ಹೇಮೆ ನೀರು ರಾಮನಗರಕ್ಕೆ ಹರಿಸುವುದಕ್ಕೆ ಖಂಡನೆ


Team Udayavani, Feb 22, 2019, 7:25 AM IST

heme-neeru.jpg

ತುಮಕೂರು: ಹೇಮಾವತಿ ನೀರನ್ನು ತುಮಕೂರು ಜಿಲ್ಲೆಗೆ ಬಿಡಲು ಮಲತಾಯಿ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರ ನಮ್ಮ ಪಾಲಿನ ನೀರನ್ನು ರಾಮನಗರ ಮತ್ತು ಚನ್ನಪಟ್ಟಣಕ್ಕೆ ಹರಿಸಲು ಯತ್ನಿಸುತ್ತಿರುವುದನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ನಗರದ ರಾಷ್ಟ್ರೀಯ ಹೆದ್ದಾರಿ 48ರ ಬಟವಾಡಿ ಬಳಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆ ಚಳವಳಿ ನಡೆಸಿದರು. ಜಿಲ್ಲೆಗೆ ನಿಗದಿಯಾಗಿರುವ ನೀರಿನ್ನು ಗುಬ್ಬಿ ತಾಲೂಕು, ಕಡಬ ಬಳಿಯಿಂದ ಪೈಪ್‌ಲೈನ್‌ ಮೂಲಕ ಚನ್ನಪಟ್ಟಣ ಹಾಗೂ ರಾಮನಗರಕ್ಕೆ ತೆಗೆದುಕೊಂಡು ಹೋಗುವ ಯೋಜನೆ ಮಾಡಲು ಹೊರಟು, ಸರ್ಕಾರ ಸಿದ್ಧಪಡಿಸಿ ಸಂಪುಟ ಸಭೆಯಲ್ಲಿ ಅನುಮೋದನೆಗೆ ಇಡುವ ಮಾಹಿತಿ ಇದ್ದು, ತಕ್ಷಣ ಈ ಆ ಯೋಜನೆ ಕೈ ಬಿಡಬೇಕು ಆಗ್ರಹಿಸಿದರು.

ಮರಣ ಶಾಸನ: ಈ ಪ್ರತಿಭಟನೆ ಉದ್ದೇಶಿಸಿ ಮಾಜಿ ಸಂಸದ ಜಿ.ಎಸ್‌.ಬಸವರಾಜು ಮಾತನಾಡಿ, ಜಿಲ್ಲೆಯ ನೀರಾವರಿಗೆ ಮರಣ ಶಾಸನ ಬರೆಯುವುದಕ್ಕೆ ಸಮ್ಮಿಶ್ರ ಸರ್ಕಾರ ಹೊರಟಿದ್ದು, ಹಾಸನದ ಗೋರೂರು ಡ್ಯಾಂನಿಂದ ತುಮಕೂರಿಗೆ ಬರಬೇಕಾದ ಹೇಮಾವತಿಯ 25 ಟಿಎಂಸಿ ನೀರನ್ನು ನ್ಯಾಯೋಚಿತವಾಗಿ ನೀಡದೆ, ಬರುವಂಥ ನೀರನ್ನು ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ನ ಮೂಲಕ ಕುಣಿಗಲ್‌ ಮಾರ್ಗವಾಗಿ ರಾಮನಗರ, ಚನ್ನಪಟ್ಟಣಕ್ಕೆ ಹೆಚ್ಚುವರಿಯಾಗಿ ತೆಗೆದುಕೊಂಡು ಹೋಗಲು ದೊಡ್ಡ ಹುನ್ನಾರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ, ನೀರಾವರಿ ಸಚಿವ‌ ಡಿ.ಕೆ.ಶಿವಕುಮಾರ್‌, ಶಾಸಕ ಡಾ.ರಂಗನಾಥ ಮಾಡುತ್ತಿದ್ದು, ಇವರು ತುಮಕೂರು ಜಿಲ್ಲೆಗೆ ಅನ್ಯಾಯ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಲತಾಯಿ ಧೋರಣೆ: ರೈತಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್‌.ಶಿವಪ್ರಸಾದ್‌ ಮಾತನಾಡಿ, ಹಲವು ದಶಕಗಳಿಂದ ಹಾಸನ ರಾಜಕಾರಣದ ಕುತಂತ್ರದಿಂದ ತುಮಕೂರು ಜಿಲ್ಲೆಗೆ ಅನ್ಯಾಯ ಮಾಡುತ್ತಿದ್ದು, ಈಗಲೂ ಸಮ್ಮಿಶ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಹರಿಹಾಯ್ದರು. ಪ್ರತಿಭಟನೆ ವೇಳೆ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.

ರಾಷ್ಟ್ರೀಯ ಹೆದ್ದಾರಿ ತಡೆದಿದ್ದರಿಂದ ಸಂಚಾರಕ್ಕೆ ತೊಂದರೆ ಆಗಿತ್ತು. ರಸ್ತೆ ತಡೆ ನಿಲ್ಲಿಸುವಂತೆ ಪೊಲೀಸರು ಕೇಳಿದರೂ ಪ್ರತಿಭಟನಾಕಾರರು ರಸ್ತೆ ತಡೆ ಮುಂದುವರಿಸಿದರು. ಈ ವೇಳೆಗೆ ಹೋರಾಟಗಾರರು ಮತ್ತು ಪೋಲೀಸರ ಮಧ್ಯೆ ಮಾತಿನ ಚಕಮಕಿ ನಡೆದು, ರಸ್ತೆ ತಡೆಯಲು ಹೋದ ನೂರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಯುವಮೋರ್ಚಾ ಜಿಲ್ಲಾಧ್ಯಕ್ಷ ಟಿ.ಎಚ್‌.ಹನುಮಂತರಾಜು, ಜಿಪಂ ಸದಸ್ಯ ಹುಚ್ಚಯ್ಯ, ಜಿಲ್ಲಾ ಕಾರ್ಯದರ್ಶಿ ರುದ್ರೇಶ್‌, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್‌, ರುದ್ರೇಶ್‌, ಸುರೇಶ್‌, ಶರತ್‌, ರಾಕೇಶ್‌, ರಮೇಶ್‌ ಮಗದೂರು, ವಿನಯ್‌ ಹಿರೇಹಳ್ಳಿ, ರಕ್ಷಿತ್‌, ತರಕಾರಿ ಮಹೇಶ್‌, ಬಂಬೂ ಮೋಹನ್‌, ಪುರುಷೋತ್ತಮ, ಪಾಲಿಕೆ ಸದಸ್ಯರಾದ ರಮೇಶ್‌, ಮಂಜುಳಾ, ದೀಪಾ, ಬಿ.ಜಿ.ಕೃಷ್ಣಪ್ಪ, ನವೀನ ಅರುಣ ಮುಂತಾದವರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.