ಗ್ರಾಮ ಒನ್‌ಗಳಲ್ಲಿ ಆರೋಗ್ಯ ಕಾರ್ಡ್‌ ವಿತರಿಸಿ


Team Udayavani, Apr 26, 2022, 6:37 PM IST

Untitled-1

ತುಮಕೂರು: ಜಿಲ್ಲೆಯಲ್ಲಿ ಕಾರ್ಯಾರಂಭ ಮಾಡಿರುವ ಗ್ರಾಮ ಒನ್‌ ಕೇಂದ್ರಗಳಲ್ಲಿ ಬಿಪಿಎಲ್‌, ಎಪಿಎಲ್‌ ಕಾರ್ಡುದಾರರಿಗೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ (ಎಬಿಎಆರ್‌ಕೆ) ಕಾರ್ಡುಗಳನ್ನು ಆದ್ಯತೆ ಮೇರೆಗೆ ವಿತರಿಸುವ ನಿಟ್ಟಿನಲ್ಲಿ ಆಯಾ ತಹಶೀಲ್ದಾರರು ಹಾಗೂ ತಾಲೂಕು ಆರೋ ಗ್ಯಾಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್‌ ಸಭಾಂಗಣದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಸಭೆ ನಡೆಸಿ ಮಾತನಾಡಿದ ಅವರು, 15 ರಿಂದ 17 ವಯಸ್ಸಿನೊಳಗಿನವರ ಲಸಿಕಾಕರಣವು ಮುಂದುವರೆ ದಿದ್ದು, ಮೊದಲ ಡೋಸ್‌ ಶೇ.77 ಹಾಗೂ ಎರಡನೇ ಡೋಸ್‌ ಶೇ.66 ಪೂರ್ಣಗೊಂಡಿದೆ. ಲಸಿಕಾಕರಣ ತೀವ್ರಗತಿಯಲ್ಲಿ ಹೆಚ್ಚಿಸಿ ಶೇ.100ರಷ್ಟು ಪೂರ್ಣ ಗೊಳಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಶೇ.100ರಷ್ಟು ಲಸಿಕಾಕರಣ: ಕೋವಿಡ್‌ ತಡೆಗಟ್ಟು ವುದಕ್ಕಾಗಿ 12 ರಿಂದ 14 ವಯೋಮಾನದ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದ್ದು, ಮೊದಲ ಡೋಸ್‌ ಶೇ.58 ರಷ್ಟು ಪೂರ್ಣಗೊಂಡಿದೆ. ತಾಲೂಕು ವೈದ್ಯಾಧಿಕಾರಿ ಗಳು ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚು ಮಕ್ಕಳಿರುವ ಕಡೆ ಲಸಿಕಾ ಕೇಂದ್ರಗಳನ್ನು ತೆರೆದು ಶೇ.100ರಷ್ಟು ಲಸಿಕಾಕರಣ ಪೂರ್ಣಗೊಳಿಸಲು ಮುಂದಾಗಬೇಕು ಎಂದರು.

18 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿರುವ ಲಸಿಕಾಕರಣ ಮೊದಲ ಡೋಸ್‌ ಶೇ.100ರಷ್ಟು ಗುರಿ ಸಾಧಿಸಲಾಗಿದ್ದು, ಎರಡನೇ ಡೋಸ್‌ ಶೇ.100ರಷ್ಟು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಜಾಗ ಗುರುತಿಸಬೇಕು: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ನಿವೇಶನ ಒದಗಿಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಗ್ರಾಮ ಠಾಣಾಗಳಲ್ಲಿ ಖಾಲಿ ಇರುವ ಜಾಗಗಳನ್ನು ಗ್ರಾಮ ಲೆಕ್ಕಾಧಿಕಾರಿಗಳು, ಪಿಡಿಒಗಳು, ಅಂಗನವಾಡಿ ಕಾರ್ಯಕರ್ತೆಯರು ಜಾಗ ಗುರುತಿಸಬೇಕು. ನಗರ ಪ್ರದೇಶಗಳಲ್ಲಿ ಸರ್ಕಾರಿ ಕಟ್ಟಡ, ಸಮುದಾಯ ಭವನಗಳಿದ್ದಲ್ಲಿ ಅಂಗನವಾಡಿ ಕೇಂದ್ರಗಳನ್ನು ಸ್ಥಳಾಂತರಿಸಲು ಇಲ್ಲವೇ ನಿವೇಶನ ಪಡೆದುಕೊಳ್ಳಲು ಪಾಲಿಕೆ ಮತ್ತು ಟೂಡಾ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಕಂದಾಯ ಇಲಾಖೆಯ ಸುಪರ್ದಿಯಲ್ಲಿರುವ ಸರ್ಕಾರಿ ಶಾಲಾ ಕಟ್ಟಡಗಳಿರುವ ಜಾಗವನ್ನು ಶಿಕ್ಷಣ ಇಲಾಖೆಗೆ ವರ್ಗಾಯಿಸಲು ಡಿಡಿಪಿಐ ಅವರಿಂದ ಮಾಹಿತಿ ಪಡೆದು ತಹಶೀಲ್ದಾರ್‌, ತಾಪಂ ಇಒಗಳು ಕ್ರಮ ವಹಿಸಬೇಕೆಂದು ತಿಳಿಸಿದರು.

ಶೀಘ್ರ ಪ್ರಸ್ತಾವನೆ ಸಲ್ಲಿಸಿ: ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಅಂಜನಪ್ಪ ಮಾತನಾಡಿ, ವಾಜಪೇಯಿ, ಅಂಬೇಡ್ಕರ್‌, ವಸತಿ ಯೋಜನೆಗಳಡಿ ನಗರ ಸ್ಥಳೀಯ ಸಂಸ್ಥೆಗಳಿಂದ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು. ಈವರೆಗೂ ಪೂರ್ಣ ಪ್ರಮಾಣದಲ್ಲಿ ಪ್ರಸ್ತಾವನೆ ಸಲ್ಲಿಸದಿರುವ ನಗರ ಸ್ಥಳೀಯ ಸಂಸ್ಥೆಗಳು ಶೀಘ್ರ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಭೂಮಿ ಪೆಂಡೆನ್ಸಿ ಪ್ರಗತಿ ಪರಿಶೀಲನೆ, ಪೈಕಿ-ಪಹಣಿ ಒಟ್ಟುಗೂಡಿಸುವಿಕೆ, 3/9 ಮಿಸ್‌ಮ್ಯಾಚ್‌, ಸ್ಮಶಾನ ಹಾಗೂ ವಿವಿಧ ಉದ್ದೇಶಗಳಿಗೆ ಸರ್ಕಾರಿ ಜಮೀನು ಕಾಯ್ದಿರಿಸುವುದು, ಸಾಮಾಜಿಕ ಭದ್ರತಾ ಯೋಜನೆ, ರೈಲ್ವೆ ಯೋಜನೆ, ಎತ್ತಿನಹೊಳೆ ಯೋಜನೆ, ಭೂ- ಸ್ವಾಧೀನ ಪ್ರಗತಿಯ ಬಗ್ಗೆ ಸಭೆಯಲ್ಲಿ ಚರ್ಚಿಸ ಲಾಯಿತು.

ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ.ಅಜಯ್‌, ಪಾಲಿಕೆ ಆಯುಕ್ತೆ ರೇಣುಕಾ, ತಹಶೀಲ್ದಾರ್‌ ಮೋಹನ್‌ ಕುಮಾರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾ.ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.