರ ದಾಸ್ತಾನಿ ನಲ್ಲಿ 2,64,519 ಟನ್‌ ಒಣಮೇವು ಲಭ್ಯವಿದೆ. ಲಭ್ಯವಿರುವ ಮೇವು ಇನ್ನೂ 11 ವಾರಗಳಿಗೆ ಸಾಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಬರ ಪೀಡಿತ ಜಿಲ್ಲೆಯೆಂದು ಘೋಷಣೆಯಾಗುವ ಮುನ್ನವೇ ರೈತರಿಗೆ ಮೇವಿನ ಕಿರು-ಪೊಟ್ಟಣಗಳನ್ನು ವಿತರಿಸಲಾಗಿತ್ತು. ಇದರಿಂದ 7,35,237 ಟನ್‌ಗಳಷ್ಟು ಹಸಿರು ಮೇವು ಉತ್ಪಾದನೆಯಾಗಿದೆ. ಪ್ರತಿ ವಾರ ಜಿಲ್ಲೆಯಲ್ಲಿ ಮೇವು ಲಭ್ಯತೆಯ ಬಗ್ಗೆ ಅಂದಾಜಿಸಿ, ಸರ್ಕಾರಕ್ಕೆ ಹಾಗೂ ಡೀಸಿಗೆ ವರದಿ ಸಲ್ಲಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 21 ಮೇವು ಬ್ಯಾಂಕ್‌ಗಳನ್ನು ಪ್ರಾರಂಭಿಸಿ ಮೇವನ್ನು ವಿತರಿಸಲಾಗುತ್ತಿದೆ ಎಂದರು.

ಯಾವುದೇ ಅನುಮತಿಗೆ ಕಾಯದಿರಿ: ಈ ವೇಳೆ ಅಧಿಕಾರಿಗಳಿಗೆ ಎಚ್ಚರಿಸಿದ ಡಿಸಿಎಂ, ಜಿಲ್ಲೆಯಲ್ಲಿರುವ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ಕುಡಿಯುವ ನೀರಿಗೆ ಸಮಸ್ಯೆ ಉಂಟಾದರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ನೀರು ಪೂರೈಸಬೇಕು. ಯಾವುದೇ ಅನುಮತಿಗಾಗಿ ಕಾಯಬಾರದು. ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡೀಸಿ ಹಾಗೂ ಜಿಪಂ ಸಿಇಒಗೆ ಸೂಚನೆ ನೀಡಿದರು.

ಸಭೆಯಲ್ಲಿ ಡೀಸಿ ಡಾ.ಕೆ.ರಾಕೇಶ್‌ ಕುಮಾರ್‌, ಜಿಪಂ ಸಿಇಒ ಶುಭಾ ಕಲ್ಯಾಣ್‌, ಪಾಲಿಕೆ ಆಯುಕ್ತ ಟಿ. ಭೂಬಾಲನ್‌ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಚಿವ ಅನ್ನೋದೆ ನಿಮಗೆ ಇನ್ನೂ ಗೊತ್ತಿಲ್ಲ ಅನಿಸುತ್ತಿದೆ: ಜಿ. ಪರಮೇಶ್ವರ್‌

ನಾನು ಸಚಿವ ಅನ್ನೋದೆ ನಿಮಗೆ ಇನ್ನೂ ಗೊತ್ತಿಲ್ಲ ಅನಿಸುತ್ತಿದೆ: ಜಿ. ಪರಮೇಶ್ವರ್‌

1-sadasd

Tumakuru ಕ್ಷೇತ್ರ ಅಭಿವೃದ್ಧಿ ಪಡಿಸುವುದೇ ನನ್ನ ಗುರಿ: ಕೇಂದ್ರ ಸಚಿವ ವಿ.ಸೋಮಣ್ಣ

5-

ಕೇಂದ್ರ ಮಂತ್ರಿಯಾಗಿ ಕ್ಷೇತ್ರಕ್ಕೆ ಬಂದ ಮೊದಲ ದಿನವೇ ಸೋಮಣ್ಣ ಡಿಸಿ, ಅಧಿಕಾರಿಗಳಿಗೆ ತರಾಟೆ

1-aaa

Kunigal; ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಕೊಲೆ: ಐವರ ಬಂಧನ

2-tumkur

Tumkur: ಕಲುಷಿತ ನೀರು ಕುಡಿದು ಮತ್ತಿಬ್ಬರು ಸಾವು; ಮೃತರ ಸಂಖ್ಯೆ ಮೂರಕ್ಕೆ ಏರಿಕೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.