ಶಿರಾದಲ್ಲಿ ರಂಗೇರಿದ ಜೆಡಿಎಸ್‌ ಪ್ರಚಾರ

ಕ್ಷೇತ್ರದಲ್ಲೇ ಬೀಡುಬಿಟ್ಟಿರುವ ವರಿಷ್ಠ ಎಚ್‌.ಡಿ.ದೇವೇಗೌಡರು

Team Udayavani, Oct 25, 2020, 5:52 PM IST

t-ktdy-1

ತುಮಕೂರು: ರಾಜ್ಯದಗಮನ ಸೆಳೆದಿರುವ ಶಿರಾ ವಿಧಾನ ಸಭೆಯ ಉಪಚುನಾವಣೆ ಪ್ರಚಾರದ ಕಾವು ದಿನೇ ದಿನೆ ರಂಗೇರುತ್ತಲೇ ಇದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಚುನಾವಣಾ ದಿನಾಂಕ ಆರಂಭವಾದಾಗಿನಿಂದ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿವೆ. ಈಗ ಜೆಡಿಎಸ್‌ ತನ್ನ ಪ್ರಚಾರದ ಭರಾಟೆಯನ್ನು ಆರಂಭಿಸಿದೆ.

ಜೆಡಿಎಸ್‌ ಭದ್ರ ಕೋಟೆ ಉಳಿಸಿ ಕೊಳ್ಳಲು ಯತ್ನ: ಶಿರಾ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಬಿಟ್ಟರೆ ಇಲ್ಲಿ ಜೆಡಿಎಸ್‌ ಪಕ್ಷವೇ ಇಲ್ಲಿ ಪ್ರಾಬಲ್ಯ ಈ ಕ್ಷೇತ್ರದಲ್ಲಿ ತಮ್ಮದೇಆದ ದೊಡ್ಡ ಪಡೆ ಯನ್ನು ಹೊಂದಿರುವ ಜೆಡಿಎಸ್‌ ತನ್ನ ಪಡೆಯನ್ನು ಗಟ್ಟಿ ಮಾಡಲು ಹೊರಟಿದೆ.

ಅನುಕಂಪ ಪಡೆಯಲು ಮುಂದಾದ ಜೆಡಿಎಸ್‌: ಕಳೆದ 2018ರಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿ ಬಿ.ಸತ್ಯನಾರಾಯಣ ಗೆಲುವು ಸಾಧಿಸಿದ್ದರು, ಆದರೆ ಅಕಾಲಿಕ ಮರಣ ದಿಂದ ತೆರವಾಗಿರು ಸ್ಥಾನಕ್ಕೆ ಉಪ ಚುನಾವಣೆ ಎದುರಾಗಿದೆ. ಜೆಡಿಎಸ್‌ ಈ ಉಪಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಬಿ.ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ, ಈ ಮೂಲಕ ಕ್ಷೇತ್ರದ ಜನರ ಅನುಕಂಪ ಪಡೆಯಲು ಜೆಡಿಎಸ್‌ ಪಕ್ಷ ಮುಂದಾಗಿದೆ.

ಅಭ್ಯರ್ಥಿ ಗೆಲ್ಲಿಸಲು ದೊಡ್ಡಗೌಡರ ಠಿಕಾಣಿ: ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಜೆಡಿಎಸ್‌ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕ್ಷೇತ್ರದಲ್ಲಿಯೇ ಬೀಡು ಬಿಟ್ಟಿದ್ದಾರೆ. ಒಂದು ವಾರಗಳ ಕಾಲ ಕ್ಷೇತ್ರದಲ್ಲಿಯೇ ಇದ್ದು ತಮ್ಮ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಹಳ್ಳಿ ಹಳ್ಳಿಗೆ ಸುತ್ತಿ ಮತದಾರರ ಮನಗೆದ್ದು ಅಭ್ಯರ್ಥಿ ಮೇಲೆನ ಅನುಕಂಪವನ್ನು ಗಟ್ಟಿ ಗೊಳಿಸುವ ಪ್ರಯತ್ನ ಮಾಡಲಿದ್ದಾರೆ.

ಜೆಡಿಎಸ್‌ ನಿಂದ ಚುರುಕಾದ ಪ್ರಚಾರ: ಶಿರಾ ವಿಧಾನ ಸಭಾ ಉಪ ಚುನಾವಣೆ ಪ್ರಚಾರ ಕಾರ್ಯ ಆರಂಭ ವಾದಾಗಿನಿಂದಲೂ ನಿರೀಕ್ಷೆಯಷ್ಟು ಚುರುಕಾಗದ ಜೆಡಿಎಸ್‌ ಪಕ್ಷದ ಚುನಾವಣಾ ಪ್ರಚಾರ ಈಗ ಚುರುಕು ಗೊಂಡಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರ ಸ್ವಾಮಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸೇರಿದಂತೆ ಜೆಡಿಎಸ್‌ ನ ಘಟಾನು ಘಟಿ ನಾಯಕರು ಜೆಡಿಎಸ್‌ ಅಭ್ಯರ್ಥಿ ಅಮ್ಮಾಜಮ್ಮ ಅವರ ಪರವಾಗಿ ಬಹಿರಂಗ ಸಭೆ ನಡೆಸಿ ಪ್ರಚಾರ ಆರಂಭ ಮಾಡಿದ್ದು ಮತಾರರ ಮನಗೆಲ್ಲುವ ಪ್ರಯತ್ನ ಮಾಡುತ್ತಿದ್ದಾರೆ.

ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ಅಮ್ಮಾಜಮ್ಮ : ದಿ.ಶಾಸಕ ಬಿ.ಸತ್ಯನಾರಾಯಣ ಅವರ ನಿಧನ ದಿಂದ ತೆರವಾಗಿರುವ ಸ್ಥಾನಕ್ಕೆ ಅವರ ಪತ್ನಿ ಅಮ್ಮಾಜಮ್ಮ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಶಿರಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಂದು ವರಿಷ್ಠರು ಘೋಷಣೆ ಮಾಡಿದ ದಿನದಿಂದ ಕೋವಿಡ್ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಮ್ಮಾಜಮ್ಮ ಅವರು ಸ್ವತಃ ನಾಮಪತ್ರ ಸಲ್ಲಿಸಲೂ ಸಾಧ್ಯವಾಗದೇ ಅವರ ಪರವಾಗಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಮತ್ತು ರಾಜ್ಯ ಜೆಡಿಎಸ್‌ ಅಧ್ಯಕ್ಷ ಎಚ್‌.ಕೆ.ಕುಮಾರ ಸ್ವಾಮಿ ನಾಮಪತ್ರ ಸಲ್ಲಸಿದ್ದರು.

ಈಗ ಕೋವಿಡ್  ದಿಂದ ಮುಕ್ತರಾಗಿರುವ ಅಮ್ಮಾ  ಜಮ್ಮ ಚುನಾವಣಾ ಪ್ರಚಾರದ ಕಣಕ್ಕೆ ಧುಮಿಕಿದ್ದಾರೆ. ಕ್ಷೇತ್ರಾತ್ಯಂತ ಬಿರುಸುನ ಪ್ರಚಾರ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ತಮ್ಮ ಪತಿ ಬಿ.ಸತ್ಯನಾರಾಯಣ ಅವರ ಜನಪರ ಸೇವೆ ನನಗೆ ವರವಾಗಲಿದೆ, ಶಿರಾ ಕ್ಷೇತ್ರದ ಮತದಾರರು ನಮ್ಮ ಕುಟುಂಬವನ್ನು ಕೈಬಿಡುವುದಿಲ್ಲ ಎನ್ನುವ ನಂಬಿಕೆ ಮೇಲೆ ಮತಯಾಚನೆ ಮಾಡುತ್ತಿದ್ದಾರೆ.

ಘಟಾನುಘಟಿಗಳಿಂದ ಪ್ರಚಾರ :  ಶಿರಾ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಅಮ್ಮಾಜಮ್ಮ ಸತ್ಯನಾರಾಯಣ ಅವರನ್ನು ಗೆಲ್ಲಿಸಲು ಜೆಡಿಎಸ್‌ ನ ಎಲ್ಲಾ ಮುಖಂಡರು ಒಗ್ಗಟ್ಟಾಗಿ ಕೆಲಸಮಾಡಲು ಮುಂದಾಗಿದ್ದಾರೆ. ಶಾಸಕ ಡಿ.ಸಿ. ಗೌರಿಶಂಕರ್‌, ಮಾಜಿ ಸಚಿವ ಶಾಸಕ ಎಚ್‌.ಡಿ. ರೇವಣ್ಣ, ಸಂಸತ್‌ ಸದಸ್ಯ ಪ್ರಜ್ವಲ್‌ ರೇವಣ್ಣ, ಜೆಡಿಎಸ್‌ ಯುವ ಮುಖಂಡ ನಿಖೀಲ್‌ ಕುಮಾರ ಸ್ವಾಮಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರ ಸ್ವಾಮಿ, ವಿ.ಪ. ಸದಸ್ಯ ತಿಪ್ಪೇಸ್ವಾಮಿ, ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಆಂಜನಪ್ಪ, ನಾಗರಾಜ್‌, ಬೆಳ್ಳಿ ಲೋಕೇಶ್‌, ಅಮ್ಮಾಜಮ್ಮ ಅವರ ಪುತ್ರ ಸತ್ಯ ಪ್ರಕಾಶ್‌, ಜಿಪಂ ಮಾಜಿ ಉಪಾಧ್ಯಕ್ಷ ಮುದಮಡು ರಂಗಸ್ವಾಮಯ್ಯ ಸೇರಿದಂತೆ ಅನೇಕ ಜೆಡಿಎಸ್‌ ಮುಖಂಡರು ಪ್ರಚಾರದಲ್ಲಿ ನಿರತರಾಗಿದ್ದಾರೆ.

ಶಿರಾ ಕ್ಷೇತ್ರದ ಅಭಿವೃದ್ಧಿಗೆ ಬಿ.ಸತ್ಯನಾರಾಯಣ ಅವರು ಶ್ರಮಿಸುತ್ತಿದ್ದರು. ಆದರೆ ಅವರು ಅಕಾಲಿಕವಾಗಿ ಮೃತಪಟ್ಟಿದ್ದಾರೆ. ಈ ಕ್ಷೇತ್ರದ ಅಭಿವೃದ್ಧಿಗೆ ಸತ್ಯನಾರಾಯಣ ಅವರು ಅಪಾರ ಕನಸು ಕಟ್ಟಿದ್ದರು, ಆ ಕನಸ್ಸನ್ನು ನನಸು ಮಾಡಲು ಜೆಡಿಎಸ್‌ ನನಗೆ ಟಿಕೆಟ್‌ ನೀಡಿದೆ. ತಾವೆಲ್ಲ ಈ ಚುನಾವಣೆಯಲ್ಲಿ ನಮ್ಮ ಕೈ ಹಿಡಿದು ಮುಂದೆ ನಡೆಸಿ ಎಂದು ಮತದಾರರಲ್ಲಿ ಬೇಡುತ್ತೇನೆ. ಅಮ್ಮಾಜಮ್ಮ ಸತ್ಯನಾರಾಯಣ, ಜೆಡಿಎಸ್‌ ಅಭ್ಯರ್ಥಿ

 

-ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.