ಕಲ್ಪತರು ನಾಡಿನಲ್ಲಿ ಹೆಚ್ಚುತ್ತಿರುವ ಕೋವಿಡ್‌ 19

Team Udayavani, May 21, 2020, 6:58 AM IST

kalpatarau

ತುಮಕೂರು: ಕಲ್ಪತರು ನಾಡಿನಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ ವಾರ ದಿಂದ  ವಾರಕ್ಕೆ ಹೆಚ್ಚುತ್ತಿದೆ. ಬುಧವಾರ ಒಂದೇ ದಿನ ನಾಲ್ಕು ಕೋವಿಡ್‌ 19 ಸೋಂಕು ಪ್ರಕರಣ ಪತ್ತೆ ಯಾಗಿದ್ದು. ಈಗ ಸೋಂಕಿತರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ. ಹೊರ ರಾಜ್ಯ, ಹೊರ  ಜಿಲ್ಲೆಯಿಂದ ಬರುವ ಮಂದಿ ಸೋಂಕು ಹೊತ್ತು ತರುತ್ತಿದ್ದು, ಜಿಲ್ಲೆಗೆ ಹೊರ ರಾಜ್ಯ ಹೊರ ಜಿಲ್ಲೆಯಿಂದ ಬರುವರಿಂದ ರೋಗ ಹೆಚ್ಚು ವ್ಯಾಪಿಸುತ್ತಿದೆ ಎನ್ನುವ ಭೀತಿ ಹೆಚ್ಚಿದೆ.

ನಾಲ್ವರಿಗೆ ಕೋವಿಡ್‌ 19: ಹೊರ ರಾಜ್ಯದಿಂದ ಜಿಲ್ಲೆಗೆ ಬಂದವರಲ್ಲಿ ಒಂದೇ ದಿನ ನಾಲ್ಕು ಕೋವಿಡ್‌ 19 ಪಾಸಿಟಿವ್‌ ಬಂದಿವೆ. ದೆಹಲಿ, ಅಹಮದಾಬಾದ್‌, ಗುಜರಾತ್‌, ಬೆಂಗ ಳೂರು ಪಾದರಾಯನ ಪುರ ಆಯ್ತು ಈಗ ಮುಂಬೈ ನಂಟು  ಬೆಳೆದಿದ್ದು, ಮುಂಬೈನಿಂದ ಬಂದಿರುವ ನಾಲ್ವರಿಗೆ ಸೋಂಕು ಇರುವುದು ಪತ್ತೆಯಾಗಿದೆ.

ಇನ್ನೂ ಬರಬೇಕು ಲ್ಯಾಬ್‌ ವರದಿ: ಇನ್ನೂ ಲ್ಯಾಬ್‌ ವರದಿ ಬಾಕಿ ಇದ್ದು ಇನ್ನೂ ಹಲವ ರಲ್ಲಿ ಕೋವಿಡ್‌ 19 ಪಾಸಿಟಿವ್‌ ಬರುವ ಲಕ್ಷಣಗಳೇ ಹೆಚ್ಚು ಗೋಚರ ವಾಗುತ್ತಿದ್ದು ಕಿತ್ತಲೆ ವಲಯದಲ್ಲಿರುವ ತುಮಕೂರು ಕೆಂಪು ವಲಯದತ್ತ  ಹೋಗುತ್ತಿದೆಯೇ..? ಎನ್ನುವ ಆತಂಕ ಜನರನ್ನು ಕಾಡುತ್ತಿದೆ. ಪಾಸಿಟಿವ್‌ ಬಂದಿರುವ ವ್ಯಕ್ತಿಗಳು ಯಾವ ತಾಲೂಕಿನವರು ಎನ್ನುವುದನ್ನು ಜಿಲ್ಲಾಡಳಿತ  ಬಿಟ್ಟು ಕೊಟ್ಟಿಲ್ಲ,

