ಸಿದ್ಧಗಂಗೆಯಲ್ಲಿ ಭಾರೀ ದನಗಳ ಜಾತ್ರೆ 


Team Udayavani, Feb 25, 2019, 7:29 AM IST

sidda-dana.jpg

ಇಂದು ವಿದೇಶಿ ರಾಸುಗಳ ಭರಾಟೆಯಲ್ಲಿ ದೇಶೀಯ ತಳಿಗಳು ಕಣ್ಮರೆಯಾಗುತ್ತಿವೆ. ನಮ್ಮ ದೇಶೀಯ ತಳಿಗಳನ್ನು ಉಳಿಸಬೇಕು ಅವುಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಬೇಕು ಎನ್ನುವ ಚರ್ಚೆಗಳು ನಡೆಯುತ್ತಿದೆ. ಈ ಆಲೋಚನೆಯಲ್ಲಿಯೇ ಅನಾದಿಕಾಲದಿಂದಲೂ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ಪ್ರತಿವರ್ಷ ಎತ್ತುಗಳ ಪರಿಷೆ ಗಮನ ಸೆಳೆಯುತ್ತಿದೆ. ಜಾತ್ರೆಗೆ ಮೊದಲೇ ರಾಜ್ಯದ ಹಾಗೂ ಹೊರ ರಾಜ್ಯಗಳಿಂದ ಅಪಾರ ಸಂಖ್ಯೆಯಲ್ಲಿ ರೈತರು ತಮ್ಮ ಜಾನುವಾರುಗಳ ಸಮೇತವಾಗಿ ಮಠಕ್ಕೆ ಬಂದು ತಮ್ಮ ರಾಸುಗಳ ಮಾರಾಟ ಹಾಗೂ ಪ್ರದರ್ಶನದಲ್ಲಿ ತೊಡಗುತ್ತಾರೆ. ಬಹುಮಾನವನ್ನೂ ಪಡೆಯುತ್ತಾರೆ.

ತುಮಕೂರು: ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾದ ಮೇಲೆ ಮೊದಲ ಬಾರಿಗೆ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಮಹಾ ಶಿವರಾತ್ರಿಯ ಜಾತ್ರಾ ಸಂಭ್ರಮ ಮೇಳೈಸಿದೆ. ಪ್ರತಿ ವರ್ಷದಂತೆ ರಾಜ್ಯ ಮಟ್ಟದ ಭಾರೀ ಜಾನುವಾರು ಜಾತ್ರೆಗೆ ಸಾವಿರಾರು ಜಾನುವಾರುಗಳು ಆಗಮಿಸಿದ್ದು, ಪ್ರದರ್ಶನ, ವ್ಯಾಪರದಲ್ಲಿ ತೊಡಗಿದ್ದಾರೆ.

ಮಠದ ಸುತ್ತ ಎಲ್ಲಿಂದ ಎಲ್ಲಿಯವರೆಗೆ ನೋಡಿದರೂ ಹಸು, ಎತ್ತುಗಳ ನಡುವೆ ರೈತರು ಸಡಗರದಲ್ಲಿದ್ದು, ಜಾತ್ರೆಯವರೆಗೆ ಸ್ಥಳದಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. 10 ದಿನಗಳ ಕಾಲ ಮಹಾಶಿವರಾತ್ರಿ ಅಂಗವಾಗಿ ನಡೆಯುವ ಶ್ರೀ ಸಿದ್ದಲಿಂಗೇಶ್ವರಸ್ವಾಮಿ ಜಾತ್ರೆಯಲ್ಲಿ ಎತ್ತುಗಳ ಪರಿಷೆ ವಿಶೇಷ.

ರಾಜ್ಯವೂ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳ ರೈತರು ತಮ್ಮ ರಾಸುಗಳನ್ನು ಮಾರುವ ಹಾಗೂ ಕೊಳ್ಳುವ ಪ್ರಕ್ರಿಯೆಯಲ್ಲಿ ತಲ್ಲೀನರಾಗಿದ್ದಾರೆ. ಹತ್ತು ದಿನಗಳ ಕಾಲ ನಡೆಯುವ ಮಹಾ ಶಿವರಾತ್ರಿಯ ಜಾತ್ರೆಯಲ್ಲಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಭಾರಿ ದನಗಳ ಜಾತ್ರೆ ರಾಜ್ಯ ಮತ್ತು ಅಂತರರಾಜ್ಯ ಮಟ್ಟದಲ್ಲಿ ಭಾರಿ ಹೆಸರುಗಳಿಸಿದೆ.

