ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ


Team Udayavani, May 27, 2020, 8:00 AM IST

sonk-uttamma

ತುಮಕೂರು: ಜಿಲ್ಲೆಯಲ್ಲಿ ಕೋವಿಡ್‌ 19ರ ಸೋಂಕಿನಿಂದ ಮರಣ ಉಂಟಾಗದಂತೆ ಎಚ್ಚರ ವಹಿಸಿ ಉತ್ತಮವಾಗಿ ಚಿಕಿತ್ಸೆ ನೀಡಲು ಕ್ರಮ ವಹಿಸುವಂತೆ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚನೆ  ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂ ಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇಲ್ಲಿಯವರೆಗೂ ಮೂರು ಮಂದಿ ಕೋವಿಡ್‌ -19 ಸೋಂಕಿನಿಂದ ಮೃತಪಟ್ಟಿದ್ದಾರೆ. ಈ  ಪೈಕಿ ನೆಲಮಂಗಲ ತಾಲೂಕಿನ ಪಿ-1686 55 ವರ್ಷದ ಮಹಿಳೆ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿರುವುದು ಭಾನುವಾರ ವರದಿ ಯಾಗಿದೆ ಎಂದರು.

ಕಟ್ಟು ನಿಟ್ಟಿನ ಕ್ರಮಕೈಗೊಳ್ಳಿ: ಜಿಲ್ಲೆಯಲ್ಲಿ ಕೋವಿಡ್‌-19ರ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ ಸಚಿವರು, ಕೊರೊನಾ ಸೋಂಕಿತರಿಗೆ ಉತ್ತಮವಾದ ಚಿಕಿತ್ಸೆಯನ್ನು ನೀಡಿ ಸಾವು  ಪ್ರಕರಣಗಳು ಸಂಭವಿಸದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.

ಮಾಹಿತಿ ಪಡೆದ ಸಚಿವರು: ಹೇಮಾವತಿ ಹಾಗೂ ಎತ್ತಿನ ಹೊಳೆ ಯೋಜನೆಯ ಅನುಷ್ಠಾನ ಕಾಮಗಾರಿಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ ಜಿಲ್ಲಾಧಿಕಾರಿ  ಡಾ.ಕೆ.ರಾಕೇಶ್‌ ಕುಮಾರ್‌, ಜಿಲ್ಲಾ ಪಂಚಾಯತ್‌ ಸಿಇಒ ಶುಭಾ ಕಲ್ಯಾಣ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಕೆ. ವಂಸಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪ ವಿಭಾಗಾಧಿಕಾರಿ ಅಜಯ್‌ ಸೇರಿದಂತೆ ವಿವಿಧ ಇಲಾಖೆಯ  ಅಧಿಕಾರಿಗಳು ಇದ್ದರು.

19 ಸೋಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ: ಜಿಲ್ಲೆಯಲ್ಲಿ ಈವರೆಗೂ 27 ಕೋವಿಡ್‌-19 ಸೋಂಕು ಪ್ರಕರಣ ಗಳು ವರದಿಯಾಗಿದ್ದು, ಈ ಪೈಕಿ 3 ಮೃತಪಟ್ಟಿದ್ದಾರೆ ಹಾಗೂ ಐವರು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ  ಮಾಡಲಾಗಿದೆ. ಗುಣಮುಖರಾದ ಹಾಗೂ ಮೃತಪಟ್ಟವರನ್ನು ಹೊರತುಪಡಿಸಿ ಉಳಿದ 20 ಸೋಂಕಿತ ಪ್ರಕರಣಗಳ ಪೈಕಿ 19 ಮಂದಿ ಸೋಂಕಿತರಿಗೆ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇವರೆಲ್ಲರೂ ಆರೋಗ್ಯಕರವಾಗಿದ್ದು, ಯಾವುದೇ  ತೊಂದರೆ ಇರುವುದಿಲ್ಲ. ಮತ್ತೋರ್ವ ಸೋಂಕಿತ ಮಹಿಳೆ ಗರ್ಭಿಣಿ ಯಾಗಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಗರ್ಭಿಣಿ ಮಹಿಳೆಗೆ ಹೆರಿಗೆಯಾಗಿದ್ದು, ತಾಯಿ  ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ ಕುಮಾರ್‌ ಸಚಿವರಿಗೆ ಮಾಹಿತಿ ನೀಡಿದರು.

ಕಾಮಗಾರಿಗಳು ಚುರುಕಾಗಲಿ: ಹೇಮಾವತಿ ಹಾಗೂ ಎತ್ತಿನ ಹೊಳೆ ಯೋಜನೆಯ ಕಾಮಗಾರಿಗಳು ನಮ್ಮ ನಿರೀಕ್ಷಿತ ಮಟ್ಟಕ್ಕೆ ನಡೆಯುತ್ತಿಲ್ಲ. ಈ ಅನುಷ್ಠಾನ ಕಾಮಗಾರಿಗಳು ಚುರುಕಾಗ ಬೇಕು, ಕಾಮಗಾರಿಯನ್ನು ಕಾಲಮಿತಿ ಯೊಳಗೆ  ಮುಗಿಸಲು ಅಧಿಕಾರಿಗಳು ಕ್ರಮವಹಿಸಬೇಕು. ಯೋಜನೆ ಅನು ಷ್ಠಾನಕ್ಕೆ ಅಗತ್ಯವಿರುವ ಭೂಮಿಯನ್ನು ಸ್ವಾಧೀನ ಪಡಿಸಿ ಕೊಳ್ಳಲು ಮುಂದಾಗಿ ಯೋಜನೆಯನ್ನು ಚುರುಕುಗೊಳಿಸಲು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಹೊರ ರಾಜ್ಯದಿಂದ ಜಿಲ್ಲೆಗೆ ಬಂದವರ ಬಗ್ಗೆ ತೀವ್ರ ನಿಗಾ ವಹಿಸಬೇಕು. ಚೆಕ್‌ಪೋಸ್ಟ್‌ನಲ್ಲಿ ಬರುವುದು ಬಿಟ್ಟು ಅನ್ಯಮಾರ್ಗಗಳ ಮೂಲಕ ಗ್ರಾಮಗಳಿಗೆ ಬಂದು ಸೇರುವವರ ಬಗ್ಗೆ ನಾಗರಿಕರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡ ಬೇಕು.  ಕೋವಿಡ್‌ -19 ಆಸ್ಪತ್ರೆ ಯಲ್ಲಿ ಕೊರೊನಾದಿಂದ ಚಿಕಿತ್ಸೆಗೆ ದಾಖಲಾಗಿರುವವರಿಗೆ ಉತ್ತಮ ಚಿಕಿತ್ಸೆ ದೊರೆಯುವಂತ್ತಾಗಬೇಕು.
-ಜೆ.ಸಿ.ಮಾಧುಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

12-pavagada

Pavagada: ರಸ್ತೆ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

1-qweqewq

Koratagere;ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

9-pavagada

Pavagada: ಪತ್ನಿಯನ್ನು ಹತ್ಯೆ ಮಾಡಿ ಪತಿ ಪರಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.