ತುಮಕೂರಿನಲ್ಲಿ ಭೀಕರ ಅಪಘಾತ: ಮೂವರು ಯುವಕರ ದುರ್ಮರಣ
Team Udayavani, Mar 4, 2018, 5:22 PM IST
ತುಮಕೂರು: ಇಲ್ಲಿನ ಕ್ಯಾತ್ಸಂದ್ರ ಬಳಿಯ ಬೆಳಗುಂಬದಲ್ಲಿ ಖಾಸಗಿ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಭೀಕರ ಅವಘಡ ಭಾನುವಾರ ನಡೆದಿದೆ.
ವರದಿಯಾದಂತೆ ದೇವರಾಯನದುರ್ಗದಿಂದ ಬರುತ್ತಿದ್ದ ಆಟೋಗೆ ಬಸ್ ಹಿಂಬದಿಯಿಂದ ಢಿಕ್ಕಿ ಯಾಗಿ ಅವಘಡ ಸಂಭವಿಸಿದ್ದು , ಏಕಾಏಕಿ ಆಟೋ ಬ್ರೇಕ್ ಹಾಕಿದ್ದರಿಂದ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ಮೃತರು ತುಮಕೂರಿನ ಸದಾಶಿವ ನಗರದ ನಿವಾಸಿಗಳೆಂದು ತಿಳಿದು ಬಂದಿದ್ದು,
ಮಾರುತಿ(16) ನಾಗೇಶ್ (20) ಮತ್ತು ಫಹಾದತ್ ಖಾನ್(30) ಎಂದು ತಿಳಿದು ಬಂದಿದೆ. ಗಾಯಾಳು ವಸಂತ್ ಸ್ಥಿತಿ ಚಿಂತಾಜನಕವಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್