ಮಲ್ಲೇಶಪುರ ಕೆರೆಗೆ ಫ್ಯಾಕ್ಟರಿ ಕಲುಷಿತ ನೀರು

Team Udayavani, Oct 27, 2019, 3:59 PM IST

tk-tdy-2

ಕೊರಟಗೆರೆ: ರಾಜಕಾಲುವೆ ಒತ್ತುವರಿ ಭೂಮಿಯಲ್ಲಿ ಅನಧಿಕೃತವಾಗಿ ಪುಡ್‌ ಪ್ರಾಡೆಕ್ಟ್ ಫ್ಯಾಕ್ಟರಿ ನಿರ್ಮಿಸ ಲಾಗಿದ್ದು, ಅಲ್ಲದೇ ಫ್ಯಾಕ್ಟರಿಯ ಕಲುಷಿತ ನೀರು ಶೇಖರಣೆಗೆ ಬೃಹತ್‌ ಕಟ್ಟೆ ನಿರ್ಮಿಸಲಾಗಿದೆ. ಇಲ್ಲಿಂದ ಕಲುಷಿತ ನೀರು ರಾಜಕಾಲುವೆ ಮೂಲಕ ಮಲ್ಲೇಶಪುರ ಕೆರೆಗೆ ಹರಿಯುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.

ಮಲ್ಲೇಶಪುರ ಕೆರೆ ನೀರಿನ ಮೂಲವಾದ ನವೀಲುಕುರಿಕೆ ಬೆಟ್ಟದಿಂದ ಬರುವ ಮಳೆ ನೀರಿನ ರಾಜಕಾಲುವೆ ಒತ್ತುವರಿ ಮಾಡಿಕೊಂಡ ಫ್ಯಾಕ್ಟರಿ ಮಾಲೀಕರು ಸುತ್ತಲೂ ಕಾಂಪೌಂಡು ನಿರ್ಮಾಣ ಮಾಡಿದ್ದಾರೆ. ಕಟ್ಟೆಯೊಳಗಿನ ಕಲುಷಿತ ನೀರಿನ ಜೊತೆ ವಿಷಕಾರಿ ಅನಿಲ ರಾಜಕಾಲುವೆ ಮೂಲಕ ಮಲ್ಲೇಶಪುರ ಕೆರೆಗೆ ಸೇರುತ್ತಿದ್ದು, ಸುತ್ತಮುತ್ತಲಿನ ಪರಿಸರ ದುರ್ವಾ ಸನೆಯಿಂದ ಕೂಡಿದೆ. ಕಸಬಾ ಹೋಬಳಿ ಹಂಚಿಹಳ್ಳಿಯ ಜಿ.ನಾಗೇ ಹಳ್ಳಿ ಸಮೀಪ ಕಳೆದ 2003-04ರಲ್ಲಿ ಬೆಂಗಳೂರಿನ ಮಧುಸೂದನ್‌ ಎಂಬುವರಿಗೆ ನ್ಯಾಚುರಲ್‌ ಫ‌ುಡ್‌ ಕಾರ್ಖಾನೆ ಪ್ರಾರಂಭಿಸಲು ಮೈಸೂರಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು ಷರತ್ತು ಬದ್ಧ ಅನುಮತಿ ನೀಡಿದ್ದಾರೆ. 2003ರಿಂದ 2012ರ ವರೆಗೆ ಕಾರ್ಖಾನೆ ಪರವಾನಗಿ ನವೀಕರಣ ನಡೆದಿದೆ. ಅ ನಂತರ ನವೀಕರಣ ಮಾಡಿರುವ ದಾಖಲೆ ಗ್ರಾಪಂ ಬಳಿ ಲಭ್ಯವಿಲ್ಲ.

