ರೈತರ ಜೀವನ ಮಟ್ಟ ಸುಧಾರಿಸಲಾಗದೆ ಇರುವುದು ದುರದೃಷ್ಟಕರ : ಡಾ.ಜಿ.ಪರಮೇಶ್ವರ್

ಹೀಗೆಯಾದರೆ ಸಾಮಾನ್ಯ ರೈತನ ಪಾಡೇನು?

Team Udayavani, Nov 2, 2022, 10:02 PM IST

1-was-g

ಕೊರಟಗೆರೆ: ಭಾರತದಲ್ಲಿ ರೈತರು ದೇಶದ ಆರ್ಥಿಕತೆಗೆ ಶೇ25% ಕೊಡಿಗೆ ನೀಡಿ ಜಿಡಿಪಿ ಹೆಚ್ಚಿಸುತ್ತಿದ್ದರೂ ಅವರ ಜೀವನ ಮಟ್ಟವನ್ನು ಸುಧಾರಿಸಲು ಸಾಧ್ಯವಾಗದೆ ಇರುವುದು ದುರದೃಷ್ಟಕರ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ಹೇಳಿದರು.

ತಾಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಗ್ರಾಮದಲ್ಲಿ ಬೆಂಗಳೂರು ಕೃಷಿ ವಿದ್ಯಾನಿಲಯದಿಂದ ಏರ್ಪಡಿಸಿದ್ದ ಕೃಷಿ ಸಂಗಮ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿ, ಕೃಷಿ ಕ್ಷೇತ್ರ ಅಧುನಿಕ ಬೆಳೆಗಳ ನೂತನ ವಿವಿಧ ತಳಿಗಳ ಅವಿಷ್ಕಾರ ತಂತ್ರಜ್ಞಾನದಿಂದ ಉತ್ತಮಗೊಂಡಿದೆ, ರೈತರು ಹಿಂದೆ ಎಕರೆವಾರು ಬೆಳೆಯುವ ಬೆಳೆಗಿಂತ ಈಗ 5ಪಟ್ಟು ಹೆಚ್ಚು ಆಹಾರ ಉತ್ಪಾದಿಸುತ್ತಿದ್ದಾರೆ, ಜನಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿದ್ದಾರೂ ಆಹಾರ ಕೊರತೆ ಅತಿ ಕಡಿಮೆ ಇದೆ, ಇದು ನಮ್ಮ ಕೃಷಿ ವಿಜ್ಞಾನಿಗಳ ಸಾಧನೆ ಮತ್ತು ರೈತರ ಶ್ರಮದಿಂದ ಸಾದ್ಯವಾಗುತ್ತಿದೆ ಎಂದರು.

ಇತ್ತೀಚೆಗೆ ಬೆಳೆ ಬೆಳೆಯುವ ರೈತರಿಗೆ ಕೃಷಿ ಚಟುವಟಿಕೆ ಮತ್ತು ಉತ್ಪನ್ನಗಳ ವೆಚ್ಚ ಅತ್ಯಂತ ದುಬಾರಿಯಾಗಿದೆ, ಇದರೊಂದಿಗೆ ಅವರ ಶ್ರಮದ ದಿನಗಳು ಸೇರುತ್ತವೆ, ಹವಾಮಾನ ವೈಪರಿತ್ಯದಿಂದ ಅವರ ಬದುಕು ದುಸ್ತರಕ್ಕೆ ಬಿದ್ದು ಸಾವಿನವರೆಗೂ ಹೋಗುತ್ತಿದೆ, ಇದಕ್ಕಿಂತ ದೊಡ್ಡ ಸಮಸ್ಯೆ ಬೆಳೆದಂತಹ ಬೆಳೆಗೆ ಬೆಂಬಲ ಬೆಲೆ ಇಲ್ಲದಿರುವುದು ಈ ಎಲ್ಲಾ ಸಮಸ್ಯೆಗಳಿಂದ ನಮಗೆ ಅನ್ನ ನೀಡುವ ರೈತ ಬದುಕು ನಿರ್ದಿಷ್ಟವಲ್ಲದಿದ್ದು ಇದರ ಪರಿಹಾರಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರಿಯಾದ ಮಾರ್ಗಸೂಚಿ, ರೈತ ಪರ ನಿಯಮವನ್ನು ಜಾರಿಗೆ ತರಬೇಕಿದೆ. ರೈತರು ಸಹ ಕೃಷಿಯಲ್ಲಿ ಅಂತರ ಬೆಳೆ ಮತ್ತು ಮಿಶ್ರ ಬೆಳೆ ಬೇಸಾಯದೋಂದಿಗೆ ಹೈನುಗಾರಿಕೆ ಮಾಡಿದರೆ ಅವರ ಜೀವನ ಸುಧಾರಿಸುತ್ತದೆ ಎಂದರು.