ಹಿನ್ನೆಲೆ: ಶ್ರೀ ಕ್ಷೇತ್ರದಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವನ್ನು 1905 ರಲ್ಲಿ ಶ್ರೀ ಕ್ಷೇತ್ರದ ಶ್ರೀ ಉದ್ಧಾನ ಶಿವಯೋಗಿಗಳು ಪ್ರಾರಂಭ ಮಾಡಿದರು.  ಪ್ರತಿ ವರ್ಷವೂ ಜಾತ್ರೆ ತನ್ನದೇ ಆದ ವೈಶಿಷ್ಟ್ಯ ಪಡೆಯುತ್ತಾ ಬಂದಿದ್ದು, ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಜಾತ್ರೆಯನ್ನು ಅಂತರಾಜ್ಯ ಮಟ್ಟದ ಮಾನ್ಯತೆ ದೊರೆಯುವಂತೆ ಮಾಡಿದರು.

ಶ್ರೀಗಳು ಲಿಂಗೈಕ್ಯರಾಗಿ ನಡೆಯುತ್ತಿರುವ ಮೊದಲ ಜಾತ್ರೆಯನ್ನು ಶ್ರೀಗಳ ಆಶಯದಂತೆ ರೈತರಿಗೆ ಉತ್ತೇಜನ ನೀಡುವ ರೀತಿಯಲ್ಲಿಯೇ ಶ್ರೀ ಸಿದ್ಧಲಿಂಗ ಸ್ವಾಮಿಗಳು ಹಾಗೂ ಆಡಳಿತ ವರ್ಗ ಜಾತ್ರೆಗೆ ಬರುವ ರಾಸುಗಳಿಗೆ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಿದ್ದಾರೆ.

ಇಂದು ವಿದೇಶಿ ರಾಸುಗಳ ಭರಾಟೆಯಲ್ಲಿ ದೇಸೀಯ ತಳಿಗಳು ಕಡಿಮೆಯಾಗುತ್ತಿರುವ ಈ ಸಮಯದಲ್ಲಿ ನಮ್ಮ ದೇಸೀಯ ತಳಿಗಳನ್ನು ಉಳಿಸಬೇಕು. ಅವುಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಬೇಕು ಎನ್ನುವ ಚರ್ಚೆಗಳು ಸಮಾಜದಲ್ಲಿ ನಡೆಯುತ್ತಿರುವಂತೆಯೇ ನಗರ ಸಮೀಪದಲ್ಲಿ ನಡೆಯುತ್ತಿರುವ ಈ ಎತ್ತುಗಳ ಪ್ರದರ್ಶನ ಮತ್ತು ಮಾರಾಟ ಎಲ್ಲರ ಗಮನ ಸೆಳೆಯುತ್ತಿದೆ.

ಎಲ್ಲೆಲ್ಲಿಂದ ರಾಸು ಬರುತ್ತೆ: ಈ ಎತ್ತಿನ ಜಾತ್ರೆಗೆ ನಾಡಿನ ವಿವಿಧ ಜಿಲ್ಲೆಗಳಾದ ರಾಮನಗರ, ಬೆಂಗಳೂರು ಗ್ರಾಮಾಂತರ, ಮದ್ದೂರು, ಮಂಡ್ಯ ಜಿಲ್ಲೆಗಳಲ್ಲದೆ ಅಕ್ಕಪಕ್ಕದ ರಾಜ್ಯಗಳಾದ ಆಂದ್ರ ಪ್ರದೇಶ, ತಮಿಳುನಾಡು ಮೊದಲಾದ ಕಡೆಗಳಿಂದಲೂ ಈ ಎತ್ತಿನ ಜಾತ್ರೆಯಲ್ಲಿ ಜನರು ಬರುವುದು ಈ ಹಿಂದಿನಿಂದಲೂ ರೂಢಿಯಲ್ಲಿದೆ. ಈ ಜಾತ್ರೆಯಲ್ಲಿ ರಾಸುಗಳನ್ನು ಕೊಳ್ಳಲು ಮತ್ತು ಮಾರಲು ಉತ್ತಮ ಅವಕಾಶವಿದ್ದು, ಇದಕ್ಕಾಗಿಯೇ ರೈತರು ತಾವು ಸಾಕಿದ ಜಾನುವಾರುಗಳನ್ನು ಮಾರಲು ಹಾಗೂ ಕೊಳ್ಳಲು ಆಗಮಿಸುತ್ತಾರೆ. 

