ದಯಾಮರಣಕ್ಕೆ ಮನವಿ ಸಲ್ಲಿಸಲು ಅತಿಥಿ ಉಪನ್ಯಾಸಕರ ನಿರ್ಧಾರ


Team Udayavani, Jan 18, 2022, 2:23 PM IST

Untitled-1

ತುಮಕೂರು: ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದ ವೇತನ ಹೆಚ್ಚಿಸುವ ನೆಪದಲ್ಲಿ ಅರ್ಧದಷ್ಟು ಶಿಕ್ಷಕರಿಗೆ ಕೆಲಸವಿಲ್ಲದಂತೆ ಮಾಡಿ,ಸರ್ಕಾರ ಇದುವರೆಗೂ ಕೆಲಸ ಮಾಡಿದ ಅತಿಥಿ ಉಪನ್ಯಾಸಕ ರನ್ನು ಸಾವಿನ ದವಡೆಗೆ ತಳ್ಳಿದೆ.ಅದಕ್ಕಾಗಿ ಎಲ್ಲಾ ಶಿಕ್ಷಕರು ದಯಾಮರಣ ಕೋರಿ ರಾಷ್ಟ್ರಪತಿ ಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ಅತಿಥಿಉಪನ್ಯಾಸಕರ ಸಂಘದ ಮುಂಖಂಡ ಜಿ.ಕೆ.ನಾಗಣ್ಣ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಳೆದ 22 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರನ್ನು ಒಡೆದುಆಳುವ ನೀತಿಯನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದ್ದು, ಸಮಸ್ಯೆ ಪರಿಹಾರದ ನೆಪದಲ್ಲಿಅತಿಥಿ ಉಪನ್ಯಾಸಕರನ್ನು ಮತ್ತಷ್ಟು ಸಂಕಷ್ಟಕ್ಕೆದೂಡಿದೆ. ಇದುವರಿಗಿದ್ದ 8 ಗಂಟೆಗಳ ಕಾರ್ಯಾಭಾರವನ್ನು 15 ಗಂಟೆಗಳಿಗೆ ಹೆಚ್ಚಿಸುವಮೂಲಕ ಸುಮಾರು 7500 ಸಾವಿರ ಅತಿಥಿಉಪನ್ಯಾಸಕಗೆ ಕೆಲಸವಿಲ್ಲದಂತೆ ಮಾಡಿದ್ದಾರೆ. ಇದುರಾಜ್ಯ ಸರ್ಕಾರದ ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದರು.

ಆನ್‌ಲೈನ್‌ ಮೂಲಕ ಆಯ್ಕೆ ಪ್ರಕ್ರಿಯೆ ಕೈಬಿಡಿ: ಸಚಿವ ಅಶ್ವಥನಾರಾಯಣ ಅವರು, ಏಕಾಎಕಿಸುದ್ದಿಗೋಷ್ಠಿ ನಡೆಸಿ ಡಾ.ಕುಮಾರನಾಯ್ಕ ವರದಿಆಧರಿಸಿ, ಅತಿಥಿ ಉಪನ್ಯಾಸಕರ ವೇತನವನ್ನು ಈಗನೀಡುತ್ತಿರುವುದಕ್ಕಿಂತ ಮೂರು ಪಟ್ಟು ಹೆಚ್ಚಿಸಲಾಗಿದೆ. ಕಾರ್ಯಾಗಾರವನ್ನು 8 ಗಂಟೆಯಿಂದ 15ಗಂಟೆಗಳಿಗೆ ನಿಗದಿಗೊಳಿಸಿರುವುದಾಗಿ ತಿಳಿಸಿದ್ದಾರೆ.

ಸರ್ಕಾರಕ್ಕೆ ಒಂದು ಆಯೋಗ ವರದಿ ಸಲ್ಲಿಸಿದನಂತರ, ಅದು ಅಧಿವೇಶನದಲ್ಲಿ ಚರ್ಚೆಯಾಗಬೇಕು. ಸಂಬಂಧಪಟ್ಟವರ ಜೊತೆ ಸಾಧಕ,ಬಾಧಕಗಳ ಕುರಿತು ಚರ್ಚೆ ನಡೆಸಬೇಕು. ಆದರೆ, ಇದ್ಯಾವುದನ್ನು ಮಾಡದೆ ಏಕಾಎಕಿ ಹೇಳಿಕೆನೀಡಿರುವುದರ ಹಿಂದೆ 7500 ಜನ ಅತಿಥಿಉಪನ್ಯಾಸಕರನ್ನು ಮನೆಗೆ ಕಳುಹಿಸುವಹುನ್ನಾರವಿದೆ. ಹೀಗಾಗಿ ಅತಿಥಿ ಉಪನ್ಯಾಸಕರುಸರಕಾರದ ಈ ಪರಿಹಾರವನ್ನು ಒಪ್ಪಲು ಸಾಧ್ಯವಿಲ್ಲ. ವೇತನ ಹೆಚ್ಚಳದ ಜೊತೆಗೆ, ಕಾರ್ಯಾಭಾರವನ್ನು ಈ ಹಿಂದಿನಂತೆಯೇ 8 ಗಂಟೆಗೆ ನಿಗದಿಗೊಳಿಸಬೇಕು ಹಾಗೂ ಹೊಸದಾಗಿ ಆನ್‌ಲೈನ್‌ ಮೂಲಕ ಅತಿಥಿ ಉಪನ್ಯಾಸಕರ ಆಯ್ಕೆಪ್ರಕ್ರಿಯೆ ಕೈಬಿಡಬೇಕು ಎಂದು ಆಗ್ರಹಿಸಿದರು.

ಅತಿಥಿ ಉಪನ್ಯಾಸಕರ ಬಗ್ಗೆ ಕಾಳಜಿಯಿಲ್ಲ: ಹೋರಾಟವನ್ನು ಬೆಂಬಲಿಸಿದ ಎಸ್‌.ಡಿ.ಪಿ.ಐಮುಖಂಡ ಭಾಸ್ಕರ ಪ್ರಸಾದ್‌ ಮಾತನಾಡಿ, ರಾಜ್ಯ ಸರಕಾರಕ್ಕೆ ನಿಜವಾಗಿಯೂ ಅತಿಥಿ ಉಪನ್ಯಾಸಕರಬಗ್ಗೆ ಕಾಳಜಿಯಿಲ್ಲ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 14460 ಜನರನ್ನು ಕಾಯಂ ಮಾಡುವುದರಿಂದ ಸರಕಾರಕ್ಕೆ ವಾರ್ಷಿಕ 800-900 ಕೋಟಿ ರೂ.ಗಳ ಹೆಚ್ಚುವರಿಯಾಗಬಹುದು. 2.60 ಲಕ್ಷ ಕೋಟಿ ಬಜೆಟ್‌ನಲ್ಲಿ 1ಸಾವಿರ ಕೋಟಿ ದೊಡ್ಡದಲ್ಲ. ಸರಕಾರ ಕೂಡಲೇ ಇವರ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಡಾ.ಶಿವಣ್ಣ ತಿಮ್ಮಲಾಪುರ,ಮಂಜಣ್ಣ, ಡಾ.ಕುಮಾರ್‌, ರಂಗಧಾಮಯ್ಯ,ಗಂಗಾಂಭಿಕೆ, ಗುಡ್ಡಣ್ಣ, ಅಂಬಿಕಾ, ಸುನಿಲ್‌,ಹರೀಶ್‌, ಸುನಿಲ್‌ ಕುಮಾರ್‌, ಡಾ.ರಮೇಶ್‌, ಮೂರ್ತಿ, ರಾಧಾಮಣಿ, ಪುಷ್ಪಲತಾ ಸೇರಿದಂತೆಹಲವರು ಉಪಸ್ಥಿತರಿದ್ದರು. ದಯಮರಣ ಕೋರಿರಾಷ್ಟ್ರಪತಿಗಳಿಗೆ ಬರೆದ ಪತ್ರವನ್ನು ಅಂಚೆ ಕಚೇರಿಯಲ್ಲಿ ಪೋಸ್ಟ್‌ ಮಾಡಿದರು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.