ನಾನು ಪಿಯುಸಿ. ವಿಜ್ಞಾನ ವಿದ್ಯಾಭ್ಯಾಸ ಪೂರ್ಣಗೊಳಿಸಿದಾಗ ನನಗೆ ಮೆಡಿಕಲ್, ಇಂಜಿಯರಿಂಗ್ ಪದವಿ ದೊರೆಯುವ ಅವಕಾಶವಿದ್ದರೂ, ಬೆಂಗಳೂರು ಕೃಷಿ ವಿದ್ಯಾಲಯದಲ್ಲಿ ಕೃಷಿ ಪದವಿ ವ್ಯಾಸಾಂಗ ಮಾಡಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ ಆಸ್ಟೇಲಿಯಾ ದೇಶದಲ್ಲಿ ಕೃಷಿ ಪಿಹೆಚ್‌ಡಿ ಪಡೆದೆ, ನಾನು ಅಂದು ಜಿಕೆವಿಕೆಯ ಕ್ರೀಡೆಯಲ್ಲಿ 100ಮೀ ಓಟದ ಸ್ಪರ್ಧೆಯಲ್ಲಿ ದಾಖಲೆ ಮಾಡಿದ್ದು ಈಗಲೂ ಹಾಗೆ ಇದೆ. ನಾನು ರಾಜಕಾರಣ ಮತ್ತು ವಿದ್ಯಾವಲಯದಲ್ಲಿ ಇದ್ದರೂ ಈಗಲೂ ನಮ್ಮ ಜಮೀನಿನಲ್ಲಿ ನೂರಾರು ಕ್ವಿಂಟಲ್ ಬೆಳೆ ಬೆಳೆಯುತ್ತೇನೆ, ಆದರೆ ಬೆಳೆದ ಆಹಾರವನ್ನು ಎಪಿಎಂಸಿಗೆ ಹಾಕಿ ವರ್ಷವಾದರೂ ಇಲ್ಲಿಯವರೆಗೆ ಹಣ ಪಾವತಿಯಾಗಿಲ್ಲ ಹೀಗೆಯಾದರೆ ಸಾಮಾನ್ಯ ರೈತನ ಪಾಡೇನು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅದ್ಯಕ್ಷೆ ಸುನಂದ, ತಹಶೀಲ್ದಾರ್ ನಾಹಿದಾ ಜಮ್ ಜಮ್, ಕೆ.ಪಿ.ಸಿ.ಸಿ ಸದಸ್ಯ ಎ.ಡಿ.ಬಲರಾಮಯ್ಯ, ತುಮುಲ್ ನಿರ್ದೇಶಕ ಈಶ್ವರಯ್ಯ, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕೋಡ್ಲಹಳ್ಳಿ ಅಶ್ವಥನಾರಾಯಣ, ಕೃಷಿ ಅಧಿಕಾರಿ ನಾಗರಾಜು, ರೇಷ್ಮೆ ಅಧಿಕಾರಿ ಮುರಳಿ, ಪಶು ವೈದ್ಯಾಧಿಕಾರಿ ಸಿದ್ದನಗೌಡ, ಜಿಲ್ಲಾ ಪಂಚಾಯಿತಿ ಇಲಾಖೆಯ ಎ,ಇ.ಇ. ರವಿಕುಮಾರ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.