ಕಾರ್ಮಿಕರಿಗಿಲ್ಲ ಸುರಕ್ಷತೆ: ರೈತರು ಬೆಳೆಯುವ ಸೌತೆಕಾಯಿಯಿಂದ ವಿವಿಧ ಬಗೆಯ ಆಹಾರ ಉತ್ಪನ್ನ ತಯಾರಿಸಲು ಕಾರ್ಖಾನೆಯಲ್ಲಿ ಕೆಲಸ ಮಾಡುವ ನೂರಾರು ಕಾರ್ಮಿಕರಿಗೆ ಭದ್ರತೆಯಿಲ್ಲ. ಆ್ಯಸಿಡ್‌, ಕೆಮಿಕಲ್‌ ಮತ್ತು ಕಲ್ಮಶ ಬರಿಗೈಯಲ್ಲಿ ಮುಟ್ಟಿ ಕೆಲಸ ಮಾಡಬೇಕಾಗಿದೆ. ದುರ್ವಾಸನೆ ಬೀರುವ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕನಿಷ್ಠ ಪ್ರಥಮ ಚಿಕಿತ್ಸಾ ವ್ಯವಸ್ಥೆ ಜೊತೆಗೆ ಭದ್ರತೆಯೂ ಮರೀಚಿಕೆಯಾಗಿದೆ.

ನೊಟೀಸ್‌ಗೆ ಕ್ಯಾರೆ ಎನ್ನದ ಮಾಲೀಕ: ಮಲ್ಲೇಶಪುರ ಕೆರೆಗೆ ಫ್ಯಾಕ್ಟರಿ ನೀರು ಬೀಡದಂತೆ ಹಂಚಿಹಳ್ಳಿ ಗ್ರಾಪಂ ಪಿಡಿಒ ಮತ್ತು ಕೊರಟಗೆರೆ ತಹಶೀಲ್ದಾರ್‌ ಮಾಲೀಕರಿಗೆ ನೊಟೀಸ್‌ ನೀಡಿದ್ದಾರೆ. ನೊಟೀಸ್‌ಗೆ ಕಾರ್ಖಾನೆ ಮಾಲೀಕ ಕವಡೆ ಕಾಸಿನ ಕಿಮ್ಮತ್ತೂ ನೀಡಿಲ್ಲ. ಆರೋಗ್ಯ, ಕಂದಾಯ ಮತ್ತು ಕಾರ್ಮಿಕ ಇಲಾಖೆಗೂ ಕಾರ್ಖಾನೆಗೂ ಯಾವುದೇ ಸಂಬಂಧ ವಿಲ್ಲವಂತೆ. ಇನ್ನೂ ಜಿಲ್ಲಾಡಳಿತ, ಪರಿಸರ ಮತ್ತು ಯೋಜನಾ ಇಲಾಖೆಗೆ ಕಾರ್ಖಾನೆ ಮಾಹಿತಿಯೇ ಇಲ್ಲದಂತಿದೆ.

ಭೂ ಪರಿವರ್ತನಾ ಜಮೀನಿನಲ್ಲಿ ಸ್ಥಾಪಿಸಲಾಗಿರುವ ಕಾರ್ಖಾನೆಯಿಂದ ಹೊರಬರುವ ಹೊಗೆ, ಅನಿಲ ಮತ್ತು ಕಲ್ಮಶ ಪರಿಣಾಮಕಾರಿ ಆಗಿ ತಡೆಗಟ್ಟಿ ಸಾರ್ವಜನಿಕರ ಆರೋಗ್ಯಕ್ಕೆ ಹಾನಿ ಮತ್ತು ಪರಿಸರ ಮಾಲಿನ್ಯ ಆಗದಂತೆ ತುರ್ತು ಕ್ರಮ ಕೈಗೊಳ್ಳದಿರುವ ಬಗ್ಗೆ ಕರ್ನಾಟಕ ಮಾಲಿನ್ಯ  ನಿಯಂತ್ರಣ ಮಂಡಳಿ, ಜಿಲ್ಲಾಡಳಿತ ಮತ್ತು ಪರಿಸರ ಇಲಾಖೆಗಳು ತಕ್ಷಣ ಕಾರ್ಖಾನೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ

ಪದ್ಮನಾಭ್‌ ಎನ್‌.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.