ಈಗ ಎಂಟು ಸೋಂಕಿತ ರಿಗೂ ಜಿಲ್ಲಾ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಡಳಿತ ಎಚ್ಚರಿಕೆ: ಜಿಲ್ಲೆಯು ಆರೆಂಜ್‌ ವಯಲದಲ್ಲಿರುವುದರಿಂದ ನಾಗರೀಕರು ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಬೇಕು. ಆದ್ದರಿಂದ ಮಕ್ಕಳು, ವಯಸ್ಸಾದವರು ಮನೆಯಿಂದ ಹೊರಗಡೆ  ಹೋಗಬಾರದು. ಸಾರ್ವಜನಿಕರು ಸರ್ಕಾರದ ನಿರ್ದೇಶನ ಗಳನ್ನು ಪಾಲಿಸಿ ತಮ್ಮ ಆರೋಗ್ಯದ ಕಡೆ ಗಮನ ನೀಡಬೇಕು ಎಂದು ಜಿಲ್ಲಾಡಳಿತ ಎಚ್ಚರಿಕೆ ಮೂಡಿಸುತ್ತಿದೆ.

ಹೊರ ರಾಜ್ಯದಿಂದ ಬಂದ್ರೆ ಮಾಹಿತಿ ನೀಡಿ: ಜಿಲ್ಲೆಗೆ ಹೊರ ರಾಜ್ಯದಿಂದ ಈವರೆಗೆ 439 ಮಂದಿ ಬಂದಿದ್ದಾರೆ ಅವರು ಜಿಲ್ಲೆಗೆ ಬಂದ ತಕ್ಷಣ ಕ್ವಾರೆಂಟೈನ್‌ ಮಾಡಲಾಗುತ್ತಿದೆ. ಜಿಲ್ಲೆಯ ಜನರೊಂದಿಗೆ ಅವರ ಸಂಪರ್ಕ ಇರುವುದಿಲ್ಲ, ಅವರ  ಆರೋಗ್ಯ ಪರೀಕ್ಷೆ ನಡೆದು ಲ್ಯಾಬ್‌ನಿಂದ ನೆಗೆಟಿವ್‌ ಬಂದ ಮೇಲೆ ಮತ್ತೆ ಆರೋಗ್ಯ ತಪಾಸಣೆ ಮಾಡಿ ರೋಗದ ಯಾವುದೇ ಲಕ್ಷಣ ಇಲ್ಲ ಎಂದು ದೃಢವಾದ ಮೇಲೆ ಪ್ರಾಥಮಿಕ ಸಂಪರ್ಕ ಕಲ್ಪಿಸಲಾಗುತ್ತಿದೆ. ಹೊರ ರಾಜ್ಯದಿಂದ ಬಂದವರ  ಮಾಹಿತಿಯನ್ನು ಜಿಲ್ಲಾಡಳಿತ ಅಥವಾ ತಾಲೂಕು ಆಡಳಿತಕ್ಕೆ ತಕ್ಷಣ ನೀಡಬೇಕೆಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಮನವಿ ಮಾಡಿದ್ದಾರೆ.

ತುಮಕೂರು ಜಿಲ್ಲೆ ಸದ್ಯದ ಪರಿಸ್ಥಿತಿಯಲ್ಲಿ ಆರೆಂಜ್‌ ವಯಲದಲ್ಲಿದೆ, ಜನರು ಕೋವಿಡ್‌ 19 ಹೆಚ್ಚು ವ್ಯಾಪಿಸದಂತೆ ಜಾಗೃತಿ ವಹಿಸ ಬೇಕು. ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 15ಕ್ಕೆ ಏರಿಕೆ ಯಾಗಿದೆ. ಸಾರ್ವ ಜನಿಕರು ಸರ್ಕಾರದ ನಿರ್ದೇಶನಗಳನ್ನು ಪಾಲಿಸಿ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು. 
-ಡಾ.ಕೆ.ರಾಕೇಶ್‌ ಕುಮಾರ್‌, ಜಿಲ್ಲಾಧಿಕಾರಿ

* ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.