ಬಹು ದೂರದ ಊರುಗಳಾದ ಆಂದ್ರ ಗಡಿ ಭಾಗದ ಅಗಳಿ, ಗುಡಿಬಂಡೆ, ರಾಜ್ಯದ ದಾವಣಗೆರೆ, ಚಿತ್ರದುರ್ಗ, ಗದಗ, ಹರಿಹರ, ಬಿಜಾಪುರ, ಬಳ್ಳಾರಿ, ರಾಯಚೂರು, ರಾಮನಗರ, ಸೇರಿದಂತೆ ವಿವಿಧ ಜಿಲ್ಲೆಗಳಿಂದ ಅಧಿಕ ಸಂಖ್ಯೆಯಲ್ಲಿ ರೈತರು ತಮ್ಮ ಜಾನುವಾರುಗಳೊಡನೆ ಆಗಮಿಸುವುದರಿಂದ ಇಡೀ ಮಠದ ಸುತ್ತಮುತ್ತ ಜಾನುವಾರುಗಳು ಕಂಡು ಬರುತ್ತಿವೆ.
 
ಜಾನುವಾರುಗಳ ರಕ್ಷಣೆ ವ್ಯವಸ್ಥೆ: ಜಾನುವಾರುಗಳಿಗೆ ನೆರಳು, ಕುಡಿಯುವ ನೀರು, ಆಹಾರ,ಆರೋಗ್ಯ ತಪಾಸಣೆ ಹಾಗೂ ಸಂಜೆಯ ವೇಳೆ ರೈತರಿಗೆ ಮನರಂಜನೆ, ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಜಾತ್ರೆಗೆ ಬರುವ ಎಲ್ಲರಿಗೆ ಪ್ರಸಾದ ವ್ಯವಸ್ಥೆಯನ್ನು ಶ್ರೀಮಠ ಕಲ್ಪಿಸಿದೆ.

ಬೆಳಗ್ಗೆಯಿಂದ ಸಂಜೆಯವರೆಗೂ ಮಠದ ಸುತ್ತ ಇರುವ ಈ ಜಾನುವಾರುಗಳ ಜಾತ್ರೆಯಲ್ಲಿ ಎತ್ತುಗಳನ್ನು ಕೊಳ್ಳುವುದು, ಮಾರುವುದು ಕಂಡು ಬರುತ್ತದೆ. 50 ಸಾವಿರದಿಂದ 10 ಲಕ್ಷ ಬೆಲೆಬಾಳುವ ರಾಸುಗಳು ಇಲ್ಲಿ ಸೇರುವುದೇ ವಿಶೇಷ. ಇದೆಲ್ಲದರ ಜೊತೆಗೆ ಸುರಕ್ಷತೆಯ ದೃಷ್ಠಿಯಿಂದ ಶ್ರೀ ಸಿದ್ಧಗಂಗಾ ಜಾತ್ರೆ ರೈತರಿಗೆ ಹೆಚ್ಚು ಅನುಕೂಲಕರವಾದ ಜಾತ್ರೆಯಾಗಿದೆ.

ಪ್ರತೀ ವರ್ಷ ಬಹುಮಾನ: ಸೀಮೆ ಹಸುಗಳನ್ನು ಸಾಕಲು ಜನ ಮುಂದಾಗಿರುವ ಹಿನ್ನೆಲೆಯಲ್ಲಿ ನಮ್ಮ ನಾಟಿ ಹಸುಗಳು,ಎತ್ತುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಭಾಗದಲ್ಲಿ ಹಳ್ಳಿಕಾರ್‌ ತಳಿ ಬಹು ಅಪರೂಪದ ತಳಿ. ಈ ಸಂತತಿ ಉಳಿಯಬೇಕು, ನಾವು ಪ್ರತೀವರ್ಷ ನಮ್ಮ ತಂದೆ ಕಾಲದಿಂದಲೂ ಸಿದ್ಧಗಂಗಾ ಮಠದ ಜಾತ್ರೆಯಲ್ಲಿ ಎತ್ತುಗಳನ್ನು ಕಟ್ಟುತ್ತೇವೆ.

ಇಲ್ಲಿ ಎತ್ತುಗಳನ್ನು ಮಾರಾಟ ಮಾಡಿ ಬೇರೆ ಎತ್ತುಗಳನ್ನು ಕೊಂಡುಕೊಳ್ಳುತ್ತೇವೆ. ನಾವು ಸಾಕಿದ ಎತ್ತುಗಳಿಗೆ ಪ್ರತೀ ವರ್ಷ ಬಹುಮಾನ ಬಂದಿದೆ. ನಾಲ್ಕು ವರ್ಷದ ಹಿಂದೆ ನಮ್ಮ ಎತ್ತುಗಳಿಗೆ 10 ಗ್ರಾಂ. ಚಿನ್ನವೂ ಬಂದಿತ್ತು. ನಮ್ಮ ರಾಜ್ಯದಲ್ಲೇ ಎತ್ತುಗಳ ದೊಡ್ಡ ಜಾತ್ರೆ. ಇಲ್ಲಿ ಎಲ್ಲ ರೀತಿ ರಕ್ಷಣೆ, ರೈತರಿಗೆ ಸೌಲಭ್ಯವನ್ನು ಸಿದ್ಧಗಂಗಾ ಶ್ರೀಗಳು ಒದಗಿಸಿದ್ದಾರೆ. ರೈತರಿಗೆ ಯಾವುದೇ ಭಯ ಇಲ್ಲಿಲ್ಲ ಎನ್ನುತ್ತಾರೆ ರೈತ ರಾಮಣ್ಣ, ಸಿದ್ದರಾಮಣ್ಣ ಅಗಳಿ. 

ಶ್ರೀಗಳಿಲ್ಲದ ಮೊದಲ ರಾಸು ಜಾತ್ರೆ: ಶ್ರೀಗಳಿಗೆ ಜಾನುವಾರು ಕಂಡರೆ ಬಹಳ ಪ್ರೀತಿ ಇತ್ತು. ರೈತರಿಗೆ ಕೃಷಿ ಬಗ್ಗೆ ಮಾಹಿತಿ ನೀಡಬೇಕು ಎನ್ನುವ ಉದ್ದೇಶದಿಂದ ಕೃಷಿ ವಸ್ತು ಪ್ರದರ್ಶನವನ್ನು ಮಾಡಿದ್ದರು. ಎತ್ತುಗಳನ್ನು ಸಾಕಲು ಹೆಚ್ಚು ಪ್ರೋತ್ಸಾಹ ಮಾಡುತ್ತಿದ್ದರು.

ಅದನ್ನು ಈಗ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಮುಂದುವರಿಸುತ್ತಿದ್ದಾರೆ. ಶ್ರೀಗಳಿಲ್ಲದ ಮೊದಲ ಜಾತ್ರೆ ಇದಾಗಿದೆ. ಈ ವರ್ಷದ ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ರಾಸುಗಳು ಬಂದಿವೆ. 9 ಲಕ್ಷ ಮೇಲ್ಪಟ್ಟ ಬೆಲೆಬಾಳುವ ರಾಸುಗಳು ಈಗಾಗಲೇ ಬಂದಿವೆ. ಕಳೆದ ಮೂರು ದಿನಗಳಿಂದ ಹಲವು ರಾಸುಗಳು ಬರುತ್ತಿವೆ ಎಂದು ಸಿದ್ಧಗಂಗಾ ಮಠದ  ರೇಣುಕಾರಾಧ್ಯ ತಿಳಿಸಿದರು.

* ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.