ನಿಲ್ಲದ ಅಕ್ರಮ ಗಣಿಗಾರಿಕೆ, ಮರಳು ದಂಧೆ

Team Udayavani, Jul 2, 2019, 1:02 PM IST

tk-tdy-2..

ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿ ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ಮಾತನಾಡಿದರು.

ತುಮಕೂರು: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಹಾಗೂ ಮರಳು ದಂಧೆಗೆ ಸಂಬಂಧಿಸಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಹಾಗೂ ಅರಣ್ಯ ಇಲಾಖೆಗಳಿಗೆ ಸೇರಿದ ಭೂಪ್ರದೇಶವನ್ನು ಕೂಡಲೇ ಜಂಟಿ ಸರ್ವೆಗೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಕಟ್ಟುನಿಟ್ಟಿನ ಕ್ರಮ: ಅನಧಿಕೃತವಾಗಿ ನಡೆಸುವ ಕ್ರಷರ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸ ಬೇಕು. ಗುತ್ತಿಗೆ ಪಡೆದ ಕ್ವಾರಿಗಳು ಸ್ಥಳಾಂತರ ಗೊಂಡಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ವಾಹನಗಳಲ್ಲಿ ಜಲ್ಲಿ, ಮರಳು, ಅಲಂಕಾರಿಕ ಶಿಲೆ ಮತ್ತಿತರ ಖನಿಜ ಹಾಗೂ ಗಣಿಗಾರಿಕೆ ಸರಕುಗಳನ್ನು ನಿಗದಿತ ಭಾರಕ್ಕಿಂತ ಅತಿಯಾಗಿ ಹೇರಿ ಸಾಗಿಸು ವಂತಿಲ್ಲ. ಗಣಿಬಾಧಿತ ಪ್ರದೇಶಗಳಿಗೆ ಸರ್ಕಾರ ಮೀಸಲಿಟ್ಟಿರುವ ಜಿಲ್ಲಾ ಗಣಿಗಾರಿಕೆ ನಿಧಿ ಅನುದಾನ ಖರ್ಚು ಮಾಡಬೇಕೆಂದು ಅಧಿಕಾರಿಗಳಿಗೆ ರಾಜಶೇಖರ ಪಾಟೀಲ್ ಸೂಚಿಸಿದರು.

ಶಾಸಕ ಡಿ.ಸಿ.ಗೌರಿಶಂಕರ್‌ ಮಾತನಾಡಿ, ಜಿಲ್ಲೆ ಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಮರಳು ದಂಧೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿಯೇ ಇರುವುದಿಲ್ಲ. ದೂರು ನೀಡಿದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ನೆಪ ಹೇಳದೆ ಪ್ರಕರಣ ದಾಖಲಿಸಿ: ದೂರಿನ ಕರೆಗಳಿಗೆ ಕೂಡಲೇ ಸ್ಪಂದಿಸಬೇಕು ಎಂದು ಈಗಾಗಲೇ ರಾಜ್ಯಮಟ್ಟದ ಸಭೆಯಲ್ಲಿ ಅಧಿಕಾರಿ ಗಳಿಗೆ ಸೂಚಿಸಿದ್ದರೂ ಸುಧಾರಣೆ ಕಾಣದಿರುವುದು ಬೇಸರ ತಂದಿದೆ. ಹೊಸದಾಗಿ ನೇಮಕವಾಗಿರುವ ಭೂ ವಿಜ್ಞಾನಿಗಳು ಸಿಬ್ಬಂದಿ ಕೊರತೆ, ವಾಹನ ಕೊರತೆ ಎಂದು ನೆಪ ಹೇಳದೆ ಗಣಿಕಾರಿಕೆಗೆ ಸಂಬಂಧಿಸಿ ಪ್ರಕರಣ ದಾಖಲಿಸಬೇಕು ಎಂದು ಸಚಿವರು ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್‌ ಮಾತ ನಾಡಿ, ಇನ್ನೊಂದು ವಾರದೊಳಗೆ ಕಂದಾಯ ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಪ್ರದೇಶ ಸರ್ವೇ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಸಭೆಗೆ ತಿಳಿಸಿದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪಂಕಜಾ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 64 ಕ್ರಷರ್‌ಗಳಿದ್ದು, ಎಲ್ಲ ಕ್ರಷರ್‌ಗಳು ಪರ ವಾನಗಿ ಪಡೆದು ಅಧಿಕೃತವಾಗಿ ಕಾರ್ಯನಿರ್ವಹಿ ಸುತ್ತಿವೆ. ಮರಳಿಗೆ ಬೇಡಿಕೆಯಿದ್ದರೂ ಇದಕ್ಕೆ ಪರ್ಯಾಯವಾಗಿರುವ ಎಂ-ಸ್ಯಾಂಡ್‌ ಬಳಕೆ ಹೆಚ್ಚಾಗಿರುವುದರಿಂದ ಯಾವುದೇ ತೊಂದರೆ ಯಾಗುತ್ತಿಲ್ಲ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೋನವಂಶಿಕೃಷ್ಣ, ಉಪವಿಭಾಗಾಧಿಕಾರಿಗಳಾದ ಶಿವಕುಮಾರ್‌ ಹಾಗೂ ಪೂವಿತಾ, ಭೂವಿಜ್ಞಾನಿ ರೂಪ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಇಂಜಿನಿಯರ್‌ ವಿನಯ್‌ ಕುಮಾರ್‌, ಅರಣ್ಯ ಇಲಾಖೆಯ ಗಿರೀಶ್‌ ಇದ್ದರು